CM BS Yediyurappa ರಾಜೀನಾಮೆ ಸುಳಿವಿಗೆ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದೇನು?

ಮುಂದಿನ ನಡೆ ಬಗ್ಗೆ ಯಡಿಯೂರಪ್ಪ ಏನನ್ನೂ ಹೇಳಿಲ್ಲ. ಇಡೀ ಕುಟುಂಬಕ್ಕೆ ಶಕ್ತಿ ಕೊಟ್ಟಿರೋದು ಬಿಜೆಪಿ ಪಕ್ಷ. ಪಕ್ಷ ಏನೇ ಕ್ರಮ ಕೈಗೊಂಡರು ನಾವು ಬದ್ಧರಾಗಿರುತ್ತೇವೆ ಎಂದು ಸಂಸದ ರಾಘವೇಂದ್ರ ಟಿವಿ9ಗೆ ತಿಳಿಸಿದರು.

CM BS Yediyurappa ರಾಜೀನಾಮೆ ಸುಳಿವಿಗೆ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದೇನು?
ಬಿ.ಎಸ್.ಯಡಿಯೂರಪ್ಪ, ಬಿ.ವೈ.ರಾಘವೇಂದ್ರ
Follow us
TV9 Web
| Updated By: sandhya thejappa

Updated on:Jul 22, 2021 | 11:41 AM

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡುವ ಸುಳಿವನ್ನು ನೀಡಿದ್ದು, ಈ ಬಗ್ಗೆ ಸಿಎಂ ಪುತ್ರ, ಸಂಸದ ಬಿ.ವೈ.ರಾಘವೇಂದ್ರ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಯಡಿಯೂರಪ್ಪ ವರಿಷ್ಠರಿಗೆ ಹೇಳಿದ್ದಾರೆ. ಯಾವುದೇ ಸ್ಥಾನಮಾನ ಬೇಕಾಗಿಲ್ಲ. 75 ವರ್ಷದ ನಂತರ ಸೇವೆ ಸಲ್ಲಿಸಲು ನನಗೆ ಅವಕಾಶ ಇದೆ ಎಂದು ಸಿಎಂ ಯಡಿಯೂರಪ್ಪ ಅವರೇ ಹೇಳಿದ್ದಾರೆ ಎಂದು ಮಾತನಾಡಿದ ಬಿ.ವೈ.ರಾಘವೇಂದ್ರ, ಯಡಿಯೂರಪ್ಪನವರು ಯುವಕರಂತೆ ಎಲ್ಲಾ ಸಮಯದಲ್ಲಿ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಮುಂದಿನ ನಡೆ ಬಗ್ಗೆ ಯಡಿಯೂರಪ್ಪ ಏನನ್ನೂ ಹೇಳಿಲ್ಲ. ಇಡೀ ಕುಟುಂಬಕ್ಕೆ ಶಕ್ತಿ ಕೊಟ್ಟಿರೋದು ಬಿಜೆಪಿ ಪಕ್ಷ. ಪಕ್ಷ ಏನೇ ಕ್ರಮ ಕೈಗೊಂಡರು ನಾವು ಬದ್ಧರಾಗಿರುತ್ತೇವೆ ಎಂದು ಸಂಸದ ರಾಘವೇಂದ್ರ ಟಿವಿ9ಗೆ ತಿಳಿಸಿದರು.

ಮೊದಲ ಸಲ ರಾಜೀನಾಮೆ ಸುಳಿವು ನೀಡಿದ ಬಿಎಸ್​ವೈ ಹೈಕಮಾಂಡ್ ಏನು ಹೇಳುತ್ತದೆಯೋ ಆ ತೀರ್ಮಾನ ನನ್ನದು. ರಾಷ್ಟ್ರೀಯ ನಾಯಕರು ಕೊಡುವ ಸೂಚನೆಯನ್ನು ಪಾಲಿಸುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಜುಲೈ 26ರಿಂದ ನನ್ನ ಕೆಲಸವನ್ನು ಮಾಡುತ್ತೇನೆ. ಬಿಜೆಪಿಯಲ್ಲಿ 75 ವರ್ಷ ದಾಟಿದವರಿಗೆ ಅಧಿಕಾರ ಕೊಟ್ಟಿಲ್ಲ. ಆದರೆ ನನ್ನ ಕೆಲಸವನ್ನು ಮೆಚ್ಚಿ ಅಧಿಕಾರವನ್ನು ಕೊಟ್ಟಿದ್ದಾರೆ. ಪಕ್ಷವನ್ನು ಬಲಪಡಿಸಿ ಅಧಿಕಾರಕ್ಕೆ ತರುವ ಸಂಕಲ್ಪ ನನ್ನದು ಎಂದು ಬಿಎಸ್​ವೈ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ.

ಇದನ್ನೂ ಓದಿ

CM BS Yediyurappa: ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ನಿರ್ಗಮನದ ಬಗ್ಗೆ ಸುಳಿವು: ರೇಣುಕಾಚಾರ್ಯ ಮೊದಲ ಪ್ರತಿಕ್ರಿಯೆ

Big Breaking: ಸಿಎಂ ಹುದ್ದೆಗೆ ರಾಜೀನಾಮೆ? ಸುಳಿವು ನೀಡಿದ ಬಿಎಸ್ ಯಡಿಯೂರಪ್ಪ

MP BY raghavendra React to BS Yediyurappa hints for his resignation to Chief Minister Post

Published On - 11:40 am, Thu, 22 July 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ