AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪಟಾಕಿ ಅವಘಡ, ದೀಪಾವಳಿಯ 2ನೇ ದಿನ ಗಾಯಗೊಂಡವರ ಸಂಖ್ಯೆ 43ಕ್ಕೆ ಏರಿಕೆ

Deepavali firecracker mishaps: ದೀಪಾವಳಿ ಅಂದ್ರೆ ಬೆಳಕಿನ ಹಬ್ಬ. ಬದುಕಿಗೆ ಆವರಿಸಿದ ಕತ್ತಲು ಕವಿದು ಹೊಸ ಬೆಳಕು ಚೆಲ್ಲೋ ಹಬ್ಬ. ಆದ್ರೆ ಇದೇ ದೀಪಾವಳಿ ಕೆಲವರ ಬಾಳಿಕೆ ಕತ್ತಲು ತಂದಿದೆ. ಯಾರೋ ಹಚ್ಚಿದ ಪಟಾಕಿ ದಾರಿ ಹೋಕರ ಕಣ್ಣಿಗೆ ಆಪತ್ತು ತಂದಿದೆ. ಅಷ್ಟಕ್ಕೂ ಹಬ್ಬದ ಪಟಾಕಿ ಅವಘಡ ಬೆಂಗಳೂರಿನಲ್ಲಿ ಎಷ್ಟು ಜನರನ್ನ ಆಸ್ಪತ್ರೆಗೆ ಸೇರಿಸಿದೆ ಎನ್ನುವ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ ಪಟಾಕಿ ಅವಘಡ, ದೀಪಾವಳಿಯ 2ನೇ ದಿನ ಗಾಯಗೊಂಡವರ ಸಂಖ್ಯೆ 43ಕ್ಕೆ ಏರಿಕೆ
Poornima Agali Nagaraj
| Updated By: ರಮೇಶ್ ಬಿ. ಜವಳಗೇರಾ|

Updated on:Nov 14, 2023 | 10:07 AM

Share

ಬೆಂಗಳೂರು, (ನವೆಂಬರ್ 14): ಈ ಬಾರಿ ದೀಪಾವಳಿಯಲ್ಲಿ (Deepavali) ಹೆಚ್ಚು ಶಬ್ಧ, ಮಾಲಿನ್ಯ ಮಾಡುವ ಪಟಾಕಿಗಳಿಗೆ ಬ್ರೇಕ್‌ ಬಿದ್ದಿದೆ. ಕಳೆದ ದೀಪಾವಳಿಗೆ ಹೋಲಿಸಿದರೆ, ಈ ಬಾರಿ ಪಟಾಕಿ(firecrackers) ಅಬ್ಬರ ಕಡಿಮೆ ಇದೆ. ಇಷ್ಟಾದರೂ ಸಹ ಅವಘಡಗಳು ಮಾತ್ರ ಕಡಿಮೆ ಆಗಿಲ್ಲ. ಪಟಾಕಿ ಸಂಬಂಧಿತ ಅವಘಡದಿಂದ ಬೆಂಗಳೂರಿನಲ್ಲಿ ಗಾಯಗೊಂಡವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ. ಗಾಯಗೊಂಡವರ ಪೈಕಿ ಸರ್ಕಾರಿ ಆಸ್ಪತ್ರಗೆ 17 ಜನ ದಾಖಲಾಗಿದ್ದರೆ, 26 ಜನ ಖಾಸಗಿ ಆಸ್ಪತ್ರೆ ಬಾಗಿಲು ತಟ್ಟಿದ್ದಾರೆ.

ದೀಪಾವಳಿಯ ಮೊದಲ ದಿನ ಅಂದರೆ ನರಕ ಚತುರ್ದಶಿಯಂದು (ನವೆಂಬರ್ 12) ಮಕ್ಕಳು ಸೇರಿದಂತೆ 26 ಜನರು ಗಾಯಗೊಂಡಿದ್ದರು. ಇದೀಗ ದೀಪಾವಳಿ 2ನೇ ದಿನ ಅಮಾವಸ್ಯೆಯಂದು (ನವೆಂಬರ್ 13) ಗಾಯಗೊಂಡವರ ಸಂಖ್ಯೆ 26ರಿಂದ 43ಕ್ಕೆ ಏರಿಕೆಯಾಗಿದೆ. ನವೆಂಬರ್ 12 ರಿಂದ ಇಲ್ಲಿಯವರೆಗೆ ನಾರಾಯಣ ನೇತ್ರಾಲಯದಲ್ಲಿ ಪಟಾಕಿ ಅವಘಡದ 26 ಕೇಸ್ ದಾಖಲಾಗಿವೆ. ಈ ಪೈಕಿ ಐವರಿಗೆ ಗಂಭೀರ ಗಾಯವಾಗಿದೆ. 26 ಜನರ ಪೈಕಿ ಇನ್ನೊಬ್ಬರು ಸಿಡಿಸಿದ ಪಟಾಕಿಯಿಂದಲೇ 12 ಮಂದಿಗೆ ಗಾಯಗಳಾಗಿವೆ. ಸ್ವತಃ ಪಟಾಕಿ ಸಿಡಿಸುತ್ತಿದ್ದಾಗ ಗಾಯಗೊಂಡವರ ಸಂಖ್ಯೆ 14.

ಇದನ್ನೂ ಓದಿ: ದೀಪಾವಳಿ ಮೊದಲ ದಿನ ಪಟಾಕಿ ಸಿಡಿತಕ್ಕೆ ಬೆಂಗಳೂರಿನಲ್ಲಿ 26 ಜನರಿಗೆ ಗಾಯ

ನಿನ್ನೆ(ಸೋಮವಾರ) ರಾಮಮೂರ್ತಿ ನಗರದ ಮೂರುವರೆ ವರ್ಷದ ಮಗುವಿಗೂ ಪಟಾಕಿಯಿಂದ ಗಂಭೀರ ಗಾಯವಾಗಿದೆ. ಸುರುಸುರು ಬತ್ತಿ ಹಚ್ಚುವಾಗ ಕಣ್ಣಿಗೆ ಕಿಡಿ ತಾಗಿದ್ದು, ಮಗುವಿಗೆ ಮೈನರ್‌ ಇಂಜುರಿಯಾಗಿದೆ. ಇನ್ನು ಶ್ರೀರಾಂಪುರದ ಯುವಕನೊಬ್ಬ ಏರಿಯಾದಲ್ಲಿ ನಡೆದುಕೊಂಡು ಹೋಗುತ್ತಿದ್ದ ಈ ವೇಳೆ ಯಾರೋ ಹಚ್ಚಿದ ಪಟಾಕಿ ಯುವಕನ ಕಣ್ಣಿಗೆ ಸಿಡಿದಿದೆ. ಇದರಿಂದ ಐಬಾಲ್‌ಗೆ ಗಂಭೀರ ಗಾಯ ಆಗಿದ್ದು, ಒಳಗಡೆ ರಕ್ತ ಹೆಪ್ಪುಗಟ್ಟಿದೆ. ಇದೇ ರೀತಿ ಬನ್ನೇರುಘಟ್ಟದ ವ್ಯಕ್ತಿಯ ಕಣ್ಣಿಗೆ ಲಕ್ಷ್ಮೀ ಪಟಾಕಿ ಸಿಡಿದು ಗಾಯವಾಗಿದೆ.

ಸಂಜೆ 6 ರ ವರೆಗೆ ಮಾತ್ರ ಪಟಾಕಿ ಮಾರಾಟಕ್ಕೆ ಬಿಬಿಎಂಪಿ ಅವಕಾಶ ನೀಡಿದೆ. ಆದ್ರೆ, ರಾತ್ರಿ 10 ಗಂಟೆ ಆದರೂ ವಿಜಯನಗರದ ಆರ್ ಪಿಸಿ ಲೇಔಟ್ ನಲ್ಲಿರೋ ಮೈದಾನದಲ್ಲಿ ಪಟಾಕಿ ಮಾರಾಟ ಮಾಡಲಾಗಿದೆ. ಹೀಗಾಗಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡಿದರೂ, ಯಾವುದೇ ಕ್ರಮವಿಲ್ಲ ಎಂದು ಗಿರೀಶ್​ ಎನ್ನುವರ ಟ್ವಿಟರ್​ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: Deepavali: ಆಕಸ್ಮಿಕವಾಗಿ ಪಟಾಕಿ ಕಿಡಿ ಕಣ್ಣಿಗೆ ಬಿದ್ದರೆ ಏನು ಮಾಡಬೇಕು, ಏನು ಮಾಡಬಾರದು?

ಹತ್ತಾರು ರೂಲ್ಸ್‌ ಹಾಕಿರುವುದರಿಂದ ಪಟಾಕಿ ಹೊಡೆಯೋರ ಸಂಖ್ಯೆ ಕಡಿಮೆ ಆಗಿದೆಯಾದರೂ ಅವಘಡಗಳು ಮಾತ್ರ ನಡೆಯುತ್ತಲೇ ಇವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:05 am, Tue, 14 November 23

ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ