ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಶಾಕ್! ಕರ್ನಾಟಕದಲ್ಲಿ 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ದಾಳಿ

| Updated By: sandhya thejappa

Updated on: Jun 01, 2022 | 1:00 PM

ಸದಾಶಿವನಗರದ ಎಂಬೆಸ್ಸಿ ಆರ್ಕೆಡ್ ಅಪಾರ್ಟ್​ಮೆಂಟ್​ನ ನರಪತ್ ಸಿಂಗ್ ಚರೋಡಿ ಎಂಬುವರರ ಫ್ಲ್ಯಾಟ್ ನಂಬರ್ 602ರ ಮೇಲೆ ದಾಳಿ ನಡೆದಿದ್ದು, ನಾಲ್ವರು ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆಯುತ್ತಿದೆ.

ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಶಾಕ್! ಕರ್ನಾಟಕದಲ್ಲಿ 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ದಾಳಿ
ಎಂಬೆಸ್ಸಿ ಆರ್ಕೆಡ್ ಅಪಾರ್ಟ್​ಮೆಂಟ್​ನ ಫ್ಲ್ಯಾಟ್
Follow us on

ಬೆಂಗಳೂರು: ರಾಜ್ಯದಲ್ಲಿ ಇಂದು (ಜೂನ್ 1) ಬೆಳ್ಳಂಬೆಳಗ್ಗೆ 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳು (IT Officials) 30ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ಗೋವಾ-ಕರ್ನಾಟಕ ಐಟಿ ಅಧಿಕಾರಿಗಳ ತಂಡದಿಂದ ಉದ್ಯಮಿಗಳ ಮನೆಗಳ ಮೇಲೆ ದಾಳಿ ನಡೆದಿದೆ. ಆದಾಯ ಮರೆಮಾಚಿ ಐಟಿ ರಿಟರ್ನ್ಸ್ (IT Returns) ಸಲ್ಲಿಕೆಗಿಂತೆ ಹೆಚ್ಚಿನ ಆದಾಯ ಹೊಂದಿರುವ ಆರೋಪದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸದಾಶಿವನಗರದ ಎಂಬೆಸ್ಸಿ ಆರ್ಕೆಡ್ ಅಪಾರ್ಟ್​ಮೆಂಟ್​ನ ನರಪತ್ ಸಿಂಗ್ ಚರೋಡಿ ಎಂಬುವರರ ಫ್ಲ್ಯಾಟ್ ನಂಬರ್ 602ರ ಮೇಲೆ ದಾಳಿ ನಡೆದಿದ್ದು, ನಾಲ್ವರು ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆಯುತ್ತಿದೆ.

ಎಂಬೆಸ್ಸಿ ಗ್ರೂಪ್​ನ ಎಂಡಿ ಜಿತು ವಿರ್ವಾನಿ, ನಿರ್ದೇಶಕ ನರಪತ್ ಸಿಂಗ್ ಚರೋರಿಯಾ ಮನೆಗಳು ಹಾಗೂ ಫ್ಲಾಟ್ ಮೇಲೆ ದಾಳಿ ನಡೆದಿದೆ. ಜೊತೆಗೆ ರಾಜ್ಯಾದ್ಯಂತ ಇರುವ ಎಂಬೆಸ್ಸಿ ಕಚೇರಿಗಳ ಮೇಲೆ ದಾಳಿ ನಡೆದಿದೆ.

ಇದನ್ನೂ ಓದಿ: Vikram Movie on Burj Khalifa: ಕಿಚ್ಚ ಸುದೀಪ್​ ಹಾದಿಯಲ್ಲಿ ಸಾಗ್ತಿದ್ದಾರೆ ಕಮಲ್​ ಹಾಸನ್​; ಕನ್ನಡದ ಟ್ರೆಂಡ್​ ಫಾಲೋ ಮಾಡ್ತಿದೆ ‘ವಿಕ್ರಮ್​’ ಚಿತ್ರ

ಇದನ್ನೂ ಓದಿ
KK Death Case: ಸಿಂಗರ್​ ಕೆಕೆ ಸಾವಿನಲ್ಲಿ ಮೂಡಿದೆ ಅನುಮಾನ; ಮುಖ, ತಲೆಯಲ್ಲಿ ಗಾಯದ ಗುರುತು? ಕೇಸ್​ ದಾಖಲು
2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣು, ಕೇಂದ್ರ ಸಚಿವ ಸಂಪುಟ ಮತ್ತೆ ಪುನರ್​ರಚನೆ ಸಾಧ್ಯತೆ
ಸಾರ್ವಜನಿಕ ಸ್ಥಳದಲ್ಲಿ ನಟಿಯ ಬೆತ್ತಲೆ ಫೋಟೋಶೂಟ್​ ಕೇಸ್​; ಪೂನಂ ಪಾಂಡೆ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ
ಅನಂತರಾಜು ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್​​​​: ಡೆತ್​ನೋಟ್ ಇಟ್ಟುಕೊಂಡು ರೇಖಾಗೆ ಧಮ್ಕಿ ಹಾಕಿದರಾ ಸುಮಾ? ಮತ್ತೊಂದು ಆಡಿಯೋ ಲಭ್ಯ

ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ದಾಳಿ:
ಈ ಹಿಂದೆ ಅಂದರೆ ಮೇ 28ಕ್ಕೆ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್​ಗೆ ನಡೆದಿದ್ದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಉಮ್ರಾ ಡೆವಲಪರ್ಸ್ ಕಂಪನಿ ಮಾಲೀಕರಾಗಿರುವ ಕೆಜಿಎಫ್ ಬಾಬು ನಿವಾಸದಲ್ಲಿ ಅಧಿಕಾರಿಗಳು ಸಿಆರ್​ಪಿಎಫ್​ಭದ್ರತೆಯಲ್ಲಿ ಪರಿಶೀಲನೆ ನಡೆಸಿದ್ದರು. ಈಗಾಗಲೇ ಸ್ಕ್ರಾಪ್ ಉದ್ಯಮದಲ್ಲಿ ಕೋಟ್ಯಂತರ ರೂಪಾಯಿ ಗಳಿಸಿದ್ದಾಗಿ ಯೂಸುಫ್ ಶರೀಫ್@ಕೆಜಿಎಫ್ ಬಾಬು ಕೆಲವೆಡೆ ಹೇಳಿಕೊಂಡಿದ್ದರು. ಕೆಜಿಎಫ್ ಬಾಬು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಸದ್ಯ 2023ರ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಕೋಲಾರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:10 am, Wed, 1 June 22