AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿ ಮೋಹನ್ ದಾಸ್ ಪೈ ಟ್ವೀಟ್​ಗೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ಷೇಪ

ಉದ್ಯಮಿ ಟಿವಿ ಮೋಹನ್ ದಾಸ್ ಪೈ ಅವರು ಬೆಂಗಳೂರಿನಲ್ಲಿ ಉದ್ಯಮ ಪೂರಕ ವಾತಾವರಣದ ಬಗ್ಗೆ ಮಾಡಿರುವ ಟ್ವೀಟ್​​ ಈಗ ಸಚಿವ ಪ್ರಿಯಾಂಕ್ ಖರ್ಗೆ ಅವರ ಕೆಂಗಣ್ಣಿಗೆ ಗುರಿಯಾಗಿದೆ. ಪೈ ಅವರ ಟ್ವೀಟ್​ ಬಗ್ಗೆ ಖರ್ಗೆ ಖಾರವಾದ ಪ್ರತಿಕ್ರಿಯೆ ನೀಡಿದ್ದು, ಕರ್ನಾಟಕ ವಿರೋಧಿ ಹೇಳಿಕೆಗಳನ್ನು ನೀಡಬೇಡಿ ಎಂದಿದ್ದಾರೆ.

ಉದ್ಯಮಿ ಮೋಹನ್ ದಾಸ್ ಪೈ ಟ್ವೀಟ್​ಗೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ಷೇಪ
ಪ್ರಿಯಾಂಕ್ ಖರ್ಗೆ & ಮೋಹನ್ ದಾಸ್ ಪೈ
Follow us
ಪ್ರಸನ್ನ ಗಾಂವ್ಕರ್​
| Updated By: Ganapathi Sharma

Updated on: Nov 29, 2023 | 3:40 PM

ಬೆಂಗಳೂರು, ನವೆಂಬರ್ 29: ಬೆಂಗಳೂರಿನಲ್ಲಿ ಐಟಿ ಉದ್ಯಮಕ್ಕೆ ಪೂರಕ ವಾತಾವರಣ ಕಲ್ಪಿಸಿಕೊಡುವಲ್ಲಿ ಸರ್ಕಾರ ವಿಫಲವಾಗುತ್ತಿದೆ ಎಂಬರ್ಥದಲ್ಲಿ ಉದ್ಯಮಿ ಟಿವಿ ಮೋಹನ್​ ದಾಸ್ ಪೈ (TV Mohandas Pai) ಮಾಡಿರುವ ಟ್ವೀಟ್​ಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೋಹನ್ ದಾಸ್ ಪೈಗೆ ಮಾಹಿತಿ ಕೊರತೆ ಇದೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಒಂದೇ ಒಂದು ಕಂಪನಿ ಕರ್ನಾಟಕ ಬಿಟ್ಟು ಹೋಗಿಲ್ಲ. ಕೆಲವರಿಗೆ ಕರ್ನಾಟಕ ವಿರೋಧಿ ಹೇಳಿಕೆ ನೀಡುವುದು ಹವ್ಯಾಸವಾಗಿಬಿಟ್ಟಿದೆ. ಪದೇ ಪದೇ ಈ ರೀತಿ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಇದೇ ಮೋಹನ್ ದಾಸ್ ಪೈ ಬೇರೆ ಬೇರೆ ರಾಜ್ಯಗಳ ಕಂಪನಿಗೆ ಬಂಡವಾಳ ಹೂಡಿಕೆ ಮಾಡುವುದಿಲ್ಲವೇ? ಅವರು ಡೈವರ್ಸಿಫಿಕೇಷನ್ ಮಾಡಿದ್ರೆ ಸರಿ, ಬೇರೆಯವರು ಮಾಡಿದ್ರೆ ತಪ್ಪಾ? ಕನ್ನಡಿಗರ ಪರವಾಗಿ ಮಾತನಾಡುವುದು ಬಿಟ್ಟು ಈ ರೀತಿ ಮಾತನಾಡಬಾರದು. ಅವರು ಒಂದೇ ಒಂದು ಕಂಪನಿಯ ಉದಾಹರಣೆ ನೀಡಲಿ ನೋಡೋಣ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾಕುವುದು ಬೇಡ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಇವರೇ (ಮೋಹನ್ ದಾಸ್ ಪೈ) ಅಲ್ವಾ ಎಲ್ಲ ವಿಷನ್ ಗ್ರೂಪ್​​​ನಲ್ಲಿ ಇದ್ದವರು? ಫಿಲಿಪ್ಸ್ ಇನೊವೇಶನ್ ರಾಜ್ಯಕ್ಕೆ ಬಂದಾಗ ಇವರು ಬೆನ್ನು ತಟ್ಟಿದ್ದರೇ? ಸಕಾರಾತ್ಮಕವಾಗಿ ಎಲ್ಲರ ಅಭಿಪ್ರಾಯ ಸಂಗ್ರಹ ಮಾಡ್ತೇವೆ. ಅವರ ಮಾತುಗಳಿಂದ ನಮಗೆ ರಾಜ್ಯಕ್ಕೆ ಬಂಡವಾಳ ಬರುತ್ತದೆ ಎಂದು ಭಾವಿಸುತ್ತೇವೆ. ಪದೇ ಪದೇ ಯಾಕೆ ಹೀಗೆ ನೆಗೆಟಿವ್ ಆಗಿ ಮಾತನಾಡ್ತಾರೆ ಗೊತ್ತಿಲ್ಲ. ಯಾವ ಬಂಡವಾಳ ಕೂಡ ರಾಜ್ಯದಿಂದ ವಾಪಸ್ ಹೊರಗಡೆ ಹೋಗಿಲ್ಲ. ಸರ್ಕಾರಕ್ಕೆ ಬ್ಲ್ಯಾಕ್ ಮೇಲ್ ಮಾಡುವಂತ ವ್ಯಕ್ತಿ ಅವರಲ್ಲ. ಆದರೆ ಪದೇ ಪದೇ ಕರ್ನಾಟಕ ವಿರೋಧಿ ನಿಲುವು ತಾಳಬಾರದು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ: ಉದ್ಯಮಿ ಟಿವಿ ಮೋಹನ್ ದಾಸ್ ಪೈ ಟ್ವೀಟ್​ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಹೀಗಿತ್ತು

ಮೋಹನ್ ದಾಸ್ ಪೈ ಟ್ವೀಟ್ ಹೀಗಿದೆ

‘ಐಟಿ ನಗರವೆಂಬ ಬೆಂಗಳೂರಿನ ಹೆಗ್ಗಳಿಕೆ ಹೈದರಾಬಾದ್ ಪಾಲಾಗುವುದೇ? ಕಳೆದ 10 ವರ್ಷಗಳಿಂದ ಸತತವಾಗಿ ಬೆಂಗಳೂರನ್ನು ನಿರ್ಲಕ್ಷಿಸುತ್ತಿರುವುದು ಇದಕ್ಕೆ ಕಾರಣವಾಗಿದೆ. ನಗರವನ್ನು ಸುಧಾರಿಸಲು ಸರ್ಕಾರವು ಹೆಚ್ಚು ಒತ್ತು ನೀಡಲಿದೆ ಎಂಬುದಾಗಿ ಭಾವಿಸುತ್ತೇವೆ’ ಎಂದು ಮೋಹನ್ ದಾಸ್ ಪೈ ಟ್ವೀಟ್ ಮಾಡಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಆಫ್ ಕರ್ನಾಟಕ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಟ್ಯಾಗ್ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ