ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಶಾಕ್! ಕರ್ನಾಟಕದಲ್ಲಿ 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ದಾಳಿ

ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಶಾಕ್! ಕರ್ನಾಟಕದಲ್ಲಿ 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ದಾಳಿ
ಎಂಬೆಸ್ಸಿ ಆರ್ಕೆಡ್ ಅಪಾರ್ಟ್​ಮೆಂಟ್​ನ ಫ್ಲ್ಯಾಟ್

ಸದಾಶಿವನಗರದ ಎಂಬೆಸ್ಸಿ ಆರ್ಕೆಡ್ ಅಪಾರ್ಟ್​ಮೆಂಟ್​ನ ನರಪತ್ ಸಿಂಗ್ ಚರೋಡಿ ಎಂಬುವರರ ಫ್ಲ್ಯಾಟ್ ನಂಬರ್ 602ರ ಮೇಲೆ ದಾಳಿ ನಡೆದಿದ್ದು, ನಾಲ್ವರು ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆಯುತ್ತಿದೆ.

TV9kannada Web Team

| Edited By: sandhya thejappa

Jun 01, 2022 | 1:00 PM

ಬೆಂಗಳೂರು: ರಾಜ್ಯದಲ್ಲಿ ಇಂದು (ಜೂನ್ 1) ಬೆಳ್ಳಂಬೆಳಗ್ಗೆ 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳು (IT Officials) 30ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ಗೋವಾ-ಕರ್ನಾಟಕ ಐಟಿ ಅಧಿಕಾರಿಗಳ ತಂಡದಿಂದ ಉದ್ಯಮಿಗಳ ಮನೆಗಳ ಮೇಲೆ ದಾಳಿ ನಡೆದಿದೆ. ಆದಾಯ ಮರೆಮಾಚಿ ಐಟಿ ರಿಟರ್ನ್ಸ್ (IT Returns) ಸಲ್ಲಿಕೆಗಿಂತೆ ಹೆಚ್ಚಿನ ಆದಾಯ ಹೊಂದಿರುವ ಆರೋಪದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸದಾಶಿವನಗರದ ಎಂಬೆಸ್ಸಿ ಆರ್ಕೆಡ್ ಅಪಾರ್ಟ್​ಮೆಂಟ್​ನ ನರಪತ್ ಸಿಂಗ್ ಚರೋಡಿ ಎಂಬುವರರ ಫ್ಲ್ಯಾಟ್ ನಂಬರ್ 602ರ ಮೇಲೆ ದಾಳಿ ನಡೆದಿದ್ದು, ನಾಲ್ವರು ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆಯುತ್ತಿದೆ.

ಎಂಬೆಸ್ಸಿ ಗ್ರೂಪ್​ನ ಎಂಡಿ ಜಿತು ವಿರ್ವಾನಿ, ನಿರ್ದೇಶಕ ನರಪತ್ ಸಿಂಗ್ ಚರೋರಿಯಾ ಮನೆಗಳು ಹಾಗೂ ಫ್ಲಾಟ್ ಮೇಲೆ ದಾಳಿ ನಡೆದಿದೆ. ಜೊತೆಗೆ ರಾಜ್ಯಾದ್ಯಂತ ಇರುವ ಎಂಬೆಸ್ಸಿ ಕಚೇರಿಗಳ ಮೇಲೆ ದಾಳಿ ನಡೆದಿದೆ.

ಇದನ್ನೂ ಓದಿ: Vikram Movie on Burj Khalifa: ಕಿಚ್ಚ ಸುದೀಪ್​ ಹಾದಿಯಲ್ಲಿ ಸಾಗ್ತಿದ್ದಾರೆ ಕಮಲ್​ ಹಾಸನ್​; ಕನ್ನಡದ ಟ್ರೆಂಡ್​ ಫಾಲೋ ಮಾಡ್ತಿದೆ ‘ವಿಕ್ರಮ್​’ ಚಿತ್ರ

ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ದಾಳಿ: ಈ ಹಿಂದೆ ಅಂದರೆ ಮೇ 28ಕ್ಕೆ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್​ಗೆ ನಡೆದಿದ್ದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಉಮ್ರಾ ಡೆವಲಪರ್ಸ್ ಕಂಪನಿ ಮಾಲೀಕರಾಗಿರುವ ಕೆಜಿಎಫ್ ಬಾಬು ನಿವಾಸದಲ್ಲಿ ಅಧಿಕಾರಿಗಳು ಸಿಆರ್​ಪಿಎಫ್​ಭದ್ರತೆಯಲ್ಲಿ ಪರಿಶೀಲನೆ ನಡೆಸಿದ್ದರು. ಈಗಾಗಲೇ ಸ್ಕ್ರಾಪ್ ಉದ್ಯಮದಲ್ಲಿ ಕೋಟ್ಯಂತರ ರೂಪಾಯಿ ಗಳಿಸಿದ್ದಾಗಿ ಯೂಸುಫ್ ಶರೀಫ್@ಕೆಜಿಎಫ್ ಬಾಬು ಕೆಲವೆಡೆ ಹೇಳಿಕೊಂಡಿದ್ದರು. ಕೆಜಿಎಫ್ ಬಾಬು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಸದ್ಯ 2023ರ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಕೋಲಾರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಇದನ್ನೂ ಓದಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on

Related Stories

Most Read Stories

Click on your DTH Provider to Add TV9 Kannada