ಬೆಂಗಳೂರು: ಒಮಿಕ್ರಾನ್ ಕೇಸ್​ಗಳು ಪತ್ತೆ ಹಿನ್ನೆಲೆ; ಪದವಿ ಪರೀಕ್ಷೆ ನಡೆಸದಂತೆ ವಿದ್ಯಾರ್ಥಿನಿಯರ ಪ್ರತಿಭಟನೆ

| Updated By: shivaprasad.hs

Updated on: Dec 04, 2021 | 8:50 PM

ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ನಡೆಸಬಾರದು ಎಂದು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಅವರಿಗೆ ಎನ್​ಎಸ್​ಯುಐ ಸಂಘಟನೆ ಬೆಂಬಲ ನೀಡಿದೆ.

ಬೆಂಗಳೂರು: ಒಮಿಕ್ರಾನ್ ಕೇಸ್​ಗಳು ಪತ್ತೆ ಹಿನ್ನೆಲೆ; ಪದವಿ ಪರೀಕ್ಷೆ ನಡೆಸದಂತೆ ವಿದ್ಯಾರ್ಥಿನಿಯರ ಪ್ರತಿಭಟನೆ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಬೆಂಗಳೂರಿನಲ್ಲಿ ಒಮಿಕ್ರಾನ್ (Omicron) ಕೇಸ್​​ಗಳು ಪತ್ತೆಯಾದ ಹಿನ್ನೆಲೆಯಲ್ಲಿ ಪದವಿ ಪರೀಕ್ಷೆ (Degree Examinations) ನಡೆಸದಂತೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು (Mount Carmel College) ವಿದ್ಯಾರ್ಥಿನಿಯರಿಂದ ಪ್ರತಿಭಟನೆ ನಡೆಸಲಾಗಿದ್ದು, ಅವರಿಗೆ NSUI ವಿದ್ಯಾರ್ಥಿ ಸಂಘಟನೆ ಸಾಥ್ ನೀಡಿದೆ. ಕೆಲವರಿಗೆ ಸೋಂಕು ಬಂದಿದೆ, ಹೀಗಾಗಿ ಆಫ್​ಲೈನ್ ಪರೀಕ್ಷೆ ಬೇಡ ಎಂದು ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ. ಸೋಮವಾರದಿಂದ ಪದವಿ ಪರೀಕ್ಷೆಗಳು ಆರಂಭವಾಗಲಿವೆ.

ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿಕೆ:
ಮುಂಬೈನಲ್ಲಿ ಇಂದು ಒಬ್ಬರಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದ್ದು, ಭಾರತದಲ್ಲಿ ಒಟ್ಟಾರೆ ಒಮಿಕ್ರಾನ್ ಸೋಂಕಿತರ ಸಂಖ್ಯೆ 4ಕ್ಕೇರಿದೆ. ದಕ್ಷಿಣ ಆಫ್ರಿಕಾದಿಂದ ದುಬೈ ಮಾರ್ಗವಾಗಿ ದೆಹಲಿಗೆ ಬಂದು ನಂತರ ಮುಂಬೈಗೆ ಬಂದಿದ್ದ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದೆ.​

ಒಮಿಕ್ರಾನ್​ನಿಂದ ದಕ್ಷಿಣ ಆಫ್ರಿಕಾದಲ್ಲಿ ಸೋಂಕಿತರ ಪ್ರಮಾಣ ಹೆಚ್ಚಳ:
ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ಕೇಸ್​ಗಳ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಇಡೀ ಜಗತ್ತನ್ನು ನಡುಗಿಸಿರುವ ಒಮಿಕ್ರಾನ್ ಪ್ರಭೇದದ ಕೊರೊನಾ ವೈರಸ್ ಈವರೆಗೂ ಜಗತ್ತಿನ 6 ಖಂಡಗಳ 38 ದೇಶಗಳಿಗೆ ಹರಡಿದೆ. ಆದರೆ, ಈವರೆಗೂ ಒಮಿಕ್ರಾನ್ ಪ್ರಭೇದದ ಸೋಂಕಿತ ವ್ಯಕ್ತಿಗಳ್ಯಾರು ಜಗತ್ತಿನಲ್ಲಿ ಸಾವನ್ನಪ್ಪಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ತನ್ನ ಲಕ್ಷಣಕ್ಕೆ ತಕ್ಕಂತೆ ವೇಗವಾಗಿ ಬೇರೆಬೇರೆ ದೇಶಗಳಿಗೆ ಒಮಿಕ್ರಾನ್ ಪ್ರಭೇದದ ಕೊರೊನಾ ವೈರಸ್ ಹರಡುತ್ತಿದೆ. ಇದೇ ಈಗ ಆತಂಕಕ್ಕೆ ಕಾರಣವಾಗಿದೆ.

ಒಮಿಕ್ರಾನ್ ಪ್ರಭೇದದ ಕೊರೊನಾ ವೈರಸ್ ರೂಪಾಂತರಿ ಮೊದಲು ಪತ್ತೆಯಾದ ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ಕೇಸ್​ಗಳ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಕಳೆದ ನಾಲ್ಕು ದಿನಗಳಲ್ಲೇ ಕೊರೊನಾ ಪ್ರಕರಣಗಳ ಸಂಖ್ಯೆ ಆರುಪಟ್ಟು ಹೆಚ್ಚಾಗಿದೆ. ನವೆಂಬರ್ 29ರಂದು 2,273 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದವು. ಡಿಸೆಂಬರ್ 3ರ ಹೊತ್ತಿಗೆ ಈ ಸಂಖ್ಯೆ 16,055ಕ್ಕೆ ಏರಿಕೆಯಾಗಿದೆ. ಆದರೆ ಒಮಿಕ್ರಾನ್ ಮಅರಣಾಂತಿಕವಲ್ಲ ಎಂದು ದಕ್ಷಿಣ ಆಫ್ರಿಕಾ, ವಿಶ್ವ ಆರೋಗ್ಯ ಸಂಸ್ಥೆ ಸೇರಿದಂತೆ ಹಲವು ತಜ್ಞರು ತಿಳಿಸಿದ್ದಾರೆ. ಆದರೆ ಸೂಕ್ತ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ:

ಒಮಿಕ್ರಾನ್​ನಿಂದ ದಕ್ಷಿಣ ಆಫ್ರಿಕಾದಲ್ಲಿ ಸೋಂಕಿತರ ಪ್ರಮಾಣ ಆರು ಪಟ್ಟು ಹೆಚ್ಚಳ: ಭಾರತದಲ್ಲಿ ಹೆಚ್ಚಾಗುತ್ತಿದೆ ಆತಂಕ

Omicron in India: ಭಾರತದಲ್ಲಿ ಈಗಾಗಲೇ ಹರಡಿದೆ ಒಮಿಕ್ರಾನ್, ಆದರೆ ನಾವು ಹೆದರಬೇಕಿಲ್ಲ: ವಿಜ್ಞಾನಿ ಡಾ ರಾಕೇಶ್ ಮಿಶ್ರಾ