AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪಂಗಿರಾಮನಗರ: ತಾನು ಲೈಫ್​ ಎಂಜಾಯ್ ಮಾಡಲು ತನ್ನದೆ ಮಗುವನ್ನು ಮಹಡಿಯಿಂದ ಬಿಸಾಕಿ ಕೊಂದಿದ್ದ ಹೆತ್ತಮ್ಮ!

ಸುಷ್ಮಾ ಭಾರದ್ವಾಜ್ ಎಂಬ ಮಹಿಳೆ ತನ್ನ ಮಗುವನ್ನು ನಾಲ್ಕನೇ ಮಹಡಿ ಮೇಲಿಂದ ಎಸೆದು ಕೊಂದಿದ್ದಳು. ಘಟನೆ ಸಿಸಿ ಟಿವಿಯಲ್ಲೂ ಸೆರೆಯಾಗಿತ್ತು. ಸುಷ್ಮಾಳ ಆರೋಗ್ಯದ ಪರಿಸ್ಥಿತಿಯ ರಿಪೋರ್ಟ್ ನಲ್ಲಿ ಅಚ್ಚರಿ ಮಾಹಿತಿ ಬೆಳಕಿಗೆ ಬಂದಿದೆ.

ಸಂಪಂಗಿರಾಮನಗರ: ತಾನು ಲೈಫ್​ ಎಂಜಾಯ್ ಮಾಡಲು ತನ್ನದೆ ಮಗುವನ್ನು ಮಹಡಿಯಿಂದ ಬಿಸಾಕಿ ಕೊಂದಿದ್ದ ಹೆತ್ತಮ್ಮ!
ಸುಷ್ಮಾ ಭಾರದ್ವಾಜ್ ಮಹಡಿ ಮೇಲಿಂದ ಮಗು ಎಸೆದ ದೃಶ್ಯ
TV9 Web
| Updated By: ಆಯೇಷಾ ಬಾನು|

Updated on:Nov 07, 2022 | 12:25 PM

Share

ಬೆಂಗಳೂರು: ಆಗಸ್ಟ್ 4ರಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿತ್ತು. ಬುದ್ಧಿಮಾಂದ್ಯ ಮಗುವೆಂದು ಹೆತ್ತ ತಾಯಿಯೇ ನಾಲ್ಕೈದು ವರ್ಷದ ಮಗುವನ್ನು ನಾಲ್ಕನೇ ಮಹಡಿ ಮೇಲಿಂದ ಬಿಸಾಕಿ ಕೊಂದಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿ ಸಂಪಂಗಿ ರಾಮನಗರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ. ಇನ್ನು ಪೊಲೀಸರ ಚಾರ್ಜ್ ಶೀಟ್​ನಲ್ಲಿ ಈ ಕೊಲೆಗಡುಕಿ ತಾಯಿಯ ಕಳ್ಳಾಟದ ರಹಸ್ಯ ಬಯಲಾಗಿದೆ.

ಸುಷ್ಮಾ ಭಾರದ್ವಾಜ್ ಎಂಬ ಮಹಿಳೆ ತನ್ನ ಮಗುವನ್ನು ನಾಲ್ಕನೇ ಮಹಡಿ ಮೇಲಿಂದ ಎಸೆದು ಕೊಂದಿದ್ದಳು. ಘಟನೆ ಸಿಸಿ ಟಿವಿಯಲ್ಲೂ ಸೆರೆಯಾಗಿತ್ತು. ಘಟನೆ ಬಳಿಕ ಇಡೀ ಬೆಂಗಳೂರು ತಾಯಿಗೆ ಹಿಡಿಶಾಪ ಹಾಕಿತ್ತು. ಸದ್ಯ ಈಗ ಸಂಪಂಗಿ ರಾಮನಗರ ಪೊಲೀಸರು ಪ್ರಕರಣ ಸಂಬಂಧ ತನಿಖೆ ನಡೆಸಿದ್ದು ಬರೋಬ್ಬರಿ 193 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಮಗುವನ್ನು ಬಿಸಾಡಿದ್ದನ್ನ ಪ್ರತ್ಯಕ್ಷವಾಗಿ ಕಂಡಿದ್ದ ಮೂವರು ಐ ವಿಟ್ನೆಸ್​ಗಳ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಕೇಸ್ ಸಂಬಂಧ ಬರೋಬ್ಬರಿ 34 ಸಾಕ್ಷಿಗಳ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಹಾಗೂ ಚಾರ್ಜ್ ಶೀಟ್ ನಲ್ಲಿ ಮಗುವಿನ ಖಾಯಿಲೆ ಬಗ್ಗೆಯೂ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Bengaluru: ಬುದ್ದಿಮಾಂದ್ಯ ಮಗು ಎಂದು ನಾಲ್ಕನೇ ಮಹಡಿಯಿಂದ ಎಸೆದ ತಾಯಿ

ಪೊಲೀಸರು ಸಲ್ಲಿಸಿದ ಚಾರ್ಜ್ ಶೀಟ್​ನಲ್ಲಿ, ಮೃತ ಮಗು ಬುದ್ಧಿಮಾಂದ್ಯ ಮಗುವಲ್ಲ, ಅದು AUTISM ಎಂಬ ಖಾಯಿಲೆಯಿಂದ ಬಳಲುತ್ತಿದ್ದ ಮಗು. ಹೀಗಾಗಿ ಪ್ರತಿನಿತ್ಯ ಥೆರಫಿ ಮಾಡಿಸಲು ಮಗುವನ್ನು ತಾಯಿ ಸುಷ್ಮ ಕರೆದೊಯ್ತಿದ್ದರು. ಇದೆ ಕಾರಣಕ್ಕೆ ಮಗುವಿನಿಂದ ಬೇಸತ್ತು, ನೋಡಿಕೊಳ್ಳಲಾಗುವುದಿಲ್ಲ ಎಂದು ಮಗುವನ್ನು ತಾಯಿಯೇ ಕೊಂದಿದ್ದಾಳೆ ಎಂದು ಉಲ್ಲೇಖಿಸಲಾಗಿದೆ. ಮಗುವನ್ನು ನೋಡಿಕೊಳ್ಳುವುದರಲ್ಲೇ ಜೀವನ ಕಳೆದರೆ ತನ್ನ ಲೈಫ್ ಎಂಜಾಯ್ ಮಾಡಲು ಆಗುವುದಿಲ್ಲ ಎಂದು ನಿರ್ಧಾರ ಮಾಡಿದ ಆರೋಪಿ ಸುಷ್ಮಾ ಮಗುವನ್ನು ಕೊಲ್ಲಲು ಮುಂದಾಗಿದ್ದಾಳೆ. ಎರಡು ಬಾರಿ ಮಗು ಬಿಸಾಡಲು ಹೊರಗಡೆ ಬಂದು ನೋಡಿದ್ದಾಳೆ. ಬಳಿಕ ಅಡ್ಡಲಾಗಿದ್ದ ಮರವನ್ನು ಗಮನಿಸಿ ಅಲ್ಲಿಂದ ದೂರ ಬಂದು ಕಲ್ಲಿನ ಗಟ್ಟಿ ನೆಲದ ಸ್ಥಳವನ್ನು ನೋಡಿ ಮಗುವನ್ನು ಬಿಸಾಡಿರೋದಾಗಿ ತನಿಖೆಯಲ್ಲಿ ಬೆಳಕಿಗೆ‌‌ ಬಂದಿದೆ. ಎಲ್ಲಾದ್ರು ಕಾರ್ಯಕ್ರಮಗಳಿಗೆ ಹೋದಾಗ ಮಗುವನ್ನು ನೋಡಿ ಸಂಬಂಧಿಕರು ನುಡಿಯುತ್ತಿದ್ದ ಕೊಂಕಿನ ಮಾತಿಂದ ಬೇಸತ್ತಿದ್ದ ಸುಷ್ಮಾ. ಸುಖ ಜೀವನ, ಲೈಫ್ ಎಂಜಾಯ್ ಮಾಡಬೇಕೆನ್ನಿಸಿತ್ತು. ಸುಷ್ಮಾಗೆ ಮಗುವಿನ ಆರೈಕೆಯೇ ಕಷ್ಟವಾಗಿತ್ತು.

ಸುಷ್ಮಾ ಉದ್ದೇಶಪೂರ್ವಕವಾಗಿಯೇ ತನ್ನ ಮಗುವನ್ನು ಕೊಂದದ್ದು

ಇನ್ನು ಆರೋಪಿ ತಾಯಿ ಸುಷ್ಮಾಳ ಆರೋಗ್ಯದ ಪರಿಸ್ಥಿತಿಯ ರಿಪೋರ್ಟ್ ನಲ್ಲಿ ಅಚ್ಚರಿ ಮಾಹಿತಿ ಬೆಳಕಿಗೆ ಬಂದಿದೆ. ಸುಷ್ಮಾ ಫಿಟ್ ಅಂಡ್ ಟ್ರಯಲ್ ಎಂದು ನಿಮಾನ್ಸ್ ರಿಪೋರ್ಟ್ ನೀಡಿದೆ. ಘಟನೆ ಬಳಿಕ ಸುಷ್ಮಾಳನ್ನು ಪೊಲೀಸರು ನಿಮಾನ್ಸ್ ಗೆ ಕರೆದೊಯ್ದು ತಪಾಸಣೆ ಮಾಡಿಸಿದ್ದು ರಿಪೋರ್ಟ್ ಬಂದಿದೆ. ರಿಪೋರ್ಟ್​ನಲ್ಲಿ ಸುಷ್ಮಾ ಮಾನಸಿಕವಾಗಿ ಕುಗ್ಗಿದ್ರು, ಖಿನ್ನತೆ ಎಂಬುದು ಸುಳ್ಳು. ಆಕೆ ಆರೋಗ್ಯವಾಗಿದ್ದಾಳೆ. ಫರ್ಪೆಕ್ಟ್ ಆಗಿದ್ದು, ಯಾವುದೇ ಸಮಸ್ಯೆ ಇಲ್ಲವೆಂದು ಮಾಹಿತಿ ಬಂದಿದೆ. ಈ ಮೂಲಕ ಉದ್ದೇಶಪೂರ್ವಕವಾಗಿ ಮಗು ಕೊಂದದ್ದು ತನಿಖೆಯಲ್ಲಿ ಸಾಬೀತಾಗಿದೆ.

Published On - 12:25 pm, Mon, 7 November 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?