ನೇಣುಬಿಗಿದ ಸ್ಥಿತಿಯಲ್ಲಿ ತಾಯಿ, ಮಗಳ ಮೃತದೇಹ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

| Updated By: ಆಯೇಷಾ ಬಾನು

Updated on: Aug 08, 2022 | 3:05 PM

ಮೊನ್ನೆ ಬೆಳಗ್ಗೆ ನೇಣುಬಿಗಿದ ಸ್ಥಿತಿಯಲ್ಲಿ ತಾಯಿ, ಮಗಳ ಮೃತದೇಹ ಪತ್ತೆಯಾಗಿದೆ. ಮಗು ಹತ್ಯೆಗೈದು ಶೈಮಾ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ನೇಣುಬಿಗಿದ ಸ್ಥಿತಿಯಲ್ಲಿ ತಾಯಿ, ಮಗಳ ಮೃತದೇಹ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ
ಆರಾಧನಾ ಮತ್ತು ತಾಯಿ ಶೈಮಾ
Follow us on

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅನುಮಾನಾಸ್ಪದವಾಗಿ ತಾಯಿ, ಮಗು ಮೃತಪಟ್ಟ ಘಟನೆ ನಡೆದಿದೆ. ಎರಡು ದಿನದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಂತ ವೈದ್ಯೆ ಶೈಮಾ(39), 10 ವರ್ಷದ ಆರಾಧನಾ ಮೃತ ದುರ್ದೈವಿ. ನಗರದ ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೊನ್ನೆ ಬೆಳಗ್ಗೆ ನೇಣುಬಿಗಿದ ಸ್ಥಿತಿಯಲ್ಲಿ ತಾಯಿ, ಮಗಳ ಮೃತದೇಹ ಪತ್ತೆಯಾಗಿದೆ. ಮಗು ಹತ್ಯೆಗೈದು ಶೈಮಾ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ಶಿಪ್ಟ್ ಮಾಡಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ್ವರದಿಂದ ಬಳಲುತ್ತಿದ್ದ ಐದು ವರ್ಷದ ಬಾಲಕಿ ಸಾವು

ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಜ್ವರದಿಂದ ಬಳಲುತ್ತಿದ್ದ ದೀಪ್ತಿ ಎಂಬ 5 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ವೈದ್ಯರ ನಿರ್ಲಕ್ಷ್ಯದಿಂದ ಬಾಲಕಿ ಮೃತಪಟ್ಟಿದ್ದಾಳೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಸೂಕ್ತ ಚಿಕಿತ್ಸೆ ನೀಡದಿದ್ದಕ್ಕೆ ಮೃತಪಟ್ಟಿದ್ದಾಳೆ ಎಂದು ಆಸ್ಪತ್ರೆ ವೈದ್ಯರ ವಿರುದ್ಧ ದೀಪ್ತಿ ಕುಟುಂಬಸ್ಥರು ಆರೋಪಿಸಿದ್ದಾರೆ.

ಸರ್ಕಾರಿ ಬಸ್ ಡಿಕ್ಕಿ, ಸವಾರರಿಬ್ಬರ ಸಾವು

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಗೋರೆಬಾಳ ಕ್ಯಾಂಪ್ನಲ್ಲಿ ಸರ್ಕಾರಿ ಬಸ್ ಡಿಕ್ಕಿಯಾಗಿ ಸವಾರರಿಬ್ಬರು ಮೃತಪಟ್ಟ ಘಟನೆ ನಡೆದಿದೆ. ಬೈಕ್ ಸವಾರರಾದ ಮುಷ್ಟೂರಿನ ದುರುಗಪ್ಪ(40), ಈರಣ್ಣ(50) ಮೃತರು. ಆಯನೂರಿನಲ್ಲಿ ಮೊಹರಂ ಹಬ್ಬದಲ್ಲಿ ಪಾಲ್ಗೊಳ್ಳಲು ತೆರಳುವಾಗ ಘಟನೆ ನಡೆದಿದೆ. ಸಿಂಧನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಣ್ಣಿಗೆ ಕಾರದಪುಡಿ ಎರಚಿ ಮಾಂಗಲ್ಯ ಸರ ಕದಿಯಲು ಯತ್ನ

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಹಾಲುಗೊಂಡನಹಳ್ಳಿ ಗ್ರಾಮದ ಬಳಿ ಮಾಂಗಲ್ಯ ಸರವನ್ನ ಕಳವು ಮಾಡಲು ಯತ್ನಿಸಿದ ಇಬ್ಬರು ಕಳ್ಳರನ್ನ ಹಿಡಿದ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ. ಗ್ರಾಮದ ಸುಜಾತ ಎಂಬ ಮಹಿಳೆ ತೋಟಕ್ಕೆ ಹೋಗುವ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ಕಳ್ಳರು ಕಣ್ಣಿಗೆ ಕಾರದಪುಡಿ ಎರಚಿ ಮಾಂಗಲ್ಯ ಸರ ಕದಿಯಲು ಯತ್ನಿಸಿದರು. ಈ ವೇಳೆ ಮಹಿಳೆ ಕೂಗಾಡಿದ್ದಾರೆ. ಆಗ ಓಡಿಬಂದ ಗ್ರಾಮಸ್ಥರಿಗೆ ಐನಾತಿ ಕಳ್ಳರು ಸಿಕ್ಕಿಬಿದ್ದಿದ್ದಾರೆ. ಬಳಿಕ ಕಳ್ಳರನ್ನು ದಂಡಿನಶಿವರ ಪೊಲೀಸರಿಗೆ ಒಪ್ಪಿಸಿದ್ದಾರೆ. ದಂಡಿನಶಿವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 3:05 pm, Mon, 8 August 22