AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೆ ಸಾಲುಸಾಲು ರಜೆ: ಬೆಂಗಳೂರು ವಿಮಾನ ನಿಲ್ದಾಣದಿಂದ ಒಂದೇ ದಿನ 75 ಸಾವಿರಕ್ಕೂ ಹೆಚ್ಚು ಜನರ ಪ್ರಯಾಣ

Bengaluru Airport: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳತ್ತ ಪ್ರಯಾಣಿಕರು ಪ್ರಯಾಣ ಬೆಳೆಸುತ್ತಿದ್ದು ಬೆಳಗಿನಿಂದಲೆ ಏರ್ಪೋಟ್ ನಲ್ಲಿ ಹೆಚ್ಚಿನ ಜನಸಂದಣಿ ಕಂಡು ಬರ್ತಿದೆ.

ದೀಪಾವಳಿಗೆ ಸಾಲುಸಾಲು ರಜೆ: ಬೆಂಗಳೂರು ವಿಮಾನ ನಿಲ್ದಾಣದಿಂದ ಒಂದೇ ದಿನ 75 ಸಾವಿರಕ್ಕೂ ಹೆಚ್ಚು ಜನರ ಪ್ರಯಾಣ
ಬೆಂಗಳೂರು ವಿಮಾನ ನಿಲ್ದಾಣ
TV9 Web
| Updated By: ಆಯೇಷಾ ಬಾನು|

Updated on:Oct 23, 2022 | 1:43 PM

Share

ದೇವನಹಳ್ಳಿ: ಬೆಳಕಿನ ಹಬ್ಬ ದೀಪಾವಳಿ(Deepavali) ಪ್ರಯುಕ್ತ ಸಾಲು ಸಾಲು ರಜೆಗಳು ಬಂದಿದ್ದು ಬೆಂಗಳೂರಿನಲ್ಲಿ ನೆಲೆಸಿದ್ದ ಸಾಕಷ್ಟು ಜನರು ಕುಟುಂಬಸ್ಥರ ಜೊತೆ ಹಬ್ಬ ಆಚರಣೆ ಮಾಡಲು ಹೊರ ರಾಜ್ಯಗಳತ್ತ ಹೊರಟಿದ್ದಾರೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ(Kempegowda International Airport Bengaluru)  ಹೊರ ರಾಜ್ಯಗಳತ್ತ ಪ್ರಯಾಣಿಕರು ಪ್ರಯಾಣ ಬೆಳೆಸುತ್ತಿದ್ದು ಬೆಳಗಿನಿಂದಲೆ ಏರ್ಪೋಟ್ ನಲ್ಲಿ ಹೆಚ್ಚಿನ ಜನಸಂದಣಿ ಕಂಡು ಬರ್ತಿದೆ. ಅಲ್ಲದೆ ಇಂದು ಬಂದೇ ದಿನ ದಾಖಲೆ ರೀತಿಯಲ್ಲಿ ಕೆಐಎಬಿಯಿಂದ 75 ಸಾವಿರ ಪ್ರಯಾಣಿಕರು ಪ್ರಯಾಣಿಸಿದ್ದಾರೆ.

ಇಂದು ಒಂದು ದಿನ ಮಾತ್ರವೆ ಏರ್ಪೋಟ್ ನಿಂದ 550 ಕ್ಕೂ ಅಧಿಕ ವಿಮಾನಗಳಲ್ಲಿ 75 ಸಾವಿರಕ್ಕೂ ಅಧಿಕ ಜನ ಏರ್ಪೋಟ್ ನಿಂದ ನಿರ್ಗಮನ ಮತ್ತು ಆಗಮನ ಮಾಡ್ತಿದ್ದು ಕೊರೊನಾ ನಂತರ ಅತಿ ಹೆಚ್ಚು ಪ್ರಯಾಣಿಕರು ಹಬ್ಬ ಹಿನ್ನೆಲೆಯಲ್ಲಿ ವಿವಿದೆಡೆಗೆ ತೆರಳುತ್ತಿದ್ದಾರೆ. ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಜನಸಾಗರ: ದೇಗುಲದಲ್ಲಿ ವಿಐಪಿ ದರ್ಬಾರ್ ಖಂಡಿಸಿ ಧಿಕ್ಕಾರ ಕೂಗಿದ ಭಕ್ತರು bengaluru airport

ದೇಶದ ವಿವಿಧ ರಾಜ್ಯಗಳಿಗೆ ತೆರಳಲು 287 ವಿಮಾನಗಳಲ್ಲಿ 40722 ಜನರು ಟಿಕೆಟ್ ಬುಕ್ಕಿಂಗ್ ಮಾಡಿದ್ದಾರೆ. ವಿದೇಶಕ್ಕೆ ತೆರಳಲು 22 ಅಂತರಾಷ್ಟ್ರೀಯ ವಿಮಾನಗಳಲ್ಲಿ 4040 ಪ್ರಯಾಣಿಕರು ಟಿಕೆಟ್ ಬುಕ್ ಮಾಡಿದ್ದಾರೆ. ಹಾಗೂ ಇತರೆ ರಾಜ್ಯಗಳಿಂದ 295 ವಿಮಾನಗಳಲ್ಲಿ 30129 ಜನ ಬೆಂಗಳೂರಿಗೆ ಬರಲು ಟಿಕೆಟ್ ಬುಕ್ ಮಾಡಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಪ್ರಯಾಣಿಕರು ಬರ್ತಿರೂ ಹಿನ್ನೆಲೆ ಏರ್ಪೋಟ್ ನಲ್ಲಿ ಜನಸಂದಣಿ ಹೆಚ್ಚಾಗಿದೆ. ಬೆಳಗಿನಿಂದಲೆ ಏರ್ಪೋಟ್ ನಲ್ಲಿ ಜನ ತುಂಬಿ ತುಳುಕುತ್ತಿದ್ದಾರೆ.

ಕೆಐಎಬಿಯಿಂದ ಮುಂಬೈಗೆ ತೆರಳಿದ ಅಭಿಷೇಕ್ ಬಚ್ಚನ್

ಕಬ್ಬಡಿ ಪಂದ್ಯಾವಳಿ ಹಿನ್ನೆಲೆ ಬೆಂಗಳೂರಿಗೆ ಬಂದಿದ್ದ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಕೂಡ ಕೆಐಎಬಿಯಿಂದ ಮುಂಬೈಗೆ ತೆರಳಿದ್ದಾರೆ.

Published On - 1:37 pm, Sun, 23 October 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?