ಮುಡಾ ಕೇಸ್: ಸಿಎಂ ಆಪ್ತರ ನಿವಾಸ, ಕಚೇರಿ ಮೇಲೆ ಇಡಿ ದಾಳಿ ಸಾಧ್ಯತೆ, ಜಮೀನಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತೆರೆಮರೆಯಲ್ಲಿ ಕಾರ್ಯಾಚರಣೆ ನಡೆಸಿರುವ ಇಡಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯನವರ ಆಪ್ತರ ಚಲನವಲನ ಮೇಲೂ ನಿಗಾ ಇಟ್ಟಿದ್ದಾರೆ. ಶೀಘ್ರದಲ್ಲೇ ಇಡಿ ಅಧಿಕಾರಿಗಳು ಸಿಎಂ ಆಪ್ತರ ನಿವಾಸ ಅಥವಾ ಕಚೇರಿಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ.

ಬೆಂಗಳೂರು, ಅ.01: ಮುಡಾ ಸೈಟು ಹಂಚಿಕೆ ಅವ್ಯವಹಾರ ಆರೋಪದ ಮೇಲೆ ಲೋಕಾಯುಕ್ತ ಸಂಸ್ಥೆ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಎಫ್ಐಆರ್ ದಾಖಲಿಸುತ್ತಿದ್ದಂತೆ ಇಡಿ ಅಲರ್ಟ್ ಆಗಿದೆ. ಮುಡಾದ ಹಣದ ಬೇರೆ ಕ್ಷೇತ್ರಕ್ಕೆ ಬಳಸಿದ ಪ್ರಕರಣದ ಬಗ್ಗೆ ಇಡಿ (Enforcement Directorate) ಇಸಿಐಆರ್ ದಾಖಲಿಸಿ ತನಿಖೆಗೆ ಮುಂದಾಗಿದೆ. ಇಡಿ ಅಧಿಕಾರಿಗಳು ಸಿದ್ದರಾಮಯ್ಯ ಅವರಿಗೆ ಯಾವುದೇ ಕ್ಷಣದಲ್ಲಿ ನೋಟಿಸ್ ಕೊಟ್ಟು ವಿಚಾರಣೆ ನಡೆಸಬಹುದಾಗಿದೆ. ಶೀಘ್ರದಲ್ಲೇ ಇಡಿ ಅಧಿಕಾರಿಗಳು ಸಿಎಂ ಆಪ್ತರ ನಿವಾಸ ಅಥವಾ ಕಚೇರಿಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ.
ಈಗಾಗಲೇ ತೆರೆಮರೆಯಲ್ಲಿ ಕಾರ್ಯಾಚರಣೆ ನಡೆಸಿರುವ ಇಡಿ ಅಧಿಕಾರಿಗಳು ಸಿಎಂ ಆಪ್ತರ ಚಲನವಲನ ಮೇಲೂ ನಿಗಾ ಇಟ್ಟಿದ್ದಾರೆ. ಹಾಘೂ ಸಿಎಂ ಆಪ್ತರ ಮನೆ, ಸಂಬಂಧಿಕರ ಮಾಹಿತಿ ಕಲೆ ಹಾಕಿದ್ದಾರೆ. ರಾಜ್ಯಾದ್ಯಂತ ಸಿಎಂ ಆಪ್ತರ ನಿವಾಸ ಅಥವಾ ಕಚೇರಿ ಮೇಲೆ ಇಡಿ ದಾಳಿ ಮಾಡುವ ಸಾಧ್ಯತೆ ಇದೆ. ಶೀಘ್ರದಲ್ಲೇ ದಾಳಿ ನಡೆಸಿ ಮತ್ತಷ್ಟು ಮಾಹಿತಿ ಸಂಗ್ರಹಿಸಲು ತಯಾರಿ ನಡೆಯುತ್ತಿದೆ. ಜಾರ್ಖಂಡ್ ಮಾದರಿ ಇಡಿ ಅಧಿಕಾರಿಗಳು ದಾಳಿ ಮಾಡುವ ಸಾಧ್ಯತೆ ಇದೆ. ಇಡಿ ತಂಡ ಕೆಲ ಮಹತ್ವದ ಕಡತ ಬಗ್ಗೆಯೂ ಮಾಹಿತಿ ಕಲೆ ಹಾಕಿದೆ. ಮುಖ್ಯಮಂತ್ರಿ ಆಪ್ತರ ದೂರವಾಣಿ, ಬ್ಯಾಂಕ್ ಖಾತೆ ಸೇರಿದಂತೆ ಮಹತ್ವದ ಮಾಹಿತಿ ಕಲೆ ಹಾಕಲಾಗಿದೆ.
ಇದನ್ನೂ ಓದಿ: ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಜಮೀನಿಗೆ ಭೇಟಿ ಕೊಟ್ಟ ಲೋಕಾಯುಕ್ತ ಟೀಂ
ಇನ್ನು ಲೋಕಾಯುಕ್ತ ಮುಡಾ ಅಕ್ರಮ ಪ್ರಕರಣದ ತನಿಖೆ ಚುರುಕುಗೊಳಿಸಿದೆ. ಕೆಸರೆ ಸರ್ವೆ ನಂ.464ರ 3.16 ಎಕರೆ ಜಮೀನಿಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ದೂರುದಾರ ಸ್ನೇಹಮಯಿ ಕೃಷ್ಣ ಜೊತೆ ಲೋಕಾಯುಕ್ತ ಟೀಂ ಭೇಟಿ ನೀಡಿದೆ. ಲೋಕಾಯುಕ್ತ ಎಸ್ಪಿ ಟಿ.ಜೆ ಉದೇಶ್ ನೇತೃತ್ವದ ತಂಡ ಪರಿಶೀಲನೆ ನಡೆಸುತ್ತಿದೆ. ಅಧಿಕಾರಿಗಳು ಸ್ಥಳದಿಂದಲೇ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ