AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಹಾನಿ: ರಾಜ್ಯ ಸರ್ಕಾರದಿಂದ 124 ಕೋಟಿ ಅನುದಾನ ಬಿಡುಗಡೆ

ಮಳೆ ಹಾನಿ ಹಿನ್ನೆಲೆ ಮೂಲಭೂತ ಸೌಕರ್ಯ ಹಾನಿ ಪರಿಹಾರಕ್ಕೆ ರಾಜ್ಯ ಸರ್ಕಾರ 124 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಕಂದಾಯ ಇಲಾಖೆ ಮೂಲಕ ಡಿಸಿಗಳ, ಪಿಡಿ ಖಾತೆಗೆ ಅನುದಾನ ಬಿಡುಗಡೆ ಮಾಡಿದೆ.

ರಾಜ್ಯದ 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಹಾನಿ: ರಾಜ್ಯ ಸರ್ಕಾರದಿಂದ 124 ಕೋಟಿ ಅನುದಾನ ಬಿಡುಗಡೆ
ರಾಜ್ಯ ಸರ್ಕಾರ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 14, 2022 | 3:16 PM

Share

ಬೆಂಗಳೂರು: ರಾಜ್ಯದಲ್ಲಿ 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ (rains) ಹಾನಿ ಹಿನ್ನೆಲೆ ಮೂಲಭೂತ ಸೌಕರ್ಯ ಹಾನಿ ಪರಿಹಾರಕ್ಕೆ ರಾಜ್ಯ ಸರ್ಕಾರ (karnataka) 124 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಕಂದಾಯ ಇಲಾಖೆ ಮೂಲಕ ಡಿಸಿಗಳ, ಪಿಡಿ ಖಾತೆಗೆ ಅನುದಾನ ಬಿಡುಗಡೆ ಮಾಡಿದೆ. ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆ ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ನೆರೆ, ಪ್ರವಾಹ ಕೂಡ ಉಂಟಾಗಿದ್ದು, ಅನೇಕ ಪ್ರಮಾಣದಲ್ಲಿ ಹಾನಿಯಾಗಿದೆ. ಅನೇಕ ಜನರು ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಹಾಗಾಗಿ ಮೂಲಭೂತ ಸೌಕರ್ಯ ಹಾನಿ ಪರಿಹಾರಕ್ಕೆಂದು ರಾಜ್ಯ ಸರ್ಕಾರ 124 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ ಮುಂದುವರೆಯುವ ನಿರೀಕ್ಷೆಯಿದ್ದು, ನಿನ್ನೆ ರಾತ್ರಿಯೂ ಬೆಂಗಳೂರು ಸೇರಿದಂತೆ ಅಲ್ಲಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಇಂದು ಗುಡುಗು, ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿಗಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಕೆಲವು ರಸ್ತೆಗಳಲ್ಲಿ ನೀರು ತುಂಬಿಕೊಂಡಿವೆ.

ಹಳದಿ ಅಲರ್ಟ್ ಘೋಷಣೆ:

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ. 15ರವರೆಗೆ ಭಾರೀ ಮಳೆಯಾಗಲಿದೆ. ಇಂದು ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಲಾಗಿದೆ. ನಿನ್ನೆ ಸುರಿದ ಧಾರಾಕಾರ ಮಳೆಗೆ ಚಿಕ್ಕಬಳ್ಳಾಪುರ, ಚಾಮರಾಜನಗರ ಸೇರಿದಂತೆ ಕೆಲವೊಂದು ಜಿಲ್ಲೆಗಳ ವಿವಿಧ ಪ್ರದೇಶಗಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವೆಡೆ ಮನೆಗಳಿಗೆ ನೀರು ನುಗ್ಗಿ ಕುಟುಂಬಗಳು ಪರದಾಡುವಂತಾಗಿದ್ದು, ಮನೆಯೊಳಗೆ ಸಿಲುಕಿದವರನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ.

ಮಳೆಗೆ ತುಂಬಿ ಹರಿಯುತ್ತಿರೊ ಹಳ್ಳ ಕೊಳ್ಳಗಳು, ಗರ್ಭಿಣಿ ಪರದಾಟ

ರಾಯಚೂರು: ಜಿಲ್ಲೆಯಲ್ಲಿ ನಿರಂತರ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ರಸ್ತೆ ತುಂಬೆಲ್ಲಾ ನೀರು ಹರಿದು ಹೋಗುತ್ತಿದೆ. ಪರಿಣಾಮವಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿ ತುಂಬು ಗರ್ಭಿಣಿ ಆಸ್ಪತ್ರೆಗೆ ಹೋಗಲು ಪರದಾಡುವಂತಾಯಿತು. ಕೆ ತುಪ್ಪದೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಸ್ತೆ ತುಂಬ ನೀರು ಸಂಗ್ರಹವಾಗಿದ್ದರಿಂದ ಆ್ಯಂಬುಲೆನ್ಸ್ ಗರ್ಭಿಣಿ​ ಯಲ್ಲಮ್ಮನ ಮನೆಗೆ ಬರಲು ಸಾಧ್ಯವಾಗಿಲ್ಲ. ಪರಿಣಾಮವಾಗಿ ಸುಮಾರು 4 ಕಿಮೀ ದೂರದವರೆಗೆ ಎತ್ತಿನ ಬಂಡಿಯಲ್ಲಿ ಸಾಗಿಸಿ ಬಳಿಕ ಆ್ಯಂಬುಲೆನ್ಸ್​ನಲ್ಲಿ ಗರ್ಭಿಣಿ ಯಲ್ಲಮ್ಮ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದಾದ ಕೆಲವೇ ಕ್ಷಣಗಳಲ್ಲಿ ಯಲ್ಲಮ್ಮ ಹೆಣ್ಣು ಮಗುವಿಗೆ ಜನ್ಮ ನೀಡಿದರು.

ಮನೆಗಳಿಗೆ ನೀರು ನುಗ್ಗಿ ಜನರ ಪರದಾಟ

ಚಾಮರಾಜನಗರ: ಕಳೆದ ರಾತ್ರಿ ಸುರಿದ ಮಳೆಯಿಂದ ನಗರದ ಸೋಮಣ್ಣ ಲೇಔಟ್​ ಜಲಾವೃತಗೊಂಡು ಅವಾಂತರ ಸೃಷ್ಟಿಯಾಗಿದ್ದು, ಮನೆಗಳಿಗೆ ನೀರು ನುಗ್ಗಿ ರಾತ್ರಿಯಿಡೀ ಜನರ ಪರದಾಡುವಂತಾಯಿತು. ಮನೆಗಳಿಗೆ ನೀರು ನುಗ್ಗಿದ್ದರಿಂದ ಮನೆಯಿಂದ ಹೊರಬರಲು ಸಾಧ್ಯವಾಗಿಲ್ಲ. ಹೀಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಜನರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:09 pm, Fri, 14 October 22

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್