ಬೆಂಗಳೂರೊಂದರಲ್ಲೇ 38,888 ಎಕರೆ ಸರ್ಕಾರಿ ಜಮೀನು ಅತಿಕ್ರಮಣ! ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ

ಬೆಂಗಳೂರು ನಗರ ಜಿಲ್ಲೆಯಲ್ಲಿ 14,660 ಪ್ರಕರಣಗಳಲ್ಲಿ 38,888 ಎಕರೆ ಸರಕಾರಿ ಜಮೀನನ್ನು ಖಾಸಗಿಯವರು ಅತಿಕ್ರಮಿಸಿಕೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 38,546 ಪ್ರಕರಣಗಳಲ್ಲಿ 36,229 ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ

ಬೆಂಗಳೂರೊಂದರಲ್ಲೇ 38,888 ಎಕರೆ ಸರ್ಕಾರಿ ಜಮೀನು ಅತಿಕ್ರಮಣ! ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ
ಆರ್​. ಅಶೋಕ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 15, 2021 | 8:31 PM

ಬೆಳಗಾವಿ: ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಸರ್ಕಾರ ಜಮೀನನ್ನು ಖಾಸಗಿಯವರು ಅತಿಕ್ರಮಿಸಿಕೊಂಡಿರುವುದನ್ನು ಎಚ್ಚೆತ್ತಿರುವ ರಾಜ್ಯ ಸರ್ಕಾರ, ತನ್ನ ಜಮೀನನ್ನು ವಶಪಡಿಸಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಂಡಿದೆ ಮತ್ತು ಭೂಕಬಳಿಕೆ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯವನ್ನು ಸಹ ಸ್ಥಾಪನೆ ಮಾಡಿದೆ. ವಿಧಾನ ಪರಿಷತ್‍ನಲ್ಲಿ ಕಂದಾಯ ಸಚಿವ ಆರ್. ಅಶೋಕ ಅವರು ಡಾ. ವೈ.ಎ. ನಾರಾಯಣ ಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸವಿವರವಾಗಿ ಉತ್ತರಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 14,660 ಪ್ರಕರಣಗಳಲ್ಲಿ 38,888 ಎಕರೆ ಸರಕಾರಿ ಜಮೀನನ್ನು ಖಾಸಗಿಯವರು ಅತಿಕ್ರಮಿಸಿಕೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 38,546 ಪ್ರಕರಣಗಳಲ್ಲಿ 36,229 ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬುದನ್ನು ವಿವರಿಸಿದ ಸಚಿವ ಆರ್​. ಅಶೋಕ್ ಜನರು ಅತಿಕ್ರಮಿಸಲ್ಪಟ್ಟ ಗೋಮಾಳ ಮತ್ತು ಸರಕಾರಿ ಜಮೀನುಗಳ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ 4,940 ಪ್ರಕರಣಗಳಲ್ಲಿ 16,420 ಎಕರೆ, ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ 10,892 ಪ್ರಕರಣಗಳಲ್ಲಿ 11,779 ಎಕರೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.

ಬೆಂಗಳೂರು ಜಿಲ್ಲಾಧಿಕಾರಿಗೆ ಪ್ರತಿ ಶನಿವಾರ ಒತ್ತುವರಿ ಪ್ರಕರಣಗಳ ಪರಿಶೀಲನೆ ಜವಾಬ್ದಾರಿ ವಹಿಸಲಾಗಿದೆ. ಸರ್ಕಾರಿ ಜಮೀನುಗಳ ಒತ್ತುವರಿಯನ್ನು ತೆರವುಗೊಳಿಸಲು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡಿಸಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿರುವುದನ್ನು ಹಾಗೂ ಸಮಿತಿಗಳು ಕಾರ್ಯ ಪ್ರವೃತ್ತರಾಗಿರುವುದನ್ನು ಸದನದ ಗಮನಕ್ಕೆ ತಂದ ಸಚಿವ ಅಶೋಕ ಅವರು ಬೆಂಗಳೂರು ನಗರದಲ್ಲಿ ಅಪಾರ ಪ್ರಮಾಣದಲ್ಲಿ ಒತ್ತುವರಿಯಾಗಿರುವ ಸರಕಾರಿ ಜಮೀನನ್ನು ವಶಕ್ಕೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಪ್ರತಿ ಶನಿವಾರ ಈ ಒತ್ತುವರಿ ಪ್ರಕರಣಗಳ ಪರಿಶೀಲನೆ ಮತ್ತು ವಶಕ್ಕೆ ಪಡೆದುಕೊಳ್ಳುವುದಕ್ಕೆ ಸಂಬಂಧಿಸಿದ ಜವಾಬ್ದಾರಿಗಳನ್ನು ವಹಿಸಲಾಗಿದೆ ಎಂದರು.

ರಾಜ್ಯದಲ್ಲಿ 62,72,811 ಎಕರೆ ಸರ್ಕಾರಿ ಜಮೀನು: ರಾಜ್ಯದಲ್ಲಿ ಒಟ್ಟು 62,72,811 ಎಕರೆ ಸರ್ಕಾರಿ ಜಮೀನು ಇದೆ. ಇದರಲ್ಲಿ ಒಟ್ಟು 14,27,195 ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದೆ. ವಿವಿಧ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಒಟ್ಟು 9,732 ಎಕರೆ, ಅಕ್ರಮ-ಸಕ್ರಮ ಯೋಜನೆ ಅಡಿ ಅರ್ಜಿ ಸಲ್ಲಿಸಿದ 9,97,198 ಎಕರೆ ಹಾಗೂ ಸಾರ್ವಜನಿಕ ಉದ್ದೇಶಗಳಿಗೆ ಬಳಕೆಯಾಗಿರುವ 14,048 ಎಕರೆ ಸರ್ಕಾರಿ ಜಮೀನು ಹೊರತುಪಡಿಸಿ 4,06,217 ಎಕರೆ ಒತ್ತುವರಿ ಜಮೀನು ತೆರವುಗೊಳಿಸಬೇಕಾಗಿದೆ ಎಂದು ವಿವರಿಸಿದ ಸಚಿವ ಆರ್​. ಅಶೋಕ್ ಇದರಲ್ಲಿ 2021ರ ನವೆಂಬರ್ 30ರವರೆಗೆ 2,70,108 ಎಕರೆ ಸರಕಾರಿ ಜಮೀನು ತೆರವುಗೊಳಿಸಲಾಗಿದೆ. ಉಳಿದಂತೆ 1,36,109 ಎಕರೆ ಒತ್ತುವರಿ ತೆರವುಗೊಳಿಸಲು ಬಾಕಿ ಇದ್ದು, ಹಂತಹಂತವಾಗಿ ತೆರವುಗೊಳಿಸಲು ಕ್ರಮ ವಹಿಸಲಾಗುವುದು ಎಂದರು.

ಒತ್ತುವರಿ ಪ್ರಕರಣಗಳ ತಡೆಗೆ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಸ್ಥಾಪನೆ: ಒತ್ತುವರಿ ಪ್ರಕರಣಗಳನ್ನು ಸಮರ್ಥವಾಗಿ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವನ್ನು ರಚಿಸಲಾಗಿದೆ ಎಂದು ಸಚಿವ ಅಶೋಕ ಅವರು ವಿವರಿಸಿದರು.

ಒತ್ತುವರಿದಾರರ ವಿರುದ್ಧ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ 20,841 ಪ್ರಕರಣಗಳನ್ನು ದಾಖಲಿಸಲಾಗಿದ್ದು 4,712 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. 16,129 ಪ್ರಕರಣಗಳು ಬಾಕಿ ಇವೆ. 61 ಜನರಿಗೆ ಒಂದು ವರ್ಷದಂತೆ ಶಿಕ್ಷೆ ವಿಧಿಸಲಾಗಿದೆ ಎಂದರು.

ಇದನ್ನೂ ಓದಿ: ರಾಮ ಮಂದಿರ ಟ್ರಸ್ಟ್​​ ಪ್ರಧಾನ ಕಾರ್ಯದರ್ಶಿ ಚಂಪತ್​ ರಾಯ್​ ವಿರುದ್ಧ ಭೂಕಬಳಿಕೆ ಆರೋಪ ಮಾಡಿದ್ದ ಪತ್ರಕರ್ತ ಸೇರಿ ಮೂವರ ವಿರುದ್ಧ ಎಫ್​ಐಆರ್​

ಕರ್ನಾಟಕದಲ್ಲಿ ಬರೋಬ್ಬರಿ 1.77 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿ; ಮಲೆನಾಡಿನಲ್ಲೇ ಹೆಚ್ಚು ಭೂ ಕಬಳಿಕೆ

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ