ನಾಳೆ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಮಾಜಿ ಎಂಎಲ್ಸಿ ಮುಖ್ಯಮಂತ್ರಿ ಚಂದ್ರು

| Updated By: ಆಯೇಷಾ ಬಾನು

Updated on: Jun 06, 2022 | 6:16 PM

ಕಾಂಗ್ರೆಸ್‌ ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬೇಸರಗೊಂಡು ಇತ್ತೀಚೆಗಷ್ಟೇ ವಿಧಾನಪರಿಷತ್ತಿನ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಹಾಗೂ ರಾಷ್ಟ್ರೀಯ ವಕ್ತಾರ ಬ್ರಿಜೇಶ್‌ ಕಾಳಪ್ಪ ಅವರು ರಾಜೀನಾಮೆ ನೀಡಿ ಕಾಂಗ್ರೆಸ್ನಿಂದ ಹೊರಬಂದಿದ್ದರು.

ನಾಳೆ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಮಾಜಿ ಎಂಎಲ್ಸಿ ಮುಖ್ಯಮಂತ್ರಿ ಚಂದ್ರು
ಮುಖ್ಯಮಂತ್ರಿ ಚಂದ್ರು
Follow us on

ಬೆಂಗಳೂರು: ಮಾಜಿ ಎಂಎಲ್ಸಿ ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಲಿದ್ದಾರೆ. ಚಂದ್ರು ನಾಳೆ ಬೆಂಗಳೂರಿನಲ್ಲಿ ಆಪ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ದೆಹಲಿ, ಪಂಜಾಬ್‌ ಬಳಿಕ ಕರ್ನಾಟಕದಲ್ಲೂ ತನ್ನ ಸಂಘಟನೆ ಬಲಪಡಿಸಿಕೊಳ್ಳುವತ್ತ ಗಮನ ಹರಿಸುತ್ತಿರುವ ಆಮ್‌ ಆದ್ಮಿ ಪಕ್ಷ, ಕಾಂಗ್ರೆಸ್‌ನ ಹಿರಿಯ ಮುಖಂಡರನ್ನು ತನ್ನತ್ತ ಸೆಳೆಯಲು ಸರ್ಕಸ್ ಮಾಡುತ್ತಿದೆ. ಸದ್ಯ ನಾಳೆ ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಕಾಂಗ್ರೆಸ್‌ ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬೇಸರಗೊಂಡು ಇತ್ತೀಚೆಗಷ್ಟೇ ವಿಧಾನಪರಿಷತ್ತಿನ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಹಾಗೂ ರಾಷ್ಟ್ರೀಯ ವಕ್ತಾರ ಬ್ರಿಜೇಶ್‌ ಕಾಳಪ್ಪ ಅವರು ರಾಜೀನಾಮೆ ನೀಡಿ ಕಾಂಗ್ರೆಸ್ನಿಂದ ಹೊರಬಂದಿದ್ದರು. ಅವರಿಬ್ಬರೂ ಆಮ್‌ ಆದ್ಮಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ. ಚಂದ್ರು ಅವರು ನಾಳೆ ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಲಿದ್ದಾರೆ. ಬ್ರಿಜೇಶ್‌ ತಿಂಗಳಾಂತ್ಯದೊಳಗೆ ಪಕ್ಷ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ನಿಮ್ಮಂತೆ ಮತಾಂಧರನ್ನು ಸ್ತುತಿಸುವುದಿಲ್ಲ; ಪಾಕ್ ಪ್ರಧಾನಿ ಟ್ವೀಟ್​ಗೆ ಭಾರತ ತಿರುಗೇಟು

Published On - 6:16 pm, Mon, 6 June 22