ಐಟಿ ದಾಳಿ ವೇಳೆ ಕಂತೆ-ಕಂತೆ ಹಣ ಪತ್ತೆ: ಅ.16 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾದ ಬಿಜೆಪಿ

ಕಾಂಗ್ರೆಸ್​ ಅಧಿಕಾರಕ್ಕೆ ಬಂದ ನಂತರ ಅಧಿಕಾರಿಗಳಿಗೆ ರೇಟ್ ಫಿಕ್ಸ್​​ ಮಾಡಿದ್ದಾರೆ. ಕಲಾವಿದರಿಂದಲೂ ಕಮಿಷನ್ ಕೇಳುತ್ತಿದ್ದಾರೆ, ಇದು ಎಟಿಎಂ ಸರ್ಕಾರವಾಗಿದೆ. ಸರ್ಕಾರದ ಗುತ್ತಿಗೆದಾರರಿಗೆ 650 ಕೋಟಿ ರೂ. ಬಿಡುಗಡೆ ಮಾಡಿದೆ. ಬಿಲ್ ಪಾವತಿ ಬಳಿಕ ಐಟಿ ದಾಳಿಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ. ಐಟಿ ದಾಳಿಯಲ್ಲಿ ಸಿಕ್ಕ ಹಣಕ್ಕೂ ಕಾಂಗ್ರೆಸ್​​ ಪಕ್ಷಕ್ಕೂ ಸಂಬಂಧವಿದೆ ಎಂದು ನಳಿನ್​ ಕುಮಾರ್​ ಕಟೀಲ್​ ಹೇಳಿದರು.

ಐಟಿ ದಾಳಿ ವೇಳೆ ಕಂತೆ-ಕಂತೆ ಹಣ ಪತ್ತೆ:  ಅ.16 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾದ ಬಿಜೆಪಿ
ಬಿಜೆಪಿ ಪ್ರತಿಭಟನೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Oct 15, 2023 | 3:10 PM

ಬೆಂಗಳೂರು, ಅ.15: ಐಟಿ ದಾಳಿ ವೇಳೆ ಕೋಟ್ಯಂತರ ಹಣ ಪತ್ತೆ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ‌(ಅ.16) ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ನಿರ್ಧಾರ‌ ಮಾಡಲಾಗಿದೆ. ಈ ಹಿನ್ನಲೆ ಇಂದು(ಅ.15) ಬಿಜೆಪಿ ಕಚೇರಿಯಲ್ಲಿ‌ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್​ ಕುಮಾರ್​ ಕಟೀಲ್(Nalin Kumar Kateel)  ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಈ ವೇಳೆ ನಾಳಿನ ‌ಪ್ರತಿಭಟನೆಯ ರೂಪರೇಷೆ ಹಾಗೂ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಇನ್ನು ಸಭೆಯ ಬಳಿಕ ಮಾತನಾಡಿದ ನಳಿನ್​ ಕುಮಾರ್​ ಕಟೀಲ್​ ‘ಕರ್ನಾಟಕದಲ್ಲಿ ಲೂಟಿ ಸರ್ಕಾರ ಜಾರಿಯಲ್ಲಿದೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯಿಂದ ಸರ್ಕಾರದ ವಿರುದ್ಧ ನಾಳೆ, ನಾಡಿದ್ದು ಪ್ರತಿಭಟನೆ

ಹೌದು, ಬೆಂಗಳೂರಿನಲ್ಲಿ ಸಭೆಯ ಬಳಿಕ ಮಾತನಾಡಿ ‘ಕಾಂಗ್ರೆಸ್​ ಅಧಿಕಾರಕ್ಕೆ ಬಂದ ನಂತರ ಅಧಿಕಾರಿಗಳಿಗೆ ರೇಟ್ ಫಿಕ್ಸ್​​ ಮಾಡಿದ್ದಾರೆ. ಕಲಾವಿದರಿಂದಲೂ ಕಮಿಷನ್ ಕೇಳುತ್ತಿದ್ದಾರೆ, ಇದು ಎಟಿಎಂ ಸರ್ಕಾರವಾಗಿದೆ. ಸರ್ಕಾರದ ಗುತ್ತಿಗೆದಾರರಿಗೆ 650 ಕೋಟಿ ರೂ. ಬಿಡುಗಡೆ ಮಾಡಿದೆ. ಬಿಲ್ ಪಾವತಿ ಬಳಿಕ ಐಟಿ ದಾಳಿಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ. ಐಟಿ ದಾಳಿಯಲ್ಲಿ ಸಿಕ್ಕ ಹಣಕ್ಕೂ ಕಾಂಗ್ರೆಸ್​​ ಪಕ್ಷಕ್ಕೂ ಸಂಬಂಧವಿದೆ. ಈ ಹಿನ್ನಲೆ ಸರ್ಕಾರದ ವಿರುದ್ಧ ನಾಳೆ ಮತ್ತು ನಾಡಿದ್ದು ಪ್ರತಿಭಟನೆ ಮಾಡುತ್ತೇವೆ.
ನೈತಿಕ ಹೊಣೆಹೊತ್ತು ಸಿಎಂ ಮತ್ತು ಡಿಸಿಎಂ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:ಸತತ 42 ಗಂಟೆಗಳ ಬಳಿಕ ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ಐಟಿ ದಾಳಿ ಅಂತ್ಯ: ವಿಚಾರಣೆಗೆ ಹಾಜರಾಗುವಂತೆ ನೋಟಿಸ್​​

ಇನ್ನು ಈ ಹಣ ಲೂಟಿ ಹೊಡೆದ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ಜಿಲ್ಲೆಗಳಲ್ಲಿ ಮತ್ತು ನಾಡಿದ್ದು ಮಂಡಲಗಳಲ್ಲಿ ಬೃಹತ್ ಹೋರಾಟ ಮಾಡಲಿದ್ದೇವೆ ಎಂದಿದ್ದಾರೆ. ಇನ್ನು ಈ ಸಭೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರಾದ ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಇನ್ನು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Sun, 15 October 23

ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More
Loading...
Unable to load recommendations.
Follow Us