
ಬೆಂಗಳೂರು, ಆಗಸ್ಟ್ 27: ಮುಡಾ (Muda) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ತನಿಖೆಗಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ ನಡೆಯನ್ನು ಖಂಡಿಸಿರುವ ಅಂಹಿಂದ ಸಮುದಾಯ ಮಂಗಳವಾರ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ (Freedom Park) ಬೆಳಗ್ಗೆ 11 ಗಂಟೆಗೆ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದೆ. ಸಮಾವೇಶ ಬಳಿಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ರಾಜಭವನ ಚಲೋ ಕರೆ ನೀಡಿದೆ. ಇದರಿಂದ ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ದಟ್ಟಣೆ (Traffic Jam) ಉಂಟಾಗಲಿದೆ. ಹೀಗಾಗಿ ಸುಗಮ ಸಂಚಾರಕ್ಕಾಗಿ ಬೆಂಗಳೂರು ಸಂಚಾರಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.
ಅಹಿಂದ ನಾಯಕರ ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸುವ ಸಾಧ್ಯತೆ ಇದೆ. ಪ್ರತಿಭಟನೆಯಲ್ಲಿ ಶೋಷಿತ ಸಮುದಾಯದ ವಿದ್ಯಾರ್ಥಿಗಳ ಒಕ್ಕೂಟ, ಶೋಷಿತರ ಒಕ್ಕೂಟ, ಅಹಿಂದ ರಕ್ಷಣಾ ವೇದಿಕೆ, ರಾಜ್ಯ ಕುರುಬರ ಬಳಗ, ಅಂಬೇಡ್ಕರ್ ಅಭಿಮಾನಿಗಳ ಸಂಘಟನೆ ಸೇರಿದಂತೆ ಹಲವು ಸಂಘಟನೆ ಭಾಗಿಯಾಗಲಿವೆ. ಹೀಗಾಗಿ ಬೆಳಗ್ಗೆ 9.00 ರಿಂದ ಸಂಜೆ 4.00 ಗಂಟೆ ವರೆಗೆ ಫ್ರೀಡಂ ಪಾರ್ಕ್ ಸುತ್ತಮುತ್ತ ವಾಹನ ಸಂಚಾರ ಬಂದ್ ಇರಲಿದೆ.
ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ 30 ದಿನ ಸಂಚಾರ ಬಂದ್, ಮಾರ್ಗ ಬದಲಾವಣೆ ಇಲ್ಲಿದೆ
ಬೆಂಗಳೂರು ನಗರ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವತಿಯಿಂದ ಪ್ರತಿಭಟನೆ ಮತ್ತು ರಾಜಭವನ ಚಲೋ ನಡೆಸಲಿದೆ. ಈ ಪ್ರತಿಭಟನೆಗೆ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಪ್ರತಿಭಟನಾಕಾರರು ಮೈಸೂರು, ತುಮಕೂರು, ಕನಕಪುರ, ಬಳ್ಳಾರಿ ರಸ್ತೆ, ಹಳೆ ಮದ್ರಾಸ್ ರಸ್ತೆಗಳ ಕಡೆಗಳಿಂದ ಬರುತ್ತಿದ್ದಾರೆ. ಫ್ರೀಡಂ ಪಾರ್ಕ್ ಸುತ್ತಮುತ್ತ ಭಾರಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಈ ಪ್ರತಿಭಟನೆ ಸಮಯದಲ್ಲಿ ಈ ಕೆಳಕಂಡ ಸಂಚಾರ ಮಾರ್ಪಾಟು ಮಾಡಲಾಗಿದೆ.
“ಸಂಚಾರ ಸಲಹೆ/Traffic advisory“ pic.twitter.com/fXGPKWsP8D
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) August 26, 2024
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ