Political News: ಬಿಜೆಪಿಯವರು ನೀಚರು, ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ: ಡಿಕೆ ಸುರೇಶ್​​

ಪಾಕಿಸ್ತಾನದ ಹೆಸರಿಟ್ಟುಕೊಂಡು ರಾಜಕಾರಣ ಮಾಡುವುದು ಬಿಜೆಪಿ ಪದ್ಧತಿ. ರಾಜಕಾರಣಕ್ಕಾಗಿ ಬಿಜೆಪಿಯವರು ಕೊಲೆಗಳನ್ನು ಸಹ ಮಾಡಿಸುತ್ತಾರೆ. ಯಾರನ್ನು ಬೇಕಾದರೂ ಹೊಡೀತಾರೆ, ಆಪರೇಷನ್ ಬೇಕಾದರೂ ಮಾಡುತ್ತಾರೆ. ಬಿಜೆಪಿಯವರು ನೀಚರು, ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು.

Political News: ಬಿಜೆಪಿಯವರು ನೀಚರು, ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ: ಡಿಕೆ ಸುರೇಶ್​​
ಸಂಸದ ಡಿ.ಕೆ.ಸುರೇಶ್
Follow us
TV9 Web
| Updated By: ವಿವೇಕ ಬಿರಾದಾರ

Updated on: Feb 05, 2023 | 1:59 PM

ಬೆಂಗಳೂರು: ನಾಯಕರನ್ನು ನಿಯಂತ್ರಿಸಲು ಆಗದವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)​ ಅವರ ಬಗ್ಗೆ ಮಾತಾಡುತ್ತಾರೆ. ಬಿಜೆಪಿ (BJP) ನಾಯಕರಿಗೆ ಡಿ.ಕೆ.ಶಿವಕುಮಾರ್ ಬಗ್ಗೆ ಮಾತನಾಡುವ ಹಕ್ಕಿಲ್ಲ. ಪಾಕಿಸ್ತಾನದ ಹೆಸರಿಟ್ಟುಕೊಂಡು ರಾಜಕಾರಣ ಮಾಡುವುದು ಬಿಜೆಪಿ ಪದ್ಧತಿ. ರಾಜಕಾರಣಕ್ಕಾಗಿ ಬಿಜೆಪಿಯವರು ಕೊಲೆಗಳನ್ನು ಸಹ ಮಾಡಿಸುತ್ತಾರೆ. ಯಾರನ್ನು ಬೇಕಾದರೂ ಹೊಡೀತಾರೆ, ಆಪರೇಷನ್ ಬೇಕಾದರೂ ಮಾಡುತ್ತಾರೆ. ಬಿಜೆಪಿಯವರು ನೀಚರು, ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ (DK Suresh) ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿಯವರು ಕೋಮುಗಲಭೆ ಮಾಡಿಸಲು ಸಿದ್ಧವಾದಂತೆ ಕಾಣುತ್ತಿದ್ದೆ. ಬೆಂಗಳೂರು, ಕರಾವಳಿ ಕಡೆ ಕೋಮುಗಲಭೆ ಮಾಡಿಸಲು ತಯಾರಿ ನಡೆಸಿದ್ದಾರೆ. ರಾಜ್ಯದಲ್ಲಿ ಅಶಾಂತಿ ಮೂಡಿಸಲು ಪಾಕಿಸ್ತಾನ ವಿಚಾರ ಪ್ರಸ್ತಾಪಿಸಿದ್ದಾರೆ. ಪದೇಪದೆ ಪಾಕ್ ವಿಚಾರ ಪ್ರಸ್ತಾಪಿಸುವ ಸಿಟಿ ರವಿ ವಿರುದ್ಧ ಕ್ರಮ ಆಗಬೇಕು. ರಾಜ್ಯದ ಅಭಿವೃದ್ಧಿ ಬಗ್ಗೆ ಬಿಜೆಪಿ ನಾಯಕರಿಗೆ ಗಮನವಿಲ್ಲ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಕಾಂಗ್ರೆಸ್​ ಟಿಕೆಟ್ ಹಂಚಿಕೆ ವೇಳೆ ಹೊಸ ಮುಖಗಳಿಗೆ ಮೊದಲ ಆದ್ಯತೆ: ಪರಮೇಶ್ವರ್

ಬಿಜೆಪಿ ನಂಟು ಇರುವುದೆಲ್ಲ ಪಾಕ್ ವಿಚಾರಕ್ಕೆ ಮಾತ್ರ. ಪ್ರಧಾನಿ ನರೇಂದ್ರ ಮೋದಿ ಪದೇಪದೆ ಯಾಕೆ ರಾಜ್ಯಕ್ಕೆ ಬರುತ್ತಿದ್ದಾರೆ? ಮನ್​ಕೀ ಬಾತ್​ನಲ್ಲಿ ಪ್ರಧಾನಿ ಮೋದಿಗೆ ಭ್ರಷ್ಟಾಚಾರ ಕಾಣಿಸ್ತಾ ಇಲ್ವಾ? ಬಿಜೆಪಿಯವರಿಗೆ ನಾಚಿಕೆ ಆಗಬೇಕು ಎಂದರು.

ಬಿಜೆಪಿ ಸರ್ಕಾರ ತೊಲಗಬೇಕು ಅಂತಾ ಜನರು ಬಯಸುತ್ತಿದ್ದಾರೆ

ಚುನಾವಣೆಗೆ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಚುನಾವಣಾ ಸಮಿತಿ, ರಾಜ್ಯದ ವರಿಷ್ಠರಿಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಕೇಂದ್ರ ಚುನಾವಣಾ ಸಮಿತಿಗೆ ಆದಷ್ಟು ಬೇಗ ಪಟ್ಟಿ ಕಳುಹಿಸುತ್ತೇವೆ. ಕ್ಷೇತ್ರದಲ್ಲಿ ಒಗ್ಗಟ್ಟಾಗಿ ತೆಗೆದುಕೊಂಡು ಹೋಗಲು ಅನುಕೂಲ ಆಗಲಿದೆ. ಎಲ್ಲವೂ ಕೇಂದ್ರ ಚುನಾವಣಾ ಸಮಿತಿಯಲ್ಲಿ ನಿರ್ಧಾರ ಆಗಲಿದೆ. ಬಿಜೆಪಿ ಸರ್ಕಾರ ತೊಲಗಬೇಕು ಅಂತಾ ಜನರು ಬಯಸುತ್ತಿದ್ದಾರೆ. ಗ್ರಾಮಗಳ ಮಟ್ಟದಲ್ಲಿ ಜನ ಬದಲಾವಣೆ ಬಯಸಿದ್ದಾರೆ ಎಂದು ತಿಳಿಸಿದರು.

ಡಿ.ಕೆ.ಶಿವಕುಮಾರ್, ಡಾ.ಪರಮೇಶ್ವರ್ ಒಂದೇ ನಾಣ್ಯದ 2 ಮುಖಗಳು

‘ಕೈ’​ ನಾಯಕರ ವಿರುದ್ಧ ಡಾ.ಜಿ.ಪರಮೇಶ್ವರ್ ಅಸಮಾಧಾನಗೊಂಡಿರುವ ವಿಚಾರವಾಗಿ ಮಾತನಾಡಿದ ಅವರು ಕಾಂಗ್ರೆಸ್​ ಪಕ್ಷದಲ್ಲಿ ಪರಮೇಶ್ವರ್ ಯಾವುದೇ ಅಸಮಾಧಾನಗೊಂಡಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಡಾ. ಜಿ.ಪರಮೇಶ್ವರ್ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್, ಡಾ.ಪರಮೇಶ್ವರ್ ಒಂದೇ ನಾಣ್ಯದ 2 ಮುಖಗಳು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು