ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ: ಹವಾಮಾನ ಇಲಾಖೆ ತಜ್ಞ

ಮುಂಗಾರು ಮಾರುತ ಕೇರಳಕ್ಕೆ ಇನ್ನೂ ಪ್ರವೇಶಿಸದ ಹಿನ್ನೆಲೆ ಕರ್ನಾಟಕಕ್ಕೆ ಮುಂಗಾರು ಮಳೆ ತಡವಾಗಿ ಎಂಟ್ರಿ ಕೊಡಲಿದೆ. ಆದರೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ.

ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ: ಹವಾಮಾನ ಇಲಾಖೆ ತಜ್ಞ
ಮುಂಗಾರು ತಡವಾದರೂ ಕರ್ನಾಟಕದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆImage Credit source: JAMES P. BLAIR
Follow us
Rakesh Nayak Manchi
|

Updated on: Jun 05, 2023 | 4:39 PM

ಬೆಂಗಳೂರು: ಮುಂಗಾರು (Monsoon) ಮಾರುತ ಕೇರಳಕ್ಕೆ ಇನ್ನೂ ಪ್ರವೇಶಿಸದ ಹಿನ್ನೆಲೆ ಕರ್ನಾಟಕಕ್ಕೆ ಮುಂಗಾರು ಮಳೆ (Karnataka Monsoon Rain) ತಡವಾಗಿ ಎಂಟ್ರಿ ಕೊಡಲಿದೆ. ಆದರೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ. ಕೇರಳಕ್ಕೆ ಮುಂಗಾರು ಪ್ರವೇಶ ಒಂದು ವಾರ ವಿಳಂಬವಾಗಲಿದೆ. ಈ ರಾಜ್ಯಕ್ಕೆ ಮುಂಗಾರು ಎಂಟ್ರಿಯಾದ ಮೂರು ನಾಲ್ಕು ದಿನಗಳಲ್ಲಿ ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ. ಆದರೆ ಇದರಿಂದ ಯಾವುದೇ ಸಮಸ್ಯೆ ಆಗದು. ಉತ್ತಮ ಮಳೆಯಾಗಲಿದೆ ಎಂದರು.

ಮುಂಗಾರು ಮಾರುತಗಳು ಇಂದು ಕೂಡ ಕೇರಳಕ್ಕೆ ಪ್ರವೇಶಿಸಲು ವಿಫಲವಾಗಿದೆ. ಮುಂಗಾರು ಮಳೆ ನಿಗದಿತ ದಿನಕ್ಕಿಂತ ಇನ್ನೂ ಮೂರ್ನಾಲ್ಕು ದಿನ ತಡವಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾ‌ದ್ ಹೇಳಿದ್ದಾರೆ. ದಕ್ಷಿಣ ಅರಬ್ಬೀ ಸಮುದ್ರದಲ್ಲಿ ಮಾರುತ ಚಲನೆ ವೇಗ ಪಡೆದುಕೊಂಡಿದೆ. ಹೀಗಾಗಿ ಮಂದಿನ 3-4 ದಿನದಲ್ಲಿ ಮುಂಗಾರು ಮಾರುತ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದರು.

ಮುಂಗಾರು ತಡವಾದರೆ ಪರಿಣಾಮ ಭೀರುತ್ತಾ?

ಮುಂಗಾರು ತಡವಾದರೂ ಉತ್ತಮ ಫಲಿತಾಂಶವನ್ನೇ ನೀಡಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ. ವಾರ್ಷಿಕ ಮಳೆ ಪ್ರಮಾಣದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ಪ್ರಸಾದ್ ಅವರು ಹೇಳಿದ್ದಾರೆ.

ಇದನ್ನೂ ಓದಿ: Karnataka Weather: ಜೂನ್​ 9 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ

ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ, ಮುಂದಿನ 48 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿ ಬೀಸಲಿದ್ದು, ಗಂಟೆಗೆ 40 ರಿಂದ 45 ಕಿ.ಮೀ. ಇಂದ 55 ಕಿ.ಮೀ. ವೇಗದಲ್ಲಿ ಬೀಸುವ ವಾರಾವರಣ ಇರಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ.

ಜೂನ್ 7ರ ವರೆಗೆ ಬೆಂಗಳೂರಿನಲ್ಲಿ ಮಳೆ

ಮುಂದಿನ 48 ಗಂಟೆಗಳ ವರೆಗೆ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ