AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತದಲ್ಲಿ ಮುಂದಿನ ವಾರವೂ ಮಳೆ ಕ್ಷೀಣ: ಕರ್ನಾಟಕದ ಕರಾವಳಿ ಭಾಗದಲ್ಲಿ ವರುಣನ ಅಬ್ಬರದ ಎಚ್ಚರಿಕೆ

ಮುಂದಿನ ಒಂದು ವಾರ ದಕ್ಷಿಣ ಭಾರತದಲ್ಲಿ ಮುಂಗಾರು ಕ್ಷೀಣಿಸುವ ಸಾಧ್ಯತೆಯಿದ್ದು, ಕರ್ನಾಟಕದ ಕರಾವಳಿ ಭಾಗದಲ್ಲಿ ಮಾತ್ರ ಸೆಪ್ಟೆಂಬರ್ 4ರಿಂದ 9ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಲಕ್ಷದ್ವೀಪದಲ್ಲಿಯೂ ಸೆಪ್ಟೆಂಬರ್ 8 ಮತ್ತು 9ರಂದು ಭಾರಿ ವರ್ಷಧಾರೆಯ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ.

ದಕ್ಷಿಣ ಭಾರತದಲ್ಲಿ ಮುಂದಿನ ವಾರವೂ ಮಳೆ ಕ್ಷೀಣ: ಕರ್ನಾಟಕದ ಕರಾವಳಿ ಭಾಗದಲ್ಲಿ ವರುಣನ ಅಬ್ಬರದ ಎಚ್ಚರಿಕೆ
ಸಾಂದರ್ಭಿಕ ಚಿತ್ರImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:Sep 04, 2026 | 1:05 PM

Share

ಬೆಂಗಳೂರು, ಸೆಪ್ಟೆಂಬರ್​​ 04: ಮುಂದಿನ ಒಂದು ವಾರ ದಕ್ಷಿಣ ಭಾರತದಲ್ಲಿ ಮಳೆ ಚಟುವಟಿಕೆ ಕ್ಷೀಣವಾಗಿರುವ ಸಾಧ್ಯತೆಯಿದ್ದು, ಬಹುತೇಕ ಪ್ರದೇಶಗಳಲ್ಲಿ ಅಲ್ಲಲ್ಲಿ ಅಥವಾ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಇದೇ ವೇಳೆ, ಕಡಿಮೆ ಒತ್ತಡದ ಪ್ರದೇಶದ ಪರಿಣಾಮ ಮಧ್ಯ ಭಾರತದ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ಕರ್ನಾಟಕದ ಕರಾವಳಿ ಭಾಗದಲ್ಲಿ ಸೆ. 4ರಿಂದ 9ರವರೆಗೆ ವ್ಯಾಪಕ ಮಳೆ

ಸೆಪ್ಟೆಂಬರ್ 4ರಿಂದ 9ರವರೆಗೆ ಆಂಧ್ರಪ್ರದೇಶ ಮತ್ತು ಯಾನಂ, ಕೇರಳ ಮತ್ತು ಮಾಹೆ, ಉತ್ತರ ಒಳನಾಡು ಕರ್ನಾಟಕ, ರಾಯಲಸೀಮಾ, ದಕ್ಷಿಣ ಒಳನಾಡು ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಹಾಗೂ ತೆಲಂಗಾಣದಲ್ಲಿ ಅಲ್ಲಲ್ಲಿ ಅಥವಾ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಪ್ರದೇಶದ ಕರ್ನಾಟಕದ ಕರಾವಳಿ ಭಾಗದಲ್ಲಿ ಮಾತ್ರ ಸೆಪ್ಟೆಂಬರ್ 4ರಿಂದ 9ರವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಲಕ್ಷದ್ವೀಪದಲ್ಲಿಯೂ ಸೆಪ್ಟೆಂಬರ್ 8 ಮತ್ತು 9ರಂದು ಭಾರಿ ವರ್ಷಧಾರೆಯ ಸಾಧ್ಯತೆಯಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ಮುನ್ಸೂಚನೆ: ಕರಾವಳಿ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ದಕ್ಷಿಣ ಭಾರತದಲ್ಲಿ ಮಳೆ ಕ್ಷೀಣಿಸುವ ಮುನ್ಸೂಚನೆಯ ನಡುವೆಯೇ, ಮಧ್ಯ, ಉತ್ತರ ಮತ್ತು ಪೂರ್ವ ಭಾರತದ ಕೆಲವು ಭಾಗಗಳಲ್ಲಿ ಮುಂಗಾರು ಚುರುಕಾಗಿರಲಿದೆ. ಈಶಾನ್ಯ ಮಧ್ಯಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಸುಸ್ಪಷ್ಟ ಕಡಿಮೆ ಒತ್ತಡದ ಪ್ರದೇಶದ ಪರಿಣಾಮ ಸೆಪ್ಟೆಂಬರ್ 4 ಮತ್ತು 5ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ.

LIVE TV

ಮಧ್ಯ ಭಾರತದ ಎಲ್ಲೆಲ್ಲಿ ಮಳೆಯ ಮುನ್ಸೂಚನೆ?

  • ಸೆಪ್ಟೆಂಬರ್ 4 ಮತ್ತು 5ರಂದು ಹಿಮಾಚಲ ಪ್ರದೇಶದಲ್ಲಿ ಹಾಗೂ ಸೆಪ್ಟೆಂಬರ್ 9ರವರೆಗೆ ಉತ್ತರಾಖಂಡದಲ್ಲಿ ಸಾಕಷ್ಟು ವ್ಯಾಪಕದಿಂದ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.
  • ಜಮ್ಮು ಮತ್ತು ಕಾಶ್ಮೀರ, ಲಡಾಖ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆಪ್ಟೆಂಬರ್ 4ರಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟೆಂಬರ್ 5ರಿಂದ 9ರವರೆಗೆ ಮತ್ತೆ ಅಲ್ಲಲ್ಲಿ ಚದುರಿದ ಮಳೆಯಾಗಬಹುದು.
  • ಪಂಜಾಬ್‌ನಲ್ಲಿ ಸೆಪ್ಟೆಂಬರ್ 4ರಿಂದ 9ರವರೆಗೆ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಸೆಪ್ಟೆಂಬರ್ 6ರಿಂದ 9ರವರೆಗೆ ಮಳೆಯಾಗಬಹುದು.
  • ಪಶ್ಚಿಮ ಉತ್ತರ ಪ್ರದೇಶದಲ್ಲಿ ಸೆಪ್ಟೆಂಬರ್ 7ರಿಂದ 9ರವರೆಗೆ ಮಳೆಯಾಗುವ ಸಾಧ್ಯತೆಯಿದ್ದು, ಪೂರ್ವ ಉತ್ತರ ಪ್ರದೇಶದಲ್ಲಿ ಸೆಪ್ಟೆಂಬರ್ 4 ಮತ್ತು 5ರಂದು ಹಾಗೂ ಮತ್ತೆ ಸೆಪ್ಟೆಂಬರ್ 9ರಂದು ಮಳೆಯಾಗುವ ನಿರೀಕ್ಷೆಯಿದೆ.
  • ರಾಜಸ್ಥಾನದಲ್ಲಿಯೂ ಆಗಾಗ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ರಾಜಸ್ಥಾನದಲ್ಲಿ ಸೆಪ್ಟೆಂಬರ್ 4ರಿಂದ 6ರವರೆಗೆ ಅಲ್ಲಲ್ಲಿ ಚದುರಿದ ಮಳೆಯಾಗಬಹುದು. ಪೂರ್ವ ರಾಜಸ್ಥಾನದಲ್ಲಿ ಸೆಪ್ಟೆಂಬರ್ 3ರಂದು ಹಾಗೂ ಮತ್ತೆ ಸೆಪ್ಟೆಂಬರ್ 5ರಿಂದ 9ರವರೆಗೆ ಮಳೆಯಾಗುವ ಮುನ್ಸೂಚನೆ ಇದೆ.

ಪೂರ್ವ ಭಾರತದಲ್ಲಿಯೂ ವರ್ಷಧಾರೆ

  • ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಸೆಪ್ಟೆಂಬರ್ 4ರಿಂದ 9ರವರೆಗೆ ಸಾಕಷ್ಟು ವ್ಯಾಪಕದಿಂದ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
  • ಗಂಗಾ ತೀರದ ಪಶ್ಚಿಮ ಬಂಗಾಳದಲ್ಲಿ ಸೆಪ್ಟೆಂಬರ್ 4 ಮತ್ತು 5ರಂದು ಹಾಗೂ ಮತ್ತೆ ಸೆಪ್ಟೆಂಬರ್ 7ರಿಂದ 9ರವರೆಗೆ ವ್ಯಾಪಕ ಮಳೆಯಾಗಬಹುದು.
  • ಬಿಹಾರದಲ್ಲಿ ಸೆಪ್ಟೆಂಬರ್ 4 ಮತ್ತು 5ರಂದು ಹಾಗೂ ಸೆಪ್ಟೆಂಬರ್ 9ರಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜಾರ್ಖಂಡ್‌ನಲ್ಲಿ ಸೆಪ್ಟೆಂಬರ್ 8 ಮತ್ತು 9ರಂದು ಇದೇ ರೀತಿಯ ಮಳೆಯಾಗಬಹುದು.

ಈಶಾನ್ಯ ಭಾರತದಲ್ಲೂ ಮಳೆ

ಅರುಣಾಚಲ ಪ್ರದೇಶದಲ್ಲಿ ಸೆಪ್ಟೆಂಬರ್ 5ರಿಂದ 8ರವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಅಸ್ಸಾಂ ಮತ್ತು ಮೇಘಾಲಯದಲ್ಲಿ ಸೆಪ್ಟೆಂಬರ್ 4ರಂದು ಹಾಗೂ ಸೆಪ್ಟೆಂಬರ್ 6ರಿಂದ 8ರವರೆಗೆ ವ್ಯಾಪಕ ಮಳೆಯಾಗಬಹುದು. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಸೆಪ್ಟೆಂಬರ್ 9ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:03 pm, Fri, 4 September 26

Follow Us
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್
ರಾಜಾಜಿನಗರ ಇಸ್ಕಾನ್ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ
ರಾಜಾಜಿನಗರ ಇಸ್ಕಾನ್ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ
ಬೆಂಗಳೂರಿನ ಈ 4 ಫ್ಲೈ ಓವರ್​ಗಳಲ್ಲಿ ಇಂದಿನಿಂದಲೇ ಹೊಸ ನಿಯಮ ಜಾರಿ
ಬೆಂಗಳೂರಿನ ಈ 4 ಫ್ಲೈ ಓವರ್​ಗಳಲ್ಲಿ ಇಂದಿನಿಂದಲೇ ಹೊಸ ನಿಯಮ ಜಾರಿ
ಇಂದು ಕೃಷ್ಣ ಜನ್ಮಾಷ್ಟಮಿ ಶುಭದಿನ
ಇಂದು ಕೃಷ್ಣ ಜನ್ಮಾಷ್ಟಮಿ ಶುಭದಿನ
30 ವರ್ಷ ಬಳಿಕ ‘ಅಮೆರಿಕ ಅಮೆರಿಕ’ ಸೀಕ್ವೆಲ್; ನಾಗತಿಹಳ್ಳಿ ವಿಶೇಷ ಸಂದರ್ಶನ
30 ವರ್ಷ ಬಳಿಕ ‘ಅಮೆರಿಕ ಅಮೆರಿಕ’ ಸೀಕ್ವೆಲ್; ನಾಗತಿಹಳ್ಳಿ ವಿಶೇಷ ಸಂದರ್ಶನ
ಏಲಕ್ಕಿ ಮಾಲೆಗೆ ಡಿಮ್ಯಾಂಡ್: ಏಲಕ್ಕಿ ನಗರಿ ಎಂದು ಹಾವೇರಿಗೆ ಕರೆಯೋದ್ಯಾಕೆ?
ಏಲಕ್ಕಿ ಮಾಲೆಗೆ ಡಿಮ್ಯಾಂಡ್: ಏಲಕ್ಕಿ ನಗರಿ ಎಂದು ಹಾವೇರಿಗೆ ಕರೆಯೋದ್ಯಾಕೆ?