AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹಿಂದ ಪ್ರತಿಭಟನೆ: ಫ್ರೀಡಂ ಪಾರ್ಕ್​​ ಸುತ್ತಮುತ್ತ ಸಂಚಾರ ದಟ್ಟಣೆ, ಬದಲಿ ಮಾರ್ಗ ಇಲ್ಲಿದೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರು ರಾಜ್ಯಪಾಲರ ನಡೆ ಖಂಡಿಸಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನಾ ಸಮಾವೇಶ ನಡೆಸಲಿದೆ. ಬಳಿಕ ರಾಜಭವನ ಚಲೋ ಕರೆ ನೀಡಿದೆ. ಇದರಿಂದ ಫ್ರೀಡಂ ಪಾರ್ಕ್​ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗಲಿದೆ. ಸಂಚಾರ ಮಾರ್ಪಾಡು ಇಲ್ಲಿದೆ.

ಅಹಿಂದ ಪ್ರತಿಭಟನೆ: ಫ್ರೀಡಂ ಪಾರ್ಕ್​​ ಸುತ್ತಮುತ್ತ ಸಂಚಾರ ದಟ್ಟಣೆ, ಬದಲಿ ಮಾರ್ಗ ಇಲ್ಲಿದೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Aug 27, 2024 | 8:01 AM

Share

ಬೆಂಗಳೂರು, ಆಗಸ್ಟ್​ 27: ಮುಡಾ (Muda) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ತನಿಖೆಗಾಗಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ ನಡೆಯನ್ನು ಖಂಡಿಸಿರುವ ಅಂಹಿಂದ ಸಮುದಾಯ ಮಂಗಳವಾರ ಬೆಂಗಳೂರಿನ ಪ್ರೀಡಂ ಪಾರ್ಕ್​​ನಲ್ಲಿ (Freedom Park) ಬೆಳಗ್ಗೆ 11 ಗಂಟೆಗೆ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದೆ. ಸಮಾವೇಶ ಬಳಿಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ರಾಜಭವನ ಚಲೋ ಕರೆ ನೀಡಿದೆ. ಇದರಿಂದ ಫ್ರೀಡಂ ಪಾರ್ಕ್​ ಸುತ್ತಮುತ್ತ ಸಂಚಾರ ದಟ್ಟಣೆ (Traffic Jam) ಉಂಟಾಗಲಿದೆ. ಹೀಗಾಗಿ ಸುಗಮ ಸಂಚಾರಕ್ಕಾಗಿ ಬೆಂಗಳೂರು ಸಂಚಾರಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.

ಅಹಿಂದ ನಾಯಕರ ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸುವ ಸಾಧ್ಯತೆ ಇದೆ. ಪ್ರತಿಭಟನೆಯಲ್ಲಿ ಶೋಷಿತ ಸಮುದಾಯದ ವಿದ್ಯಾರ್ಥಿಗಳ ಒಕ್ಕೂಟ, ಶೋಷಿತರ ಒಕ್ಕೂಟ, ಅಹಿಂದ ರಕ್ಷಣಾ ವೇದಿಕೆ, ರಾಜ್ಯ ಕುರುಬರ ಬಳಗ, ಅಂಬೇಡ್ಕರ್ ಅಭಿಮಾನಿಗಳ ಸಂಘಟನೆ ಸೇರಿದಂತೆ ಹಲವು ಸಂಘಟನೆ ಭಾಗಿಯಾಗಲಿವೆ. ಹೀಗಾಗಿ ಬೆಳಗ್ಗೆ 9.00 ರಿಂದ ಸಂಜೆ 4.00 ಗಂಟೆ ವರೆಗೆ ಫ್ರೀಡಂ ಪಾರ್ಕ್ ಸುತ್ತಮುತ್ತ ವಾಹನ ಸಂಚಾರ ಬಂದ್​ ಇರಲಿದೆ.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ 30 ದಿನ ಸಂಚಾರ ಬಂದ್​, ಮಾರ್ಗ ಬದಲಾವಣೆ ಇಲ್ಲಿದೆ

ಸಂಚಾರಿ ಪೊಲೀಸರ ಮಾರ್ಗಸೂಚಿ

ಬೆಂಗಳೂರು ನಗರ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಫ್ರೀಡಂ ಪಾರ್ಕ್​​ನಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವತಿಯಿಂದ ಪ್ರತಿಭಟನೆ ಮತ್ತು ರಾಜಭವನ ಚಲೋ ನಡೆಸಲಿದೆ. ಈ ಪ್ರತಿಭಟನೆಗೆ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಪ್ರತಿಭಟನಾಕಾರರು ಮೈಸೂರು, ತುಮಕೂರು, ಕನಕಪುರ, ಬಳ್ಳಾರಿ ರಸ್ತೆ, ಹಳೆ ಮದ್ರಾಸ್ ರಸ್ತೆಗಳ ಕಡೆಗಳಿಂದ ಬರುತ್ತಿದ್ದಾರೆ. ಫ್ರೀಡಂ ಪಾರ್ಕ್ ಸುತ್ತಮುತ್ತ ಭಾರಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಈ ಪ್ರತಿಭಟನೆ ಸಮಯದಲ್ಲಿ ಈ ಕೆಳಕಂಡ ಸಂಚಾರ ಮಾರ್ಪಾಟು ಮಾಡಲಾಗಿದೆ.

ಸಂಚಾರ ಮಾರ್ಪಾಡು

  • ಕೋಡೆ ಸರ್ಕಲ್ ನಿಂದ ಫ್ರೀಡಂ ಪಾರ್ಕ್ ಜಂಕ್ಷನ್ ವರೆಗೆ (ಶೇಷಾದ್ರಿ ರಸ್ತೆ) ವರೆಗೆ ಭಾರಿ ಸಂಚಾರ ದಟ್ಟಣೆ ಉಂಟಾಗುವುದರಿಂದ ಪರ್ಯಾಯ ಮಾರ್ಗವನ್ನು ಸಾರ್ವಜನಿಕರು ಬಳಸಬೇಕು.
  • ಇಂದು ಕೆ.ಪಿ.ಎಸ್.ಸಿ ಪರೀಕ್ಷೆ ಇರುವುದರಿಂದ, ಪರಿಕ್ಷಾರ್ತಿಗಳು ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಬೇಕು.
  • ಪ್ರತಿಭಟನೆಗೆ ಬರುವ ಬಸ್ಸುಗಳು ಮೇಘ್ರವೃತ್ತದ ಬಳಿಯ ಅರಮನೆ ಮೈದಾನದ ಗೇಟ್ ನಂ. 1, 2 ಮತ್ತು 3 ರಲ್ಲಿ ನಿಲುಗಡೆ ಮಾಡಬೇಕು ಎಂದು ಸಚಿಸಲಾಗಿದೆ.
  • ಪ್ರತಿಭಟನೆಗೆ ಬರುವ ಕಾರು. ದ್ವಿಚಕ್ರ ವಾಹನಗಳನ್ನು ಫ್ರೀಡಂ ಪಾರ್ಕ್​​ನಲ್ಲಿರುವ ಎಂಎಲ್​ಸಿಪಿ ಪಾರ್ಕಿಂಗ್ ಜಾಗದಲ್ಲಿ ಪಾವತಿ ಆಧಾರದ ಮೇಲೆ ನಿಲ್ಲಿಸಬೇಕು ಎಂದು ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್