AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಲ್ ಎನ್‌ಫೀಲ್ಡ್ ಏರಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್: ಸಂಸದರ ಪತ್ನಿಗೆ ನೆಟ್ಟಿಗರಿಂದ ಬಹುಪರಾಕ್​​

ಸಂಗೀತ ಕಲಾವಿದೆ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ ಶಿವಶ್ರೀ ಸ್ಕಂದಪ್ರಸಾದ್ ಬೆಂಗಳೂರಿನ ರಸ್ತೆಯಲ್ಲಿ ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್ ಬೈಕ್ ರೈಡ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ನೆಟ್ಟಿಗರ ಪ್ರಶಂಸೆಗೆ ಪಾತ್ರವಾಗಿದೆ. ಈ ವಿಡಿಯೋಗೆ ನೆಟ್ಟಿಗರಿಂದ ನೂರಾರು ಕಾಮೆಂಟ್​​ಗಳು ಬಂದಿದ್ದು, ನೀವು ಹಲವು ಮಹಿಳೆಯರಿಗೆ ಸ್ಫೂರ್ತಿ ಎಂದು ಸಂಸದರ ಪತ್ನಿಯನ್ನು ಹಾಡಿ ಹೊಗಳಿದ್ದಾರೆ.

ರಾಯಲ್ ಎನ್‌ಫೀಲ್ಡ್ ಏರಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್: ಸಂಸದರ ಪತ್ನಿಗೆ ನೆಟ್ಟಿಗರಿಂದ ಬಹುಪರಾಕ್​​
ಶಿವಶ್ರೀ ಸ್ಕಂದಪ್ರಸಾದ್
ಪ್ರಸನ್ನ ಹೆಗಡೆ
|

Updated on:Sep 20, 2026 | 4:18 PM

Share

ಬೆಂಗಳೂರು, ಸೆಪ್ಟೆಂಬರ್​​ 20: ಸಂಗೀತ ಕಲಾವಿದೆ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ ಶಿವಶ್ರೀ ಸ್ಕಂದಪ್ರಸಾದ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋವೊಂದು ಭಾರಿ ವೈರಲ್​​ ಆಗಿದೆ. ಬೆಂಗಳೂರಿನ ರಸ್ತೆಯಲ್ಲಿ ಶಿವಶ್ರೀ ಅವರು ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್​​ ಬೈಕ್ ಸವಾರಿ ಮಾಡಿರುವ ದೃಶ್ಯಗಳು ಅದರಲ್ಲಿದ್ದು, ಸಂಸದರ ಪತ್ನಿಯ ಈ ಪೋಸ್ಟ್​​ಗೆ ನೆಟ್ಟಿಗರಿಂದ ನಾನಾ ರೀತಿಯ ಅಭಿಪ್ರಾಯಗಳು ವ್ಯಕ್ತವಾಗಿವೆ.

ಪತಿ ಬಗ್ಗೆ ಉಲ್ಲೇಖಿಸಿ ಶಿವಶ್ರೀ ಸ್ಕಂದಪ್ರಸಾದ್ ಪೋಸ್ಟ್​​

ನನ್ನ ಪತಿ ನನ್ನಿಂದ ಮಾಡಿಸುವ ಕೆಲಸಗಳು… ಮತ್ತು ಕೊನೆಗೆ ನಾನೂ ಅದನ್ನೇ ಮಾಡಿಬಿಡುತ್ತೇನೆ ಎಂಬ ಬರಹದ ಜೊತೆ ತಾವು ಬೈಕ್​​ ಸವಾರಿ ಮಾಡುತ್ತಿರುವ ವಿಡಿಯೋವನ್ನು ಶಿವಶ್ರೀ ಸ್ಕಂದಪ್ರಸಾದ್ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ನೆಟ್ಟಿಗರಿಂದ ನೂರಾರು ಕಾಮೆಂಟ್​​ಗಳು ಬಂದಿದ್ದು, ನೀವು ಹಲವು ಮಹಿಳೆಯರಿಗೆ ಸ್ಫೂರ್ತಿ ಎಂದು ಸಂಸದರ ಪತ್ನಿಯನ್ನು ಹಾಡಿ ಹೊಗಳಿದ್ದಾರೆ. ನೀವು ಬಹುಮುಖ ಪ್ರತಿಭೆ ಎಂದು ಇನ್ನೊಬ್ಬರು ಹೇಳಿದ್ದರೆ, ಹಾಡು ಹೇಳುವ ಜೊತೆಗೆ ನಿಮಗೆ ಬೈಕ್​​ ಚಲಾಯಿಸಲೂ ಬರುತ್ತಾ ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಮ್ಯಾನ್ ಆಫ್ ಸ್ಟೀಲ್’: ಪತಿ, ಸಂಸದ ತೇಜಸ್ವಿ ಸೂರ್ಯ ಸಾಧನೆಗೆ ಪತ್ನಿ ಶಿವಶ್ರೀ ಹೇಳಿದ್ದೇನು?

ಗೋವಾದಲ್ಲಿ ನಡೆದಿದ್ದ ಐರನ್‌ಮ್ಯಾನ್ 70.3 ಓಟವನ್ನು ಸಂಸದ, ಪತಿ ತೇಜಸ್ವಿ ಸೂರ್ಯ ಜೊತೆ ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕವೂ ಈ ಹಿಂದೆ ಶಿವಶ್ರೀ ಸ್ಕಂದಪ್ರಸಾದ್ ನೆಟ್ಟಿಗರಿಂದ ಭಾರಿ ಪ್ರಶಂಸೆ ಪಡೆದಿದ್ದರು. ಈ ವೇಳೆ 90 ಕಿ.ಮೀ. ಸೈಕ್ಲಿಂಗ್​ ಕೂಡ ಮಾಡಿ ಅವರು ಗಮನ ಸೆಳೆದಿದ್ದರು. ತೇಜಸ್ವಿ ಸೂರ್ಯ ಜೊತೆ ಇವರ ವಿವಾಹವು 2025ರ ಮಾರ್ಚ್ 6ರಂದು ಬೆಂಗಳೂರಿನಲ್ಲಿ ನಡೆದಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:12 pm, Sun, 20 September 26

Follow Us
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ