AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರೇ ಗಮನಸಿ: ಬಿತ್ತನೆ ಸಂಬಂಧ ಹವಾಮಾನ ತಜ್ಞರು ನೀಡಿರುವ ಸಲಹೆ ಇಲ್ಲಿದೆ

Monsoon Crisis: ಕರ್ನಾಟಕದಲ್ಲಿ ಮುಂಗಾರು ಮಳೆಯ ಕೊರತೆ ತೀವ್ರಗೊಂಡಿದ್ದು, ರಾಜ್ಯದಲ್ಲಿ ಇನ್ನೂ ಒಂದು ವಾರ ಮಳೆಯಾಗುವ ಸಾಧ್ಯತೆ ತೀರ ಕಡಿಮೆ ಇದೆ. ಒಣಹವೆ ಮುಂದುವರಿಯಲಿದ್ದು, ಜುಲೈ ಕೊನೆಯಲ್ಲಿ ಮಳೆಯಾಗಬಹುದಾದರೂ ಅದು ಸಾಧಾರಣವಾಗಿರಲಿದೆ. ಹೀಗಾಗಿ ಮಳೆ ನಂಬಿ ಬಿತ್ತನೆ ಮಾಡುವ ರೈತರು ಮಣ್ಣಿನ ತೇವಾಂಶ ಗಮನಿಸಿ ಮುನ್ನಡೆಯಲು ಸಲಹೆ ನೀಡಲಾಗಿದೆ.

ರೈತರೇ ಗಮನಸಿ: ಬಿತ್ತನೆ ಸಂಬಂಧ ಹವಾಮಾನ ತಜ್ಞರು ನೀಡಿರುವ ಸಲಹೆ ಇಲ್ಲಿದೆ
ಸಾಂದರ್ಭಿಕ ಚಿತ್ರImage Credit source: PTI
ಕಿರಣ್​ ಸೂರ್ಯ
| Edited By: |

Updated on:Jul 14, 2026 | 8:20 PM

Share

ಮುಖ್ಯಾಂಶಗಳು

  • ಇನ್ನೂ ‌ಒಂದು ವಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆಗಲ್ಲ!
  • ಮುಂಗಾರು ಮಳೆಯ ತೀವ್ರ ಹಿನ್ನಡೆ ಬಗ್ಗೆ ತಜ್ಞರಿಂದ ಎಚ್ಚರಿಕೆ
  • ಮಳೆ ನಂಬಿ ಬಿತ್ತನೆ ಮಾಡುವ ರೈತರಿಗೆ ಕೆಲವು ಸಲಹೆ, ಸೂಚನೆ

ಬೆಂಗಳೂರು, ಜುಲೈ 14: ಕರ್ನಾಟಕದಲ್ಲಿ ಮುಂಗಾರು ಮಳೆಯ ತೀವ್ರ ಹಿನ್ನಡೆ ನಡುವೆ ತಜ್ಞರು ಮತ್ತೊಂದು ಆತಂಕಕಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ. ಇನ್ನೂ ‌ಒಂದು ವಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆಗೋದಿಲ್ಲ. ಜುಲೈ ಕೊನೆಯ ವಾರದಲ್ಲಿ ಮಳೆಯಾದರೂ ಕೂಡ ಅದು ಸಾಧಾರಣವಾಗಿ ಆಗಲಿದೆ. ಹೀಗಾಗಿ ಮಳೆ ನಂಬಿ ಬಿತ್ತನೆ ಬೀಜ ಹಾಕುವ ಅನ್ನದಾತರು ಕಾಯಬೇಕಿದೆ. ಜೂನ್ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಬೆಂಗಳೂರು ಸೇರಿ ಸುತ್ತಮುತ್ತ ಜಿಲ್ಲೆಗಳಾದ‌ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಶೇ. 50ಕ್ಕಿಂತ ಹೆಚ್ಚು ಮಳೆ ಕೊರತೆ ಉಂಟಾಗಿದೆ. ಕರಾವಳಿಯಲ್ಲಿ ಶೇ. 15-30, ಉತ್ತರ ಒಳನಾಡಿನಲ್ಲಿ ಶೇ. 15-20ರಷ್ಟು ಕಡಿಮೆ ವರ್ಷಧಾರೆಯಾಗಿದೆ ಎಂದವರು ತಿಳಿಸಿದ್ದಾರೆ.

ಪ್ರಾದೇಶಿಕವಾರು ಮಳೆ ಕೊರತೆ ಎಷ್ಟು?

ಪ್ರದೇಶ ಮಳೆ ಕೊರತೆ
ಕರಾವಳಿ 15-30%
ಉತ್ತರ ಒಳನಾಡು 15-20%
ದಕ್ಷಿಣ ಒಳನಾಡು 40-50%

ಇದನ್ನೂ ಓದಿ: ಕರ್ನಾಟಕದಲ್ಲಿ ದುರ್ಬಲಗೊಂಡ ಮುಂಗಾರು; ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ, ರಾಯಚೂರಲ್ಲಿ ದಾಖಲೆ

ಈ ನಡುವೆ ರಾಜ್ಯದಲ್ಲಿ ಇನ್ನೂ ಒಂದು ವಾರ ಮಳೆಯಾಗುವ ಸಾಧ್ಯತೆ ತೀರ ಕಡಿಮೆ ಇದ್ದು, ‌ಜುಲೈ ಕೊನೆಯಲ್ಲಿ ಮಳೆಯಾಗಬಹುದಾದರೂ ಅದು ಸಾಧಾರಣವಾಗಿರಲಿದೆ. ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳ ಶೇ. 25ಕ್ಕಿಂತ ಕಡಿಮೆ ಪ್ರದೇಶದಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಯಿದೆ. ಇದನ್ನು ಬಿಟ್ಟರೆ ರಾಜ್ಯದ ಉಳಿದೆಡೆ ಮಳೆ ಸಾಧ್ಯತೆ ಇಲ್ಲ. ಇನ್ನೂ ಒಂದು ವಾರ ಉತ್ತರ ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ರಾಜ್ಯದಲ್ಲಿ ಆಗಸ್ಟ್​​ನಲ್ಲಿ ಮಳೆ ಚೇತರಿಕೆ ಆಗಬಹುದು. ಹೀಗಿದ್ದರೂ ನಿರೀಕ್ಷೆಯಷ್ಟು ವರ್ಷಧಾರೆ ಆಗಲ್ಲ. ಹೀಗಾಗಿ ಮಳೆ ಆಧಾರಿತ ಬೇಸಾಯ ಮಾಡುವ ರೈತರು ತಮ್ಮ ಹೊಲದ ಮಣ್ಣಿನ ತೇವವನ್ನು ನೋಡಿಕೊಂಡು ಬಿತ್ತನೆ ಮಾಡಬಹುದು. ಇಲ್ಲವೇ ಕಾಯುವುದು ಒಳ್ಳೆಯದು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಜೂನ್​​ ತಿಂಗಳಲ್ಲಿಯಂತೂ ಉತ್ತಮ ಮಳೆಯಾಗಿಲ್ಲ. ಹೀಗಾಗಿ ಜುಲೈನಲ್ಲಾದರೂ ವರುಣ ಕೃಪೆ ತೋರಿದರೆ ಬಿತ್ತನೆ ಮಾಡಬಹುದು ಎಂಬ ನಿರೀಕ್ಷೇಯಲ್ಲಿದ್ದ ರೈತರಿಗೆ ತಜ್ಞರ ಈ ಎಚ್ಚರಿಕೆ ಮತ್ತಷ್ಟು ನಿರಾಸೆ ಮೂಡಿಸಿದೆ. ಮಳೆ ಕೊರತೆ ಕಾರಣ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ನಡುವೆ ಬೆಳೆಗೆ ನೀರು ತರೋದು ಎಲ್ಲಿಂದ? ಪರಿಸ್ಥಿತಿ ಹೀಗೇ ಮುಂದುವರಿದಲ್ಲಿ ಮುಂದಿನ ಬದುಕು ಹೇಗೆ ಎಂಬ ಚಿಂತೆ ಅನ್ನದಾತರನ್ನು ಕಾಡತೊಡಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:54 pm, Tue, 14 July 26

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!