AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ದಾಳಿ ವೇಳೆ ಕಂತೆ-ಕಂತೆ ಹಣ ಪತ್ತೆ: ಅ.16 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾದ ಬಿಜೆಪಿ

ಕಾಂಗ್ರೆಸ್​ ಅಧಿಕಾರಕ್ಕೆ ಬಂದ ನಂತರ ಅಧಿಕಾರಿಗಳಿಗೆ ರೇಟ್ ಫಿಕ್ಸ್​​ ಮಾಡಿದ್ದಾರೆ. ಕಲಾವಿದರಿಂದಲೂ ಕಮಿಷನ್ ಕೇಳುತ್ತಿದ್ದಾರೆ, ಇದು ಎಟಿಎಂ ಸರ್ಕಾರವಾಗಿದೆ. ಸರ್ಕಾರದ ಗುತ್ತಿಗೆದಾರರಿಗೆ 650 ಕೋಟಿ ರೂ. ಬಿಡುಗಡೆ ಮಾಡಿದೆ. ಬಿಲ್ ಪಾವತಿ ಬಳಿಕ ಐಟಿ ದಾಳಿಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ. ಐಟಿ ದಾಳಿಯಲ್ಲಿ ಸಿಕ್ಕ ಹಣಕ್ಕೂ ಕಾಂಗ್ರೆಸ್​​ ಪಕ್ಷಕ್ಕೂ ಸಂಬಂಧವಿದೆ ಎಂದು ನಳಿನ್​ ಕುಮಾರ್​ ಕಟೀಲ್​ ಹೇಳಿದರು.

ಐಟಿ ದಾಳಿ ವೇಳೆ ಕಂತೆ-ಕಂತೆ ಹಣ ಪತ್ತೆ:  ಅ.16 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾದ ಬಿಜೆಪಿ
ಬಿಜೆಪಿ ಪ್ರತಿಭಟನೆ
Anil Kalkere
| Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 15, 2023 | 3:10 PM

Share

ಬೆಂಗಳೂರು, ಅ.15: ಐಟಿ ದಾಳಿ ವೇಳೆ ಕೋಟ್ಯಂತರ ಹಣ ಪತ್ತೆ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ‌(ಅ.16) ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ನಿರ್ಧಾರ‌ ಮಾಡಲಾಗಿದೆ. ಈ ಹಿನ್ನಲೆ ಇಂದು(ಅ.15) ಬಿಜೆಪಿ ಕಚೇರಿಯಲ್ಲಿ‌ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್​ ಕುಮಾರ್​ ಕಟೀಲ್(Nalin Kumar Kateel)  ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಈ ವೇಳೆ ನಾಳಿನ ‌ಪ್ರತಿಭಟನೆಯ ರೂಪರೇಷೆ ಹಾಗೂ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಇನ್ನು ಸಭೆಯ ಬಳಿಕ ಮಾತನಾಡಿದ ನಳಿನ್​ ಕುಮಾರ್​ ಕಟೀಲ್​ ‘ಕರ್ನಾಟಕದಲ್ಲಿ ಲೂಟಿ ಸರ್ಕಾರ ಜಾರಿಯಲ್ಲಿದೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯಿಂದ ಸರ್ಕಾರದ ವಿರುದ್ಧ ನಾಳೆ, ನಾಡಿದ್ದು ಪ್ರತಿಭಟನೆ

ಹೌದು, ಬೆಂಗಳೂರಿನಲ್ಲಿ ಸಭೆಯ ಬಳಿಕ ಮಾತನಾಡಿ ‘ಕಾಂಗ್ರೆಸ್​ ಅಧಿಕಾರಕ್ಕೆ ಬಂದ ನಂತರ ಅಧಿಕಾರಿಗಳಿಗೆ ರೇಟ್ ಫಿಕ್ಸ್​​ ಮಾಡಿದ್ದಾರೆ. ಕಲಾವಿದರಿಂದಲೂ ಕಮಿಷನ್ ಕೇಳುತ್ತಿದ್ದಾರೆ, ಇದು ಎಟಿಎಂ ಸರ್ಕಾರವಾಗಿದೆ. ಸರ್ಕಾರದ ಗುತ್ತಿಗೆದಾರರಿಗೆ 650 ಕೋಟಿ ರೂ. ಬಿಡುಗಡೆ ಮಾಡಿದೆ. ಬಿಲ್ ಪಾವತಿ ಬಳಿಕ ಐಟಿ ದಾಳಿಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ. ಐಟಿ ದಾಳಿಯಲ್ಲಿ ಸಿಕ್ಕ ಹಣಕ್ಕೂ ಕಾಂಗ್ರೆಸ್​​ ಪಕ್ಷಕ್ಕೂ ಸಂಬಂಧವಿದೆ. ಈ ಹಿನ್ನಲೆ ಸರ್ಕಾರದ ವಿರುದ್ಧ ನಾಳೆ ಮತ್ತು ನಾಡಿದ್ದು ಪ್ರತಿಭಟನೆ ಮಾಡುತ್ತೇವೆ. ನೈತಿಕ ಹೊಣೆಹೊತ್ತು ಸಿಎಂ ಮತ್ತು ಡಿಸಿಎಂ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:ಸತತ 42 ಗಂಟೆಗಳ ಬಳಿಕ ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ಐಟಿ ದಾಳಿ ಅಂತ್ಯ: ವಿಚಾರಣೆಗೆ ಹಾಜರಾಗುವಂತೆ ನೋಟಿಸ್​​

ಇನ್ನು ಈ ಹಣ ಲೂಟಿ ಹೊಡೆದ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ಜಿಲ್ಲೆಗಳಲ್ಲಿ ಮತ್ತು ನಾಡಿದ್ದು ಮಂಡಲಗಳಲ್ಲಿ ಬೃಹತ್ ಹೋರಾಟ ಮಾಡಲಿದ್ದೇವೆ ಎಂದಿದ್ದಾರೆ. ಇನ್ನು ಈ ಸಭೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರಾದ ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಇನ್ನು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Sun, 15 October 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ