ಬೆಂಗಳೂರಿನಲ್ಲಿ ಹೆಚ್ಚಾದ ರಸ್ತೆ ಅಪಘಾತ: ಕೇವಲ ಮೂರು ತಿಂಗಳಲ್ಲಿ205 ಸಾವು

| Updated By: ಆಯೇಷಾ ಬಾನು

Updated on: Apr 15, 2023 | 10:00 AM

023ರ ಆರಂಭದಿಂದ ಮಾರ್ಚ್‌ ಅಂತ್ಯದವರೆಗೂ ಬೆಂಗಳೂರಿನಲ್ಲಿ ಒಟ್ಟು 1,197 ರಸ್ತೆ ಅಪಘಾತಗಳು ಸಂಭವಿಸಿವೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸರ ಬಳಿ ಇರುವ ಅಂಕಿ ಅಂಶಗಳು ಹೇಳುತ್ತಿವೆ.

ಬೆಂಗಳೂರಿನಲ್ಲಿ ಹೆಚ್ಚಾದ ರಸ್ತೆ ಅಪಘಾತ: ಕೇವಲ ಮೂರು ತಿಂಗಳಲ್ಲಿ205 ಸಾವು
ಪ್ರಾತಿನಿಧಿಕ ಚಿತ್ರ
Image Credit source: indiatoday.in
Follow us on

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. ಬೆಂಗಳೂರು ನಗರ ಸಂಚಾರಿ ಪೊಲೀಸರ ಬಳಿ ಇರುವ ಅಂಕಿ ಅಂಶ ಬೆಚ್ಚಿ ಬೀಳಿಸುವಂತಿದೆ. ಕಳೆದ ಮೂರು ತಿಂಗಳಲ್ಲಿ ಬರೋಬ್ಬರಿ 205 ಮಂದಿ ಬೆಂಗಳೂರು ನಗರವೊಂದರಲ್ಲೇ ರಸ್ತೆ ಅಪಘಾತದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. 2023ರ ಆರಂಭದಿಂದ ಮಾರ್ಚ್‌ ಅಂತ್ಯದವರೆಗೂ ಬೆಂಗಳೂರಿನಲ್ಲಿ ಒಟ್ಟು 1,197 ರಸ್ತೆ ಅಪಘಾತಗಳು ಸಂಭವಿಸಿವೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸರ ಬಳಿ ಇರುವ ಅಂಕಿ ಅಂಶಗಳು ಹೇಳುತ್ತಿವೆ.

ಬೆಂಗಳೂರಿನಲ್ಲಿ ಕಳೆದ ಮೂರು ತಿಂಗಳಲ್ಲಿ 1,051 ಮಂದಿ ರಸ್ತೆ ಅಪಘಾತದಿಂದಾಗಿ ಗಾಯಗೊಂಡಿದ್ದಾರೆ. ಕಳೆದ 3 ತಿಂಗಳಲ್ಲಿ 300 ಮಾರಣಾಂತಿಕ ಹಾಗೂ 997 ಮಾರಣಾಂತಿಕವಲ್ಲದ ರಸ್ತೆ ಅಪಘಾತಗಳು ಬೆಂಗಳೂರಿನಲ್ಲಿ ಸಂಭವಿಸಿವೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸರ ಬಳಿ ಇರುವ ಅಂಕಿ ಅಂಶಗಳ ಮೂಲಕ ತಿಳಿದು ಬಂದಿದೆ. ಅಲ್ಲದೆ ಬೆಂಗಳೂರಿನಲ್ಲಿ ಇರುವ ಕೆಟ್ಟ ರಸ್ತೆಗಳು, ಅತಿ ವೇಗದ ಚಾಲನೆ, ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವುದೇ ಈ ಅಪಘಾತಗಳಿಗೆ ಕಾರಣ ಎಂದು ವಾಹನ ಸವಾರರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾರು-ಬೈಕ್ ನಡುವಿನ ಭೀಕರ ಅಪಘಾತ: ಬಾನೆಟ್ ಮೇಲೆ ಹಾರಿ ಬಿದ್ದ ಬೈಕ್ ಸವಾರ, ಭಯಾನಕ ದೃಶ್ಯ ವೈರಲ್

ಮತ್ತೊಂದೆಡೆ ಬೆಂಗಳೂರು ಮಹಾ ನಗರ ಸಂಚಾರಿ ಪೊಲೀಸರ ಬಳಿ ಇರುವ ದಾಖಲೆಗಳ ಪ್ರಕಾರ, ಬೆಂಗಳೂರಿನಲ್ಲಿ ನಿರ್ಲಕ್ಷ್ಯದ ವಾಹನ ಚಾಲನೆ ಸಂಬಂಧ ಕಳೆದ ಮೂರು ತಿಂಗಳಲ್ಲಿ 660 ಪ್ರಕರಣಗಳು ದಾಖಲಾಗಿವೆ. ಅತಿ ವೇಗದ ವಾಹನ ಚಾಲನೆ ಸಂಬಂಧ 917 ಪ್ರಕರಣಗಳು ದಾಖಲಾಗಿವೆ. ಇನ್ನು ಸಿಗ್ನಲ್ ಜಂಪ್, ಲೇನ್ ಶಿಸ್ತು ಉಲ್ಲಂಘನೆ ಸಂಬಂಧ 2,32,626 ಪ್ರಕರಣಗಳು ದಾಖಲಾಗಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ