Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Jyothi Scheme: ರೀಚ್​ ಆಗದ ಇಂಧನ ಇಲಾಖೆಯ ಅರ್ಜಿ ಸ್ವೀಕಾರ ಟಾರ್ಗೆಟ್​, 2ನೇ ದಿನ ಸಲ್ಲಿಕೆಯಾದ ಅರ್ಜಿ ಎಷ್ಟು ಗೊತ್ತಾ?

200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಸೋಮವಾರ 1,61,958 ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಬೆಳಗ್ಗೆಯಿಂದ ಸಂಜೆ 5.30 ರವರೆಗೆ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.

Gruha Jyothi Scheme: ರೀಚ್​ ಆಗದ ಇಂಧನ ಇಲಾಖೆಯ ಅರ್ಜಿ ಸ್ವೀಕಾರ ಟಾರ್ಗೆಟ್​, 2ನೇ ದಿನ ಸಲ್ಲಿಕೆಯಾದ ಅರ್ಜಿ ಎಷ್ಟು ಗೊತ್ತಾ?
ಗೃಹಜ್ಯೋತಿ ಯೋಜನೆ
Follow us
ಆಯೇಷಾ ಬಾನು
| Updated By: ರಮೇಶ್ ಬಿ. ಜವಳಗೇರಾ

Updated on:Jun 20, 2023 | 8:16 AM

ಬೆಂಗಳೂರು: ಕಾಂಗ್ರೆಸ್ ಸರ್ಕಾರದ(Congress Government) ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ(Gruha Jyothi Scheme) ಜೂನ್ 18ರ ಭಾನುವಾರದಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಮೊದಲ ದಿನವೇ ರಾಜ್ಯದಲ್ಲಿ 55,000 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇನ್ನು ಜೂನ್ 19ರ ಎರಡನೇ ದಿನ 1, 61, 958 ಗ್ರಾಹಕರು ಅರ್ಜಿ ಸಲ್ಲಿಸಿದ್ದು ಉತ್ತಮ ಸ್ಪಂದನೆ ಸಿಗುತ್ತಿದೆ.

200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಸೋಮವಾರ 1,61,958 ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಬೆಳಗ್ಗೆಯಿಂದ ಸಂಜೆ 5.30 ರವರೆಗೆ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ. ಮೊದಲ ದಿನ ಸುಮಾರು 55 ಸಾವಿರ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದರು. ಎರಡನೇ ದಿನ ನೋಂದಣಿ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಲಕ್ಷಕ್ಕೂ ಹೆಚ್ಚು ಮಂದಿ ಯೋಜನೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಗ್ರಾಮ್ ಒನ್ ಮತ್ತು ಕರ್ನಾಟಕ ಒನ್ ಕೇಂದ್ರ ಅಥವಾ ಯಾವುದೇ ವಿದ್ಯುತ್ ಕಚೇರಿಗಳಲ್ಲಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿದೆ. 2023ರ ಆಗಸ್ಟ್ 1 (ಜುಲೈ ಮಾಹೆಯ ವಿದ್ಯುಚ್ಛಕ್ತಿ ಬಳಕೆ) ರಿಂದ ಈ ಯೋಜನೆ ಜಾರಿಗೆ ಬರಲಿದ್ದು ಅರ್ಹತೆಯ ಮಿತಿಯಲ್ಲಿದ್ದ ಫಲಾನುಭವಿಗಳು ಆಗಸ್ಟ್ 1 ರಿಂದ ಶೂನ್ಯ ಬಿಲ್ ಪಡೆಯಲಿದ್ದಾರೆ. ಆದರೆ ಯೋಜನೆಗೆ ಫಲಾನುಭವಿಯಾಗಲು ನೋಂದಣಿ ಮಾಡುವುದು ಕಡ್ಡಾಯವಾಗಿದೆ.

ಗೃಹಜ್ಯೋತಿ ಯೋಜನೆಯಡಿ ರಾಜ್ಯದಲ್ಲಿನ ಪತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಒಳಪಡುವ ಗ್ರಾಹಕರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಈ ಯೋಜನೆಯಿಂದ ರಾಜ್ಯದ 2 ಕೋಟಿ ಗ್ರಾಹಕರಿಗೆ ಅನುಕೂಲವಾಗಲಿದೆ. ಗೃಹಜ್ಯೋತಿ ಯೋಜನೆ ಫಲಾನುವಿಯಾಗಲು ಹಿಂದಿನ ಎಲ್ಲಾ ಬಾಕಿ ಬಿಲ್ ಪಾವತಿ ಮಾಡಿರಬೇಕು. ಬಾಕಿ ಪಾವತಿ ಮಾಡಲು ಸೆಪ್ಟೆಂಬರ್ ತನಕ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಗ್ಯಾರಂಟಿಗಳ ಒತ್ತಡದಲ್ಲಿ ಕಾಂಗ್ರೆಸ್: ಗೃಹಜ್ಯೋತಿ ಯೋಜನೆ ಸರ್ವರ್ ಬಿಜಿ, ಇತರೆ ಯೋಜನೆಗಳು ಇನ್ನೂ ವಿಳಂಬ

ಸೇವಾಸಿಂಧು ಪೋರ್ಟಲ್ ಸ್ಲೋ ಸ್ಲೋ ಸ್ಲೋ

ನಾಡ ಕಚೇರಿ, ಬೆಂಗಳೂರು ಓನ್, ಗ್ರಾಮ ಓನ್ ಹಾಗೂ ಬೆಸ್ಕಾಂ ಕಚೇರಿಗಳ ಮುಂದೆ ನೂರಾರು ಜನ ತಮ್ಮ ಕೆಲಸ-ಕಾರ್ಯಗಳನ್ನು ಬಿಟ್ಟು ಕಾಯುವಂತಾಗಿದೆ. ಜೂನ್ 20ರ ಮೂರನೆ ದಿನವಾದ ಇಂದು ಕೂಡ ಸೇವಾಸಿಂಧು ಪೋರ್ಟಲ್ ಸಮಸ್ಯೆ ಎದ್ದು ಕಾಣುತ್ತಿದೆ. ಅಧಿಕಾರಿಗಳಿಗೆ ಗೃಹಜ್ಯೋತಿ ಟಾರ್ಗೆಟ್ ‌ರೀಚ್ ಮಾಡಲು ಆಗ್ತಿಲ್ಲ. ಒಂದು ‌ದಿನಕ್ಕೆ ಹತ್ತು ಲಕ್ಷ ಜನರಿಂದ ಅಪ್ಲಿಕೇಶನ್ ಹಾಕಿಸಲು ಇಂಧನ ಇಲಾಖೆ ಪ್ಲಾನ್ ಮಾಡಿತ್ತು. ಆದರೆ ಮೊದಲ ದಿನ 55 ಸಾವಿರ ಎರಡನೇ ದಿನ 1.06.4032 ಲಕ್ಷ ಜನ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ 200 ಯೂನಿಟ್ ವಿದ್ಯುತ್ ಬಳಕೆ ಮಾಡುವವರ ಸಂಖ್ಯೆ ‌2 ಕೋಟಿ 14 ಲಕ್ಷ ಇದೆ. ಹಾಗಾಗಿ ‌ಅಧಿಕಾರಿಗಳು ಒಂದು ದಿನಕ್ಕೆ ಹತ್ತು ಲಕ್ಷ ಜನರಿಂದ ಅಪ್ಲಿಕೇಶನ್ ಹಾಕಿಸಿದ್ರೆ, 21 ಅಥವಾ ‌22 ದಿನಗಳಲ್ಲಿ ರಾಜ್ಯದ ಎಲ್ಲಾ ಫಲಾನುಭವಿಗಳಿಂದ ಅರ್ಜಿ ಹಾಕಿಸಿದಂತೆ‌ ಆಗುತ್ತದೆ ‌ಎಂದು ಇಂಧನ ಇಲಾಖೆ ಪ್ಲಾನ್ ಮಾಡಿತ್ತು.

ಆದ್ರೆ ಸರ್ವರ್ ಸ್ಲೋ ಸಮಸ್ಯೆಯಿಂದ ಟಾರ್ಗೆಟ್ ರೀಚ್ ಮಾಡೋದು ಕಷ್ಟ ‌ಆಗುತ್ತಿದೆ. ಇಂದು ಮೂರನೇ ದಿನವು ಸರ್ವರ್ ಡೌನ್ ಆಗುತ್ತಿದೆ. ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜನರು ನಾ ಮುಂದು ತಾ ಮುಂದು ಎಂದು ಮುಗಿಬೀಳುತ್ತಿದ್ದಾರೆ. ಇಂದು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ಜನರು ಬರುವ ಸಾಧ್ಯತೆ ಇದೆ. ಇಗಾಗ್ಲೇ ಬೆಂಗಳೂರು ಒನ್, ‌ಗ್ರಾಮ ಒನ್, ನಾಡ ಕಚೇರಿಗಳು, ಸ್ಥಳೀಯ ಬೆಸ್ಕಾಂಗಳಲ್ಲಿಯೂ ಸಹ ಅರ್ಜಿ ಸಲ್ಲಿಕ್ಕೆಗೆ ಅವಕಾಶ ನೀಡಲಾಗಿದೆ. ಸೇವಾ ಸಿಂಧು ಪೋರ್ಟಲ್​ಗೆ ಕೇವಲ 1 ಲಕ್ಷಕ್ಕೂ ಹೆಚ್ಚು ಅರ್ಜಿ ಸ್ವೀಕರಿಸುವ ಕೆಪ್ಯಾಸಿಟಿಯಿದ್ದು ಲಕ್ಷಕ್ಕೂ ಹೆಚ್ಚು ಜನರು ಅರ್ಜಿ ಸಲ್ಲಿಸುತ್ತಿರುವುದರಿಂದ ಸರ್ವರ್ ‌ಸಮಸ್ಯೆ ಎದುರಾಗ್ತಿದೆ ಅನ್ನೋ ಮಾಹಿತಿ ಸಿಕ್ಕಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:02 am, Tue, 20 June 23

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್