AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ವಿಶ್ವನಾಥ್​​ ಬಿಟ್ಟು ಸುದ್ದಿಗೋಷ್ಠಿ ನಡೆಸಲು ಬಂದ ಸಂಸದ ಸುಧಾಕರ್​​ಗೆ ಸ್ವಪಕ್ಷಿಗರಿಂದಲೇ ತರಾಟೆ

ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನು ಬಿಟ್ಟು ಸುದ್ದಿಗೋಷ್ಠಿ ನಡೆಸಲು ಬಂದ ಸಂಸದ ಡಾ. ಕೆ. ಸುಧಾಕರ್‌ರನ್ನು ಬಿಜೆಪಿ ಕಾರ್ಯಕರ್ತರೇ ತರಾಟೆಗೆ ತಗೆದುಕೊಂಡಿರುವ ಘಟನೆ ನಡೆದಿದೆ. ಯಲಹಂಕದಲ್ಲಿ ಮಾಧ್ಯಮ ಕೇಂದ್ರದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರ ಮಧ್ಯಪ್ರವೇಶದ ಬಳಿಕ ಪರಿಸ್ಥಿತಿ ತಿಳಿಗೊಂಡಿದೆ. ಕಳೆದ ಲೋಕಸಭಾ ಚುನಾವಣೆಯಿಂದಲೂ ಶಾಸಕರು ಮತ್ತು ಸಂಸದರ ನಡುವೆ ಮುನಿಸು ಮುಂದುವರಿದುಕೊಂಡು ಬಂದಿದ್ದು, ಅದೀಗ ಮತ್ತೊಂದು ಹಂತ ತಲುಪಿದೆ.

ಶಾಸಕ ವಿಶ್ವನಾಥ್​​ ಬಿಟ್ಟು ಸುದ್ದಿಗೋಷ್ಠಿ ನಡೆಸಲು ಬಂದ ಸಂಸದ ಸುಧಾಕರ್​​ಗೆ ಸ್ವಪಕ್ಷಿಗರಿಂದಲೇ ತರಾಟೆ
ವಿಶ್ವನಾಥ್​​ vs ಸುಧಾಕರ್​​Image Credit source: wikipedia
ನವೀನ್ ಕುಮಾರ್ ಟಿ
| Edited By: |

Updated on: Jun 02, 2026 | 5:42 PM

Share

ದೇವನಹಳ್ಳಿ, ಜೂನ್​​ 02: ಕಳೆದ ಲೋಕಸಭಾ ಚುನಾವಣೆ ವೇಳೆ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್​​ಗಾಗಿ ಬಿಜೆಪಿ (BJP) ಶಾಸಕ ಎಸ್​​.ಆರ್​​. ವಿಶ್ವನಾಥ್​​ ಮತ್ತು ಸಂಸದ ಡಾ.ಸುಧಾಕರ್​​ ನಡುವೆ ಶುರುವಾದ ಸಮರಕ್ಕೆ ಇನ್ನೂ ಬ್ರೇಕ್​​ ಬಿದ್ಧಂತೆ ಕಾಣುತ್ತಿಲ್ಲ. ಸ್ವಪಕ್ಷದ ಶಾಸಕರನ್ನು ಬಿಟ್ಟು ಒಬ್ಬರೇ ಸುದ್ದಿಗೋಷ್ಠಿ ನಡೆಸಲು ಬಂದಿದ್ದ ಸಂಸದರನ್ನು ಸ್ವಪಕ್ಷದ ಕಾರ್ಯಕರ್ತರೇ ತರಾಟೆಗೆ ತೆಗೆದುಕೊಂಡಿರುವ ಘಟನೆ ಯಲಹಂಕದಲ್ಲಿ ನಡೆದಿದೆ. ಕಾರ್ಯಕರ್ತರ ನಡುವಿನ ವಾಗ್ವಾದದ ಕಾರಣ ಯಲಹಂಕದ ಮಾಧ್ಯಮ ಕೇಂದ್ರದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಮುಖ್ಯಾಂಶಗಳು

  • ಶಾಸಕರ ಬಿಟ್ಟು ಸುದ್ದಿಗೋಷ್ಠಿ ನಡೆಸಲು ಬಂದ ಸಂದರ ಮೇಲೆ ಗರಂ
  • ಸಂಸದ ಡಾ.ಕೆ.ಸುಧಾಕರ್​​ಗೆ ಸ್ವಪಕ್ಷ ಕಾರ್ಯಕರ್ತರಿಂದಲೇ ತರಾಟೆ
  • ಯಲಹಂಕದ ಮಾಧ್ಯಮ ಕೇಂದ್ರದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ

ಯಲಹಂಕ ಬಿಜೆಪಿ ಶಾಸಕರಾಗಿರುವ ಎಸ್​​.ಆರ್​​. ವಿಶ್ವನಾಥ್​​ ಅವರನ್ನು ಆಹ್ವಾನಿಸದೆ ಸಂಸದ ಸುಧಾಕರ್​​ ಸುದ್ದಿಗೋಷ್ಠಿ ನಡೆಸಲು ಬಂದಿರೋದು ಎಂಎಲ್​​ಎ ಬೆಂಬಲಿಗರನ್ನು ಕೆರಳಿಸಿದೆ. ಹೀಗಾಗಿ ಯಲಹಂಕದ ಮಾಧ್ಯಮ ಕೇಂದ್ರಕ್ಕೆ ಬಂದ ವಿಶ್ವನಾಥ್​​ ಬೆಂಬಲಿಗರು ಸಂಸದರ ನಡೆಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಶಾಸಕರು ಮತ್ತು ಸಂಸದರ ಬೆಂಬಲಿಗರ ನಡುವೆ ವಾಗ್ವಾದ ತಾರಕಕ್ಕೇರಿದ್ದುಕೂಡಲೇ ಸ್ಥಳಕ್ಕೆ ಆಗಮಿಸಿದ ಯಲಹಂಕ ಪೋಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆಯುತ್ತಿದ್ದರೂ ಸಂಸದರು ಮಾತ್ರ ಮೌನವಾಗಿದ್ದರು ಎನ್ನಲಾಗಿದ್ದು, ಬಿಜೆಪಿ ಶಾಸಕ ಮತ್ತು ಸಂಸದರ ನಡುವಿನ ಶೀತನ ಸಮರ ಈಗ ಮತ್ತೊಮ್ಮೆ ಸ್ಫೋಟಗೊಂಡಿದೆ.

ಇದನ್ನೂ ಓದಿ: ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್; ರಾಜ್ಯಪಾಲರ ಮೊರೆ ಹೋದ ಬಿಜೆಪಿ ನಿಯೋಗ

ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್​​ಗೆ ಭಾರಿ ಪೈಪೋಟಿ ಏರ್ಪಟ್ಟಿತ್ತು. ಅಂದಿನ ಮಾಜಿ ಶಾಸಕರಾಗಿದ್ದ ಡಾ.ಕೆ. ಸುಧಾಕರ್​​ ಮತ್ತು ಶಾಸಕ ಎಸ್​​.ಆರ್​​. ವಿಶ್ವನಾಥ್​​ ಪುತ್ರನ ನಡುವೆ ತೀವ್ರ ಸ್ಪರ್ಧೆ ನಡೆದು ಅಂತಿಮವಾಗಿ ಸುಧಾಕರ್​​ ಅವರೇ ಟಿಕೆಟ್​​ ಗಳಿಸುವಲ್ಲಿ ಯಶಸ್ವಿಯಾಗಿದ್ದರು. ಚುನಾವಣೆಯನ್ನೂ ಗೆದ್ದು ಸಂಸದರಾಗಿದ್ದರು. ಅಂದಿನಿಂದ ಸುಧಾಕರ್​​ ಮತ್ತು ವಿಶ್ವನಾಥ್​​ ನಡುವೆ ಮುನಿಸು ಆರಂಭವಾಗಿದ್ದು, ಯಲಹಂಕದಲ್ಲಿ ವಿಶ್ವನಾಥ್ ವಿರುದ್ಧ ಬಮುಲ್ ನಿರ್ದೇಶಕ ಕಡತನಮಲೆ ಸತೀಶ್​​ರನ್ನ ಪರ್ಯಾಯ ನಾಯಕನಾಗಿ ಬೆಳೆಸಲು ಹೊರಟಿರುವ ಆರೋಪವೂ ಸುಧಾಕರ್​​ ವಿರುದ್ಧ ಕೇಳಿಬಂದಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ