Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೂ ಹಬ್ಬಿದ ಮುಡಾ ಜಾಲ: ಬಿಲ್ಡರ್​​ ಮನೆ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇತ್ತೀಚಿಗೆ ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದರು. ಬಳಿಕ ಅಲ್ಲಿನ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು. ಇದೀಗ ಇಡಿ ಅಧಿಕಾರಿಗಳು ಬೆಂಗಳೂರಿನ ಜೆ.ಪಿ‌.ನಗರದ ಬಿಲ್ಡರ್ ಎನ್.ಮಂಜುನಾಥ್ ಮನೆ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿಗೂ ಹಬ್ಬಿದ ಮುಡಾ ಜಾಲ: ಬಿಲ್ಡರ್​​ ಮನೆ ಮೇಲೆ ಇಡಿ ದಾಳಿ
ಇಡಿ
Follow us
Prajwal Kumar NY
| Updated By: ವಿವೇಕ ಬಿರಾದಾರ

Updated on:Oct 28, 2024 | 12:04 PM

ಬೆಂಗಳೂರು, ಅಕ್ಟೋಬರ್​ 28: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜೆ.ಪಿ‌.ನಗರದ ಬಿಲ್ಡರ್ ಎನ್​​. ಮಂಜುನಾಥ್​​​ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಡಿ ಅಧಿಕಾರಿಗಳು ಬಿಲ್ಡರ್​ನ​ ನಿವಾಸದಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹಗರಣ ಸಂಬಂಧ ಇಡಿ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರಿನ 7-8 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಇಡಿ ಅಧಿಕಾರಿಗಳು ಅಕ್ಟೋಬರ್​ 18 ಮುಡಾ ಕಚೇರಿ ಸೇರಿದಂತೆ ಮೈಸೂರಿನ ಇತರ ಕೆಲವು ಸ್ಥಳಗಳ ಮೇಲೆ ದಾಳಿ ಮಾಡಿದ್ದರು. ದಾಳಿ ಬಳಿಕ, ಇಡಿ ಅಧಿಕಾರಿಗಳು ಮುಡಾದ ಆರು ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಸಂಗ್ರಹಿಸಿದ್ದರು. ಅಧಿಕಾರಿಗಳು ಕಳೆದ ವಾರ ಬೆಂಗಳೂರಿನ ಇಡಿ ಕಚೇರಿಯಲ್ಲಿ ಮುಡಾದ ಕೆಲವು ಕೆಳಹಂತದ ಅಧಿಕಾರಿಗಳನ್ನು ವಿಚಾರಣೆ ನಡೆಸಿದ್ದರು.

ಗಂಗರಾಜುಗೆ ನೋಟಿಸ್​

ಇಡಿ ಅಧಿಕಾರಿಗಳು ಆರ್​ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ಜಾರಿ ಮಾಡಿದ್ದರು. ಅದರಂತೆ ಆರ್​ಟಿಐ ಕಾರ್ಯಕರ್ತ ಗಂಗರಾಜು ಇಂದು (ಅ.28) ಬೆಂಗಳೂರು ಇಡಿ ಕಚೇರಿಗೆ ತೆರಳಿದ್ದು, ವಿಚಾರಣೆಗೆ ಹಾಜರಾಗಿದ್ದಾರೆ.

ಇದನ್ನೂ ಓದಿ: ನಿಜವಾಯ್ತು ಟಿವಿ9 ಡಿಜಿಟಲ್​ ನುಡಿದಿದ್ದ ಭವಿಷ್ಯ; ಮುಡಾ ಕಚೇರಿ ಮೇಲೆ ಇಡಿ ದಾಳಿ, ಸಿದ್ದರಾಮಯ್ಯಗೆ ಹೆಚ್ಚಿದ ಸಂಕಷ್ಟ

ಇಡಿ ಕೇಳುವ ಎಲ್ಲ ದಾಖಲೆ ಕೊಡುವೆ: ಗಂಗರಾಜು

ಇಡಿ ಅಧಿಕಾರಿಗಳಿಂದ ನೋಟಿಸ್​ ಜಾರಿ ವಿಚಾರವಾಗಿ ನಗರದಲ್ಲಿ ಟಿವಿ9 ಜೊತೆಗೆ ಗಂಗರಾಜು ಮಾತನಾಡಿದ್ದು, ಇಡಿ ನನಗೆ ಸಮನ್ಸ್ ನೀಡಿದ್ದಾರೆ, ಆದರೆ ಯಾವ ಪ್ರಕರಣ ಗೊತ್ತಿಲ್ಲ. ನಾನು ಸಾಕಷ್ಟು ವಿಚಾರವಾಗಿ ಹೋರಾಟ ಮಾಡಿದ್ದೇನೆ. ಮುಡಾದಲ್ಲಿ ಹಲವಾರು ದಾಖಲೆ ನಾಪತ್ತೆಯಾಗಿವೆ. ಇಡಿ ಕೇಳುವ ಎಲ್ಲಾ ದಾಖಲೆ ಕೊಡಲು ನಾನು‌ ಸಿದ್ಧನಿದ್ದೇನೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:00 am, Mon, 28 October 24

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು