AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಯೋಜನೆಗೆ ಇಂದು ಚಾಲನೆ; ವಿದ್ಯಾರ್ಥಿಗಳ ಖಾತೆಗೆ ನೇರ ಹಣ ವರ್ಗಾವಣೆ

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು, ಪಿಯುಸಿ, ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ 2,500 ರೂ. ಮತ್ತು ವಿದ್ಯಾರ್ಥಿನಿಯರಿಗೆ 3 ಸಾವಿರ ರೂ. ಹಣವನ್ನು ಸರ್ಕಾರ ನೀಡಲಿದೆ.

‘ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಯೋಜನೆಗೆ ಇಂದು ಚಾಲನೆ; ವಿದ್ಯಾರ್ಥಿಗಳ ಖಾತೆಗೆ ನೇರ ಹಣ ವರ್ಗಾವಣೆ
‘ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಯೋಜನೆಗೆ ಚಾಲನೆ ನೀಡಲಾಗಿದೆ
TV9 Web
| Updated By: sandhya thejappa|

Updated on:Sep 05, 2021 | 12:21 PM

Share

ಬೆಂಗಳೂರು: ಘೋಷಣೆ ಆಗಿದ್ದ ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ’ (Mukyamanthri Raitha Vidhyanidhi) ಯೋಜನೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಇಂದು (ಸೆ.5) ಚಾಲನೆ ಸಿಕ್ಕಿದೆ. ರೈತ ವಿದ್ಯಾನಿಧಿ ಯೋಜನೆಯಡಿ ರೈತರ ಮಕ್ಕಳಿಗೆ ರಾಜ್ಯ ಸರ್ಕಾರ ಶಿಷ್ಯ ವೇತನ ನೀಡಲಿದ್ದು, ಇಂದು ಸಾಂಕೇತಿಕವಾಗಿ ರೈತರ ಮಕ್ಕಳಿಗೆ ಚೆಕ್ ವಿತರಣೆ ಮಾಡಲಾಗಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಿಸಿದ್ದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು,ಯೋಜನೆಗೆ ಬಟನ್ ಒತ್ತುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್​ರಿಂದ ವಿದ್ಯಾರ್ಥಿಗಳ ಖಾತೆಗೆ ವಿದ್ಯಾನಿಧಿ ಹಣವನ್ನು ವರ್ಗಾವಣೆ ಮಾಡಲಾಗಿದೆ.

ಈ ಯೋಜನೆ ಸುಮಾರು 17 ಲಕ್ಷ ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಪಿಯುಸಿ, ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ 2,500 ರೂ. ಮತ್ತು ವಿದ್ಯಾರ್ಥಿನಿಯರಿಗೆ 3 ಸಾವಿರ ರೂ. ಹಣವನ್ನು ಸರ್ಕಾರ ನೀಡಲಿದೆ. ಇನ್ನು ಪದವೀಧರ ವಿದ್ಯಾರ್ಥಿಗಳಿಗೆ 5 ಸಾವಿರ ರೂ, ವಿದ್ಯಾರ್ಥಿನಿಗಳಿಗೆ 5,500 ರೂ. ಹಣವನ್ನು ಸರ್ಕಾರ ನೀಡಲಿದೆ. ಎಲ್ಎಲ್​ಬಿ, ಪ್ಯಾರಾಮೆಡಿಕಲ್, ಬಿ ಫಾರ್ಮ್, ನರ್ಸಿಂಗ್, ವೃತ್ತಿಪರ ಕೋರ್ಸ್​ಗಳ ವಿದ್ಯಾರ್ಥಿಗಳಿಗೆ 7,500 ರೂ, ನೀಡಿದರೆ, ವಿದ್ಯಾರ್ಥಿನಿಯರಿಗೆ 8 ಸಾವಿರ ರೂ. ಹಣವನ್ನು ರಾಜ್ಯ ಸರ್ಕಾರ ನೀಡುತ್ತದೆ.

ಎಂಬಿಬಿಎಸ್, ಬಿಇ, ಬಿ.ಟೆಕ್ ಸ್ನಾತಕೋತ್ತರ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 10 ಸಾವಿರ, ವಿದ್ಯಾರ್ಥಿನಿಯರಿಗೆ 11,000 ರೂ. ಶಿಷ್ಯ ವೇತನ ನೀಡಲಾಗುವುದು. ನೋಂದಣಿಯಾದ ಶಿಕ್ಷಣ ಸಂಸ್ಥೆಗಳಲ್ಲಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆವರಿಗೆ ರಾಜ್ಯ ಸರ್ಕಾರ ಶಿಷ್ಯ ವೇತನ ನೀಡುತ್ತದೆ.

ಈ ಕಾರ್ಯಕ್ರಮದಲ್ಲಿ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ,  ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವರಾದ ಮುನಿರತ್ನ, ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಭಾಗಿಯಾಗಿದ್ದಾರೆ.

ಈ ಬಗ್ಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಜನಪ್ರತಿನಿಧಿ ತನ್ನ ವಿಚಾರವನ್ನು ಯೋಜನೆ ರೂಪಕ್ಕೆ ತಂದು, ಅದನ್ನು ಶೀಘ್ರ ಕಾರ್ಯರೂಪಕ್ಕೆ ತಂದರೆ ಸಂತೋಷವಾಗುತ್ತೆ. ರಾಜ್ಯದಲ್ಲಿ 10 ಕೃಷಿ ವಾತಾವರಣ ವಲಯಗಳಿವೆ. ಹೀಗಾಗಿ ವರ್ಷಪೂರ್ತಿ ವಿವಿಧ ಬೆಳೆಗಳನ್ನು ಬೆಳೆಯಬಹುದು. ರೈತಾಪಿ ವರ್ಗಕ್ಕೆ ಅತಿ ಹೆಚ್ಚು ಪ್ರೋತ್ಸಾಹ ಯೋಜನೆ ಕೊಟ್ಟ ಏಕೈಕ ನಾಯಕ ಯಡಿಯೂರಪ್ಪ. ಕೃಷಿ ಬಜೆಟ್, ರೈತರ ಪಂಪ್ ಸೆಟ್​ಗಳಿಗೆ ಉಚಿತ ವಿದ್ಯುತ್ ಕೊಟ್ಟವರು ಯಡಿಯೂರಪ್ಪ. ಅದೇ‌ ನಿಟ್ಟಿನಲ್ಲಿ ರೈತರ ಮಕ್ಕಳಿಗೆ ಸ್ಕಾಲರ್ ಶಿಪ್ ಯೋಜನೆ ತರುವುದಕ್ಕೆ ಯೋಚನೆ ಮಾಡಿದೆ. 17 ಲಕ್ಷ ರೈತ ಕುಟುಂಬದ ಮಕ್ಕಳಿಗೆ‌ ಅನುಕೂಲವಾಗಲಿದೆ. ಸಾರ್ಥಕತೆಯ ಸಮಾಧಾನ ನನಗಿದೆ ಎಂದು ತಿಳಿಸಿದರು.

ಇದನ್ನೂ ಓದಿ

ಇತಿಹಾಸ ನಿರ್ಮಿಸಿದ ಕನ್ನಡಿಗ ಸುಹಾಸ್ ಯತಿರಾಜ್​ಗೆ ಸಿಎಂ ಬೊಮ್ಮಾಯಿ, ಪ್ರಧಾನಿ ಮೋದಿ ಅಭಿನಂದನೆ

ನರಗಳ ಸಮಸ್ಯೆಯನ್ನು ಪ್ರಾರಂಭದಲ್ಲೇ ಗುರುತಿಸಲು ಶೇ.60ರಷ್ಟು ಜನರು ವಿಫಲರಾಗುತ್ತಾರೆ; ಸಮೀಕ್ಷೆ

(Mukyamanthri Raitha Vidhyanidhi project has been launched today)

Published On - 11:34 am, Sun, 5 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ