AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಸಾಗರ್ ಖಂಡ್ರೆ ಮನೆ ವಿದ್ಯುತ್ ಸಂಪರ್ಕ ಕಡಿತ ಮಾಡಿದ ವ್ಯಕ್ತಿ ಮೇಲೆ FIR

ಸಂಸದ ಸಾಗರ್ ಖಂಡ್ರೆ ಅವರ ಬೆಂಗಳೂರಿನ ಮನೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ಕೃಷ್ಣ ಅಪಾರ್ಟಮೆಂಟ್‌ನ ಮ್ಯಾನೇಜರ್ ಚಂದ್ರಕುಮಾರ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮನೆ ನವೀಕರಣ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿದ್ಯುತ್ ಕಡಿತಗೊಳಿಸಿದವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಲಾಗಿದೆ.

ಸಂಸದ ಸಾಗರ್ ಖಂಡ್ರೆ ಮನೆ ವಿದ್ಯುತ್ ಸಂಪರ್ಕ ಕಡಿತ ಮಾಡಿದ ವ್ಯಕ್ತಿ ಮೇಲೆ FIR
ಸಂಸದ ಸಾಗರೆ ಖಂಡ್ರೆ
Follow us
ವಿವೇಕ ಬಿರಾದಾರ
|

Updated on: Apr 06, 2025 | 6:00 PM

ಬೆಂಗಳೂರು, ಏಪ್ರಿಲ್​ 06: ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ (Eshwar Khandre) ಪುತ್ರ ಸಂಸದ ಸಾಗರ್ ಖಂಡ್ರೆ (Sagar Khandre) ಅವರ ಮನೆಯ ವಿದ್ಯುತ್ ಕಡಿತಗೊಳಿಸಿದ ವ್ಯಕ್ತಿಗಳ ವಿರುದ್ಧ ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ (Vidhan Soudha Police Station) ಎಫ್​ಐಆರ್​ ದಾಖಲಾಗಿದೆ. ಸದ್ಯ ವಿಧಾನಸೌಧ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಶ್ರೀ ಕೃಷ್ಣ ಅರ್ಪಾಟಮೆಂಟ್ (KAOWA) ನ ನಂ-103, ಬ್ಲ್ಯಾಕ್-01ನಲ್ಲಿ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಪುತ್ರ ಹಾಗೂ ಸಂಸದ ಸಾಗರ ಖಂಡ್ರೆ ವಾಸವಾಗಿದ್ದಾರೆ. ಪ್ರಸ್ತುತ ಈ ಮನೆಯನ್ನು ಕೃಷ್ಣ ಅರ್ಪಾಟಮೆಂಟ್ಸೊ ಸೈಟಿಯಿಂದ ಪೂರ್ವಾನುಮತಿಯನ್ನು ಪಡೆದುಕೊಂಡು ನವೀಕರಣಮಾಡಲಾಗುತ್ತಿದೆ. ನವೀಕರಣದ ವೇಳೆ ಮೆಟ್ಟಿಲುಗಳಿಗೆ ಬೆಳಕಿನ ವ್ಯವಸ್ಥೆ ಮಾಡಲು ವೈರ್​ನ್ನು ಎಳೆಯಲಾಗಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಏಪ್ರಿಲ್​ 2 ರಂದು ಮಧ್ಯಾಹ್ನ ಸುಮಾರು 04:30 ಗಂಟೆ ಸಮಯದಲ್ಲಿ ಅಪಾರ್ಟಮೆಂಟ್​ನ ಮ್ಯಾನೇಜರ್ ಚಂದ್ರಕುಮಾರ ಎಂಬುವರು ನವೀಕರಣ ಕಾಮಗಾರಿ ಮಾಡುತ್ತಿರುವ ಕಾರ್ಮಿಕರನ್ನು ಅಡ್ಡಗಟ್ಟಿ, ಕಾರ್ಮಿಕರಿಗೆ ಮನಬಂದಂತೆ ಅವಾಚ್ಯ ಶಬ್ದಗಳಿಂದ ಬೈದಿದಿದ್ದಾರೆ.

ಈ ಬಗ್ಗೆ ಮನೆಯ ಮಾಲೀಕ ಸಾಗರ ಖಂಡ್ರೆ ಅಥವಾ ಈಶ್ವರ ಖಂಡ್ರೆ ಅಥವಾ ಅವರ ಕುಟುಂಬ ಸದಸ್ಯರಿಗಾಗಲಿ ಅಥವಾ ಸಚಿವರ ಆಪ್ತ ಸಹಾಯಕರಿಗೆ ಮಾಹಿತಿ ನೀಡದೆ ಏಕಾಏಕಿ ಮನೆಯ ವಿದ್ಯುತ್ ಸಂಪರ್ಕವನ್ನು ಖಡಿತಗೊಳಿಸಲಾಗಿದೆ. ಈ ವಿಚಾರವಾಗಿ ಮ್ಯಾನೇಜರ್​ಗೆ ಅದೇ ದಿನ ಸಂಜೆ 04:40 ಸುಮಾರಿಗೆ ಕರೆ ಮಾಡಿ ಸಚಿವರ ಆಪ್ತ ಸಹಾಯಕ ವಿಚಾರಿಸಿದಾಗ, ಕೃಷ್ಣ ಅಪಾರ್ಟಮೆಂಟ್ ಸೆಕ್ರೆಟರಿ ಆದೇಶದಂತೆ ವಿದ್ಯತ್ ಖಡಿತಗೊಳಿಸಿದ್ದೇನೆ ಎಂದು ಹೇಳಿ ಫೋನ್​ನ್ನು ಸ್ವಿಚ್ ಆಫ್ ಮಾಡಿದ್ದಾರೆ.

ಇದನ್ನೂ ಓದಿ
Image
BBMPಯಿಂದ ಶಾಕ್: ಮನೆ ಕಾಂಪೌಂಡ್​ ಒಳಗಿನ ಪಾರ್ಕಿಂಗ್​ಗೆ ಕಟ್ಟಬೇಕು​ ಶುಲ್ಕ
Image
ಈ ಸೈಟ್​ನಲ್ಲಿ ಅರ್ಜಿ ಸಲ್ಲಿಸಿದ್ರೆ ಎರಡೇ ದಿನಗಳಲ್ಲಿ ಸಿಗುತ್ತೆ ಇ ಖಾತಾ!
Image
BBMP Budget 2025: ಬ್ರ್ಯಾಂಡ್ ಬೆಂಗಳೂರಿಗೆ ಒತ್ತು ನೀಡಿದ ಬಿಬಿಎಂಪಿ ಬಜೆಟ್
Image
BBMP ಆಸ್ತಿ ತೆರಿಗೆ ಮಾರ್ಚ್​ 31 ಗಡುವು: 390 ಕೋಟಿ ರೂ ಆಸ್ತಿ ತೆರಿಗೆ ಬಾಕಿ

ಇದನ್ನೂ ಓದಿ: ಅನಧಿಕೃತವಾಗಿ ಕಟ್ಟಡ ನಿರ್ಮಿಸಿದವರಿಗೆ ಶಾಕ್ ಕೊಟ್ಟ ಬಿಬಿಎಂಪಿ

ವಿನಾಕಾರಣ ತಗಾದೆ ತೆಗೆದು ಪದೆ ಪದೆ ತೊಂದರೆ ನೀಡುತ್ತಿರುವ ಕೃಷ್ಣ ಅಪಾರ್ಟಮೆಂಟ್ ಮ್ಯಾನೆಜರ್ ಹಾಗೂ ವಿದ್ಯತ್ ಸಂಪರ್ಕ ಕಡಿತಗೊಳಿಸಲು ಹೇಳಿದವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ದಾಖಲಸಿದ್ದಾರೆ.

ವರದಿ: ಪ್ರದೀಪ್​ ಚಿಕ್ಕಾಟಿ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ