ದುಬೈನಿಂದ ಮಂಗಳೂರಿಗೆ ಭೇಟಿ ನೀಡಿದ್ದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ

| Updated By: ಗಂಗಾಧರ​ ಬ. ಸಾಬೋಜಿ

Updated on: Jan 23, 2025 | 10:55 PM

40 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ. ದುಬೈನಿಂದ ಮಂಗಳೂರಿಗೆ ಭೇಟಿ ನೀಡಿದ್ದ ಈ ವ್ಯಕ್ತಿಯಲ್ಲಿ ಜ್ವರ ಮತ್ತು ಗುಳ್ಳೆಗಳು ಕಾಣಿಸಿಕೊಂಡಿದ್ದವು. ಪುಣೆಯ ಎನ್‌ಐವಿ ಲ್ಯಾಬ್‌ನಲ್ಲಿ ಸೋಂಕು ದೃಢಪಟ್ಟಿದೆ. ವ್ಯಕ್ತಿಯ ಆರೋಗ್ಯ ಸ್ಥಿರವಾಗಿದೆ ಮತ್ತು ಅವರನ್ನು ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ.

ದುಬೈನಿಂದ ಮಂಗಳೂರಿಗೆ ಭೇಟಿ ನೀಡಿದ್ದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ
ದುಬೈನಿಂದ ಮಂಗಳೂರಿಗೆ ಭೇಟಿ ನೀಡಿದ್ದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ
Follow us on

ಬೆಂಗಳೂರು, ಜನವರಿ 23: 40 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್‌ (Monkeypox) ಸೋಂಕು ಪತ್ತೆ ಆಗಿದೆ. ಆ ಮೂಲಕ ಕರ್ನಾಟಕದಲ್ಲಿ ಪತ್ತೆಯಾದ ಮೊದಲ ಮಂಕಿಪಾಕ್ಸ್ ಪ್ರಕರಣವಾಗಿದೆ. ಪುಣೆಯ ಎನ್‌ಐವಿ ಲ್ಯಾಬ್‌ನಲ್ಲಿ ಸೋಂಕು ದೃಢಪಟ್ಟಿದ್ದು, ಕಳೆದ 14 ವರ್ಷಗಳಿಂದ ದುಬೈನಲ್ಲಿ ವಾಸವಿದ್ದ ಸೋಂಕಿತ, ಇತ್ತೀಚೆಗೆ ಅಂದರೆ ಜನವರಿ 17ರಂದು ಮಂಗಳೂರಿಗೆ ಭೇಟಿ ನೀಡಿದ್ದರು.

40 ವರ್ಷದ ವ್ಯಕ್ತಿಯಲ್ಲಿ ಜ್ವರ, ಗುಳ್ಳೆ ಕಾಣಿಸಿಕೊಂಡಿತ್ತು. ತಕ್ಷಣ ಐಸೋಲೆಟ್ ಮಾಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವ್ಯಕ್ತಿಯ ಸ್ಯಾಂಪಲ್​ನ್ನು ಬೆಂಗಳೂರು ಮೆಡಿಕಲ್ ಕಾಲೇಜು ಹಾಗೂ ಪುಣೆಯ ಎನ್‌ಐವಿ ಲ್ಯಾಬ್‌ಗೆ ರವಾನಿಸಲಾಗಿತ್ತು. ಇದೀಗ ಎನ್‌ಐವಿ ಲ್ಯಾಬ್‌ ರಿಪೋರ್ಟ್‌ನಲ್ಲಿ ಮಂಕಿಪಾಕ್ಸ್‌ ಸೋಂಕು ದೃಢ ಪಟ್ಟಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ಪತ್ತೆ: ಹೆಚ್ಚಿದ ಆತಂಕ

ಸೋಂಕಿತನ ಆರೋಗ್ಯ ಸ್ಥಿರವಾಗಿದ್ದು, ಸದ್ಯದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಲಿದ್ದಾರೆ. ಇನ್ನು ಏರ್‌ಪೋರ್ಟ್‌ನಲ್ಲಿ ಸೋಂಕಿತ ಪತಿಯನ್ನು ನೋಡಲು ಬಂದಿದ್ದ ಪತ್ನಿಯನ್ನು ಐಸೋಲೇಷನ್‌ನಲ್ಲಿರಲು ಸೂಚನೆ ನೀಡಲಾಗಿದೆ. ಯಾವುದೇ ಗುಣಲಕ್ಷಣಗಳು ಕಂಡರೆ ತಕ್ಷಣ ತಿಳಿಸಲು ಸೂಚಿಸಿದ್ದು, ಸಾರ್ವಜನಿಕರು ಮಂಕಿಪಾಕ್ಸ್‌ ಬಗ್ಗೆ ಭಯಪಡುವ ಅವಶ್ಯಕತೆಯಿಲ್ಲ. ಮಂಕಿಪಾಕ್ಸ್​ಗೆ ಕೇಂದ್ರ ಸರ್ಕಾರ ಸದ್ಯ ಯಾವುದೇ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿಲ್ಲ.

ಮಂಕಿಪಾಕ್ಸ್​ನ ಲಕ್ಷಣಗಳಿವು

  • ಊದಿಕೊಂಡ ದುಗ್ಧರಸ ಗ್ರಂಥಿಗಳು
  • ಜ್ವರ
  • ಚಳಿಯ ಅನುಭವ
  • ಸ್ನಾಯು ನೋವು
  • ತಲೆನೋವು
  • ಸುಸ್ತು

ಇನ್ನೂ ಓದಿ: ರಾಜ್ಯದಲ್ಲಿ ಹೆಚ್ಚಾದ ಮಂಕಿಪಾಕ್ಸ್ ಆತಂಕ: ಶಂಕಿತರ ಚಿಕಿತ್ಸೆಗೆ ಬೆಂಗಳೂರು, ಮಂಗಳೂರು ಆಸ್ಪತ್ರೆ ಗುರುತಿಸಿದ ಸರ್ಕಾರ

ಮಂಕಿಪಾಕ್ಸ್​ಗೆ ಇಲ್ಲಿಯವರೆಗೆ ಯಾವುದೇ ಲಸಿಕೆ ಅಥವಾ ಶಿಫಾರಸು ಮಾಡಿದ ಔಷಧವಿಲ್ಲ. ರೋಗಿಗೆ ಆತನ ರೋಗಲಕ್ಷಣಗಳ ಆಧಾರದ ಮೇಲೆ ಮಾತ್ರ ಚಿಕಿತ್ಸೆ ನೀಡಲಾಗುತ್ತದೆ. ಆಂಟಿವೈರಲ್ ಔಷಧಿಗಳನ್ನು ನೀಡುವ ಮೂಲಕ ವೈದ್ಯರು ರೋಗಿಯ ರೋಗವನ್ನು ನಿಯಂತ್ರಿಸುತ್ತಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:42 pm, Thu, 23 January 25