AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಒಮಿಕ್ರಾನ್ ಕೇಸ್​ಗಳು ಪತ್ತೆ ಹಿನ್ನೆಲೆ; ಪದವಿ ಪರೀಕ್ಷೆ ನಡೆಸದಂತೆ ವಿದ್ಯಾರ್ಥಿನಿಯರ ಪ್ರತಿಭಟನೆ

ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ನಡೆಸಬಾರದು ಎಂದು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಅವರಿಗೆ ಎನ್​ಎಸ್​ಯುಐ ಸಂಘಟನೆ ಬೆಂಬಲ ನೀಡಿದೆ.

ಬೆಂಗಳೂರು: ಒಮಿಕ್ರಾನ್ ಕೇಸ್​ಗಳು ಪತ್ತೆ ಹಿನ್ನೆಲೆ; ಪದವಿ ಪರೀಕ್ಷೆ ನಡೆಸದಂತೆ ವಿದ್ಯಾರ್ಥಿನಿಯರ ಪ್ರತಿಭಟನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 04, 2021 | 8:50 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಒಮಿಕ್ರಾನ್ (Omicron) ಕೇಸ್​​ಗಳು ಪತ್ತೆಯಾದ ಹಿನ್ನೆಲೆಯಲ್ಲಿ ಪದವಿ ಪರೀಕ್ಷೆ (Degree Examinations) ನಡೆಸದಂತೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು (Mount Carmel College) ವಿದ್ಯಾರ್ಥಿನಿಯರಿಂದ ಪ್ರತಿಭಟನೆ ನಡೆಸಲಾಗಿದ್ದು, ಅವರಿಗೆ NSUI ವಿದ್ಯಾರ್ಥಿ ಸಂಘಟನೆ ಸಾಥ್ ನೀಡಿದೆ. ಕೆಲವರಿಗೆ ಸೋಂಕು ಬಂದಿದೆ, ಹೀಗಾಗಿ ಆಫ್​ಲೈನ್ ಪರೀಕ್ಷೆ ಬೇಡ ಎಂದು ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ. ಸೋಮವಾರದಿಂದ ಪದವಿ ಪರೀಕ್ಷೆಗಳು ಆರಂಭವಾಗಲಿವೆ.

ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿಕೆ: ಮುಂಬೈನಲ್ಲಿ ಇಂದು ಒಬ್ಬರಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದ್ದು, ಭಾರತದಲ್ಲಿ ಒಟ್ಟಾರೆ ಒಮಿಕ್ರಾನ್ ಸೋಂಕಿತರ ಸಂಖ್ಯೆ 4ಕ್ಕೇರಿದೆ. ದಕ್ಷಿಣ ಆಫ್ರಿಕಾದಿಂದ ದುಬೈ ಮಾರ್ಗವಾಗಿ ದೆಹಲಿಗೆ ಬಂದು ನಂತರ ಮುಂಬೈಗೆ ಬಂದಿದ್ದ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದೆ.​

ಒಮಿಕ್ರಾನ್​ನಿಂದ ದಕ್ಷಿಣ ಆಫ್ರಿಕಾದಲ್ಲಿ ಸೋಂಕಿತರ ಪ್ರಮಾಣ ಹೆಚ್ಚಳ: ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ಕೇಸ್​ಗಳ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಇಡೀ ಜಗತ್ತನ್ನು ನಡುಗಿಸಿರುವ ಒಮಿಕ್ರಾನ್ ಪ್ರಭೇದದ ಕೊರೊನಾ ವೈರಸ್ ಈವರೆಗೂ ಜಗತ್ತಿನ 6 ಖಂಡಗಳ 38 ದೇಶಗಳಿಗೆ ಹರಡಿದೆ. ಆದರೆ, ಈವರೆಗೂ ಒಮಿಕ್ರಾನ್ ಪ್ರಭೇದದ ಸೋಂಕಿತ ವ್ಯಕ್ತಿಗಳ್ಯಾರು ಜಗತ್ತಿನಲ್ಲಿ ಸಾವನ್ನಪ್ಪಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ತನ್ನ ಲಕ್ಷಣಕ್ಕೆ ತಕ್ಕಂತೆ ವೇಗವಾಗಿ ಬೇರೆಬೇರೆ ದೇಶಗಳಿಗೆ ಒಮಿಕ್ರಾನ್ ಪ್ರಭೇದದ ಕೊರೊನಾ ವೈರಸ್ ಹರಡುತ್ತಿದೆ. ಇದೇ ಈಗ ಆತಂಕಕ್ಕೆ ಕಾರಣವಾಗಿದೆ.

ಒಮಿಕ್ರಾನ್ ಪ್ರಭೇದದ ಕೊರೊನಾ ವೈರಸ್ ರೂಪಾಂತರಿ ಮೊದಲು ಪತ್ತೆಯಾದ ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ಕೇಸ್​ಗಳ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಕಳೆದ ನಾಲ್ಕು ದಿನಗಳಲ್ಲೇ ಕೊರೊನಾ ಪ್ರಕರಣಗಳ ಸಂಖ್ಯೆ ಆರುಪಟ್ಟು ಹೆಚ್ಚಾಗಿದೆ. ನವೆಂಬರ್ 29ರಂದು 2,273 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದವು. ಡಿಸೆಂಬರ್ 3ರ ಹೊತ್ತಿಗೆ ಈ ಸಂಖ್ಯೆ 16,055ಕ್ಕೆ ಏರಿಕೆಯಾಗಿದೆ. ಆದರೆ ಒಮಿಕ್ರಾನ್ ಮಅರಣಾಂತಿಕವಲ್ಲ ಎಂದು ದಕ್ಷಿಣ ಆಫ್ರಿಕಾ, ವಿಶ್ವ ಆರೋಗ್ಯ ಸಂಸ್ಥೆ ಸೇರಿದಂತೆ ಹಲವು ತಜ್ಞರು ತಿಳಿಸಿದ್ದಾರೆ. ಆದರೆ ಸೂಕ್ತ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ:

ಒಮಿಕ್ರಾನ್​ನಿಂದ ದಕ್ಷಿಣ ಆಫ್ರಿಕಾದಲ್ಲಿ ಸೋಂಕಿತರ ಪ್ರಮಾಣ ಆರು ಪಟ್ಟು ಹೆಚ್ಚಳ: ಭಾರತದಲ್ಲಿ ಹೆಚ್ಚಾಗುತ್ತಿದೆ ಆತಂಕ

Omicron in India: ಭಾರತದಲ್ಲಿ ಈಗಾಗಲೇ ಹರಡಿದೆ ಒಮಿಕ್ರಾನ್, ಆದರೆ ನಾವು ಹೆದರಬೇಕಿಲ್ಲ: ವಿಜ್ಞಾನಿ ಡಾ ರಾಕೇಶ್ ಮಿಶ್ರಾ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!