AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮ್ಯಾ, ವಿಜಯಲಕ್ಷ್ಮಿ ಬೆನ್ನಲ್ಲೇ ಕಾಂಗ್ರೆಸ್ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ

ಮೂಡಿಗೆರೆ ಕಾಂಗ್ರೆಸ್ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ ತಪ್ಪಿಲ್ಲ. ವೈಯಕ್ತಿಕ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಬಟ್ಟೆ ಮತ್ತು ವೈಯಕ್ತಿಕ ವಿಚಾರಗಳ ಬಗ್ಗೆ ಕಿಡಿಗೇಡಿಗಳು ಮಾಡಿರುವ ಕೀಳು ಮಟ್ಟದ ಕಾಮೆಂಟ್‌ಗಳನ್ನು ಕಂಡು ಬೇಸರ ವ್ಯಕ್ತಪಡಿಸಿದ್ದಾರೆ. ಇಂತಹ ಕಾಮೆಂಟ್‌ಗಳ ವಿರುದ್ಧ ಹೋರಾಡುವುದಾಗಿ ಅವರು ಹೇಳಿದ್ದಾರೆ.

ರಮ್ಯಾ, ವಿಜಯಲಕ್ಷ್ಮಿ ಬೆನ್ನಲ್ಲೇ ಕಾಂಗ್ರೆಸ್ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ
ಶಾಸಕಿಗೆ ಬಂದ ಅಶ್ಲೀಲ ಕಾಮೆಂಟ್​​ಗಳು
ಪ್ರಸನ್ನ ಗಾಂವ್ಕರ್​
| Edited By: |

Updated on:Jan 11, 2026 | 7:14 PM

Share

ಬೆಂಗಳೂರು, ಜನವರಿ 11: ಇತ್ತೀಚೆಗೆ ನಟಿ ರಮ್ಯಾ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಅಶ್ಲೀಲ ಮೆಸೇಜ್ ಮಾಡುವವರ ವಿರುದ್ಧ ಸಿಡಿದೆದ್ದಿದ್ದರು. ಅಶ್ಲೀಲವಾಗಿ ಕಾಮೆಂಟ್ (Obscene comment) ಮಾಡಿದವರ ವಿರುದ್ಧ ದೂರು ನೀಡುವ ಮೂಲಕ ಕಾನೂನು ಸಮರ ಸಾರಿದ್ದರು. ಇದು ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಆದರೆ ಇದೀಗ ಕಾಂಗ್ರೆಸ್​ ಶಾಸಕಿ ನಯನಾ ಮೋಟಮ್ಮರಿಗೂ (Nayana Motamma) ಅಶ್ಲೀಲ ಕಾಮೆಂಟ್ ಕಾಟ ಶುರುವಾಗಿದೆ. ವೈಯಕ್ತಿಕ ಇನ್ಸ್ಟಾಗ್ರಾಮ್ ಖಾತೆಯಲ್ಲಿನ ಪೋಸ್ಟ್‌ಗೆ ವೇಶ್ಯೆ ಎಂದು ಕಾಮೆಂಟ್ ಮಾಡಿದ್ದಾರೆಂದು ನಯನಾ ಮೋಟಮ್ಮ ಆರೋಪಿಸಿದ್ದಾರೆ.

ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಎರಡು ಅಧಿಕೃತ ಖಾತೆ ಹೊಂದಿದ್ದಾರೆ. ವೈಯಕ್ತಿಕ ವಿಚಾರ ಹಂಚಿಕೊಳ್ಳಲು ಒಂದು ಖಾತೆ, ರಾಜಕೀಯ ವಿಚಾರದ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಮತ್ತೊಂದು ಪ್ರತ್ಯೇಕ ಖಾತೆಗಳನ್ನು ಹೊಂದಿದ್ದಾರೆ. ಖಾಸಗಿ ಪ್ರವಾಸ, ವೈಯಕ್ತಿಕ ವಿಚಾರ ಹಂಚಿಕೊಳ್ಳುವ ಖಾತೆಯಲ್ಲಿ ಬಟ್ಟೆ ಬಗ್ಗೆ ಕಿಡಿಗೇಡಿಗಳು ಅಶ್ಲೀಲ ಕಾಮೆಂಟ್​​ ಮಾಡಿದ್ದಾರೆ.

ಅಶ್ಲೀಲ ಕಾಮೆಂಟ್‌ ಮಾಡಿರುವವರ ಮನಸ್ಥಿತಿ ಬಗ್ಗೆ ಶಾಸಕಿ ನಯನಾ ಮೋಟಮ್ಮ ಬೇಸರ

ಇನ್ನು ರೀತಿ ಅಶ್ಲೀಲ ಕಾಮೆಂಟ್‌ ಮಾಡಿರುವವರ ಮನಸ್ಥಿತಿ ಬಗ್ಗೆ ಶಾಸಕಿ ನಯನಾ ಮೋಟಮ್ಮ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿರುವ ಅವರು, ಮಹಿಳಾ ವಿರೋಧಿ ಮನೋಭಾವವನ್ನು ನಾನು ವಿರೋಧಿಸುತ್ತಿದ್ದೇನೆ. ಸ್ಲೀವ್ ಲೆಸ್ ಬಟ್ಟೆ ಹಾಕಿದರೆ ಕೆಲಸ ಮಾಡದ ರಾಜಕಾರಣಿ ಎನ್ನುತ್ತಾರೆ. ವೇಶ್ಯೆ ಎನ್ನುವ ಮಟ್ಟಕ್ಕೂ ಇಳಿಯುತ್ತಾರೆ. ಡಿಪಿ ಇಲ್ಲದ ಪ್ರೊಫೈಲ್ ಇಟ್ಟುಕೊಂಡು ಕಾಮೆಂಟ್ ಮಾಡುತ್ತಾರೆ. ಬಹುಶಃ ಒಂದು ದಿನ ನಾನವರನ್ನು ಎದುರಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಭಾಷೆಯ ಸೂಚನಾ ಬರಹ: ಸಾರ್ವಜನಿಕರು ಆಕ್ರೋಶ

ಕೊಪ್ಪಳ ನಗರದ ಬನ್ನಿಕಟ್ಟೆ ಬಡಾವಣೆಗೆ ಸಮೀಪದ ಪದಕಿ ಲೇಔಟ್‌ನಲ್ಲಿ, ಕೊಪ್ಪಳ ನಗರಸಭೆ ವತಿಯಿಂದ ಎಂದು ಹೇಳಲಾಗಿರುವ ಸೂಚನಾ ಬರಹವೊಂದು ವಿದ್ಯುತ್ ಕಂಬಕ್ಕೆ ಅಂಟಿಸಿರುವುದು ಸಾರ್ವಜನಿಕರಲ್ಲಿ  ತೀವ್ರ ಚರ್ಚೆ ಹಾಗೂ ಆತಂಕಕ್ಕೆ ಕಾರಣವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವವರ ವಿರುದ್ಧ ದಂಡ ವಿಧಿಸುವ ಕುರಿತು ಸೂಚನಾ ಫಲಕ ಅಂಟಿಸುವುದು ಸ್ಥಳೀಯ ಆಡಳಿತದ ಸಾಮಾನ್ಯ ಹಾಗೂ ನಿಯಮಬದ್ಧ ಕ್ರಮವಾಗಿದ್ದರೂ, ಈ ಸ್ಥಳದಲ್ಲಿ ಅಂಟಿಸಿರುವ ಸೂಚನಾ ಬರಹದಲ್ಲಿ ಅಶ್ಲೀಲ ಹಾಗೂ ಅಸಭ್ಯ ಪದಗಳನ್ನು ಬಳಸಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?, ಗಂಡ-ಹೆಂಡ್ತಿ ಜಗಳ ಕೇಸ್​ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್

ಮಕ್ಕಳು, ಮಹಿಳೆಯರು ಸೇರಿದಂತೆ ಸಾರ್ವಜನಿಕರು ನಿರಂತರವಾಗಿ ಸಂಚರಿಸುವ ಪ್ರದೇಶದಲ್ಲಿ ಈ ರೀತಿಯ ಭಾಷೆಯ ಬಳಕೆ ಅಸಹ್ಯಕರವಾಗಿದೆ ಎಂದು ಸ್ಥಳೀಯ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ನಗರಸಭೆಯ ಜವಾಬ್ದಾರಿಯುತ ಅಧಿಕಾರಿಗಳು ಈ ಕುರಿತು ಸ್ಪಷ್ಟನೆ ನೀಡಬೇಕು ಹಾಗೂ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:08 pm, Sun, 11 January 26