AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲೆಡೆ ಹೊಸ ತೊಡಕು ಸಂಭ್ರಮ: ಬೆಂಗಳೂರಿನಲ್ಲಿ 18 ಜಟ್ಕಾ ಕಟ್ ಶಾಪ್ ಓಪನ್, 1999 ರೂ.ಗೆ ಕಾಂಬೋ ಆಫರ್​

ಕಳೆದ ಬಾರಿಯಂತೆ ಈ ಬಾರಿಯು ಮುಸ್ಲಿಂ ವ್ಯಾಪಾರಿಗಳಿಗೆ ಠಕ್ಕರ್ ಕೊಡಲು 12 ಸಾವಿರ ಕೆಜಿ ಜಟ್ಕಾ ಕಟ್ ಮಾಂಸ ಕಟ್ ಮಾಡಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯು ಆನ್ಲೈನ್ ಮತ್ತು ಡೋರ್ ಡೆಲಿವರಿ ವ್ಯವಸ್ಥೆ ಮಾಡಲಾಗಿದೆ.

ಎಲ್ಲೆಡೆ ಹೊಸ ತೊಡಕು ಸಂಭ್ರಮ: ಬೆಂಗಳೂರಿನಲ್ಲಿ 18 ಜಟ್ಕಾ ಕಟ್ ಶಾಪ್ ಓಪನ್,  1999 ರೂ.ಗೆ ಕಾಂಬೋ ಆಫರ್​
ಗುಡ್ಡೆ ಮಾಂಸ
ಆಯೇಷಾ ಬಾನು
|

Updated on: Mar 23, 2023 | 9:39 AM

Share

ಬೆಂಗಳೂರು: ಹಿಂದೂಗಳ ಹೊಸ ವರ್ಷ ಯುಗಾದಿಯನ್ನು(Ugadi) ಸಿಟಿ ಮಂದಿ ಸಂಭ್ರಮ-ಸಡಗರ, ಪೂಜೆ-ಪುನಸ್ಕಾರದೊಂದಿಗೆ ಬರಮಾಡಿಕೊಂಡಿದ್ದು ಯುಗಾದಿಯ ಮಾರನೇ ದಿನ ಅಂದ್ರೆ ಇಂದು (ಮಾರ್ಚ್ 23) ಎಲ್ಲೆಡೆ ಹೊಸತೊಡಕಿಗಾಗಿ(Hosatodaku) ಸಿದ್ಧತೆ ನಡೆದಿದೆ. ಮಟನ್, ಚಿಕನ್ ಅಂಗಡಿಗಳ ಮುಂದೆ ಸರತಿ ಸಾಲು ಕಂಡು ಬರುತ್ತಿದೆ. ಬೆಳಗ್ಗೆ 6 ಗಂಟೆಯಿಂದಲೇ ಜನ ಮಾಂಸದಂಗಡಿಗಳಿಗೆ ಮುಗಿಬಿದ್ದಿದ್ದಾರೆ. ಹಳ್ಳಿಗಳಲ್ಲಿ ಗುಡ್ಡೆ ಮಾಂಸಕ್ಕೆ ಬೇಡಿಕೆ ಹೆಚ್ಚಾಗಿದೆ.

ದೇವನಹಳ್ಳಿ ತಾಲೂಕಿನ ಹಲವೆಡೆ ರಾತ್ರಿಯಿಡಿ ಕುರಿಗಳ ಕಟಾವು ಮಾಡಲಾಗಿದೆ. ಯಲಿಯೂರು ಬಳಿ ರಾತ್ರಿಯಿಡಿ ಸಾವಿರಾರು ಕೆಜಿ ಕುರಿ ಮಾಂಸ ಕಟಾವು ಮಾಡಿ ಸಿದ್ಧತೆ ಮಾಡಿಕೊಂಡಿದ್ದು ಹೊಸತೊಡಕು ಮಾಡಲು ಮಾಂಸದಂಗಡಿಗಳಿಗೆ ಜನ ಮುಗಿಬಿದ್ದಿದ್ದಾರೆ. ಕುರಿ‌ಮಾಂಸ ಕಳೆದ ವರ್ಷಕ್ಕಿಂತ ಈ ಬಾರಿ ದುಬಾರಿ ಬೆಲೆಗೆ ಮಾರಾಟವಾಗುತ್ತಿದೆ. ಒಂದು ಕೆಜಿಗೆ 700 ರೂ ದರ ನಿಗದಿ ಮಾಡಲಾಗಿದೆ.

ಇದನ್ನೂ ಓದಿ: Ugadi 2023: ಸ್ಯಾಂಡಲ್ ವುಡ್ ನಟಿಮಣಿಯರ ಯುಗಾದಿ ಸಂಭ್ರಮ

ಇನ್ನು ಈ ಬಾರಿ 18 ಜಟ್ಕಾ ಕಟ್ ಅಂಗಡಿಗಳು ಓಪನ್ ಆಗಿವೆ. ಹಲಾಲ್ ಬಾಯ್ಕಾಟ್ ಅಭಿಯಾನದ ಹಿನ್ನೆಲೆ ರಾಜಸ್ಥಾನದ ಅಜ್ಮೇರ್ ನಿಂದ 200, ಬಾಸವನಬಾಗೇವಾಡಿ, ಮಧುಗಿರಿಯಿಂದ 400. ಒಟ್ಟು 600 ಕುರಿ ಮತ್ತು ಮೇಕೆಗಳು ರಾಜಧಾನಿಗೆ ಬಂದಿವೆ. ಕಳೆದ ಬಾರಿ ನಾಲ್ಕು ಜಟ್ಕಾ ಕಟ್ ಶಾಪ್​ಗಳನ್ನು ತೆರೆಯಲಾಗಿತ್ತು. ಈ ಬಾರಿ ಹದಿನೆಂಟು ಅಂಗಡಿಗಳನ್ನು ತೆರೆಯಲಾಗಿದೆ. ಕಮ್ಮನಹಳ್ಳಿ, ಇಟ್ಟಮಡು, ದಾಸರಹಳ್ಳಿ, ಸಂಜಯ್ ನಗರ, ಗೆದ್ದಲಹಳ್ಳಿ, ಯಲಹಂಕ, ಇಂದಿರಾನಗರ, ಟ್ಯಾನರಿ ರಸ್ತೆ, ಹೊರಮಾವು, ಅನ್ನಪೂರ್ಣೇಶ್ವರಿನಗರ ಸೇರಿದಂತೆ 18 ಅಂಗಡಿಗಳನ್ನು ತೆರೆಯಲಾಗಿದೆ.

ಕಳೆದ ಬಾರಿಯಂತೆ ಈ ಬಾರಿಯು ಮುಸ್ಲಿಂ ವ್ಯಾಪಾರಿಗಳಿಗೆ ಠಕ್ಕರ್ ಕೊಡಲು 12 ಸಾವಿರ ಕೆಜಿ ಜಟ್ಕಾ ಕಟ್ ಮಾಂಸ ಕಟ್ ಮಾಡಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯು ಆನ್ಲೈನ್ ಮತ್ತು ಡೋರ್ ಡೆಲಿವರಿ ವ್ಯವಸ್ಥೆ ಮಾಡಲಾಗಿದೆ. ಹಿಂದೂಪರ ಸಂಘಟನೆಗಳು ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಆರಂಭಿಸಿವೆ. 2 ಕೆಜಿ ಮಟನ್, 2 ಕೆಜಿ ಚಿಕನ್, 6 ಮೊಟ್ಟೆ 1999 ರೂ ಕಾಂಬೋ ನೀಡಲಾಗುತ್ತಿದೆ. ಹಿಂದವೀ ಮೀಟ್ ಮಾರ್ಟ್ 1200 ಸಾವಿರ ಕೆಜಿ ಜಟ್ಕಾ ಕಟ್ ರೆಡಿ ಮಾಡಿದೆ. ಗುಡ್ಡೆ ಮಾಂಸ ಕೆಜಿ- 650, ಕೆಜಿ ಮಟನ್- 700, ಚಿಕನ್- 130 ರಿಂದ 140 ರುಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​