ವರ್ಗಾವಣೆಗೆ ಮೊರೆ ಹೋದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ 35ಕ್ಕೂ ಹೆಚ್ಚು ಸಿಬ್ಬಂದಿ!
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ತಮ್ಮನ್ನು ಬೇರೆ ಕಡೆಗೆ ವರ್ಗಾವಣೆ ಮಾಡುವಂತೆ ಕೋರಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ 35ಕ್ಕೂ ಹೆಚ್ಚು ಸಿಬ್ಬಂದಿ ಪತ್ರ ಬರೆದಿರುವುದು ಅಚ್ಚರಿಗೆ ಕಾರಣವಾಗಿದೆ. ಈ ಸಾಮೂಹಿಕ ವರ್ಗಾವಣೆ ವಿಚಾರ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರು, ನ.12: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ತಮ್ಮನ್ನು ಬೇರೆ ಕಡೆಗೆ ವರ್ಗಾವಣೆ ಮಾಡುವಂತೆ ನಗರದ (Bengaluru) ಕೋರಿ ಕಬ್ಬನ್ ಪಾರ್ಕ್ (Cubbon Park) ಪೊಲೀಸ್ ಠಾಣೆಯ 35ಕ್ಕೂ ಹೆಚ್ಚು ಸಿಬ್ಬಂದಿ ಪತ್ರ ಬರೆದಿರುವುದು ಅಚ್ಚರಿಗೆ ಕಾರಣವಾಗಿದೆ.
ಕಬ್ಬನ್ ಪಾರ್ಕ್ ಠಾಣೆಯ 12 ಮಂದಿ ಎಎಸ್ಐ ಹಾಗೂ 24 ಮಂದಿ ಹೆಡ್ ಪೊಲೀಸ್ ಕಾನ್ಸ್ಟೇಬಲ್ಗಳು ವರ್ಗಾವಣೆಗೆ ಮನವಿ ಮಾಡಿದ್ದಾರೆ. ಸದ್ಯ ಠಾಣಾಧಿಕಾರಿಯಿಂದ ಬೇಸತ್ತು ವರ್ಗಾವಣೆಗೆ ಮನವಿ ಮಾಡಿದ್ದಾರಾ ಎನ್ನುವ ಪ್ರಶ್ನೆಯೂ ಉದ್ಭವಿಸಿದೆ.
ಸಿಬ್ಬಂದಿಯ ಸಾಮೂಹಿಕ ವರ್ಗಾವಣೆ ವಿಚಾರ ಗೃಹ ಇಲಾಖೆಯಲ್ಲಿ ಚರ್ಚೆಗೆ ಕಾರಣವಾಗಿದೆ. ಹಾಗಾದರೆ, ಬಹುತೇಕ ಠಾಣಾ ಸಿಬ್ಬಂದಿ ವರ್ಗಾವಣೆಗೆ ಮೊರೆ ಹೋಗಿದ್ಯಾಕೆ? ಠಾಣಾಧಿಕಾರಿ ಗಿರೀಶ್ ಅವರಿಂದ ಬೇಸತ್ತು ವರ್ಗಾವಣೆಗೆ ಮೊರೆ ಹೋದ್ರಾ? ಎನ್ನುವ ಪ್ರಶ್ನೆ ಎದ್ದಿದೆ.
ಬಹುತೇಕ ಸೆಂಟ್ರಲ್ ಡಿವಿಷನ್ನಲ್ಲೇ ಕರ್ತವ್ಯ ನಿರ್ವಹಿಸಿರುವ ಗಿರೀಶ್, ಅಶೋಕನಗರ, ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಕಬ್ಬನ್ ಪಾರ್ಕ್ ಠಾಣೆ ಇನ್ಸ್ಪೆಕ್ಟರ್ ಆಗಿ ಗಿರೀಶ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ