AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟದಲ್ಲಿ ವಿಪಕ್ಷ ಬಿಜೆಪಿಗೆ ಸಾಲು ಸಾಲು ಆಘಾತ: ಮುನಿರತ್ನ ಪ್ರಕರಣದಲ್ಲೂ ಭಾರೀ ಹಿನ್ನಡೆ

ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಭಾರೀ ಹಿನ್ನಡೆ ಅನುಭವಿಸಿದ್ದರು. ಅಲ್ಲದೆ ಗುತ್ತಿಗೆದಾರನಿಂದ 5 ಲಕ್ಷ ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಸಹ ನ್ಯಾಯಾಂಗ ಬಂಧನದಲ್ಲಿರುವಾಗಲೇ ಮತ್ತೋರ್ವ ವಿಪಕ್ಷ ಶಾಸಕ ಮುನಿರತ್ನ ಹನಿಟ್ರ್ಯಾಪ್ ಪ್ರಕರಣದಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದಾರೆ.

ಕರ್ನಾಟದಲ್ಲಿ ವಿಪಕ್ಷ ಬಿಜೆಪಿಗೆ ಸಾಲು ಸಾಲು ಆಘಾತ: ಮುನಿರತ್ನ ಪ್ರಕರಣದಲ್ಲೂ ಭಾರೀ ಹಿನ್ನಡೆ
ಶಾಸಕ ಮುನಿರತ್ನ ಹನಿಟ್ರ್ಯಾಪ್ ಪ್ರಕರಣ; ‘ಬಿ’ ರಿಪೋರ್ಟ್ ತಿರಸ್ಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ
Ramesha M
| Edited By: |

Updated on:Mar 03, 2026 | 12:04 PM

Share

ಬೆಂಗಳೂರು, ಮಾರ್ಚ್​ 03:  ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಸಿಕ್ಕಿಬಿದ್ದಿದ್ದ ಡಾ. ಚಂದ್ರು ಲಮಾಣಿ ಸೇರಿದಂತೆ ಇನ್ನೋರ್ವ ಬಿಜೆಪಿಗ ಮುನಿರತ್ನ ವಿರುದ್ಧದ ಹನಿಟ್ರ್ಯಾಪ್‌ (Muniratna Honeytrap case) ಪ್ರಕರಣದಲ್ಲಿ ಹಿನ್ನೆಡೆ ಅನುಭವಿಸಿದ್ದಾರೆ. ಕರ್ನಾಟಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿಐಡಿ ಎಸ್‌ಐಟಿ ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ತಿರಸ್ಕರಿಸಿ, ಮರು ತನಿಖೆ ನಡೆಸುವಂತೆ ಆದೇಶಿಸಿದೆ. ಈ ಮೂಲಕ ಪ್ರಕರಣ ಮತ್ತೆ ಚುರುಕುಗೊಂಡಿದ್ದು, ಶಾಸಕರಿಗೆ ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ.

ಮರು ತನಿಖೆಗೆ ಆದೇಶ

ಜೆಡಿಎಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಸಲ್ಲಿಸಿದ್ದ ದೂರಿನ ತನಿಖೆ ಪೂರ್ಣಗೊಳಿಸಿದ ಎಸ್‌ಐಟಿ ಅಧಿಕಾರಿಗಳು ಸಾಕ್ಷಿಯ ಅಭಾವವೆಂದು ಉಲ್ಲೇಖಿಸಿ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ಆದರೆ, ಇದನ್ನು ಪ್ರಶ್ನಿಸಿ ನಾರಾಯಣಸ್ವಾಮಿ ಮರು ಅರ್ಜಿ ಸಲ್ಲಿಸಿದ್ದರು. ದೂರುದಾರರ ಪರ ಹಿರಿಯ ವಕೀಲ ಸಿ.ಎಚ್. ಹನುಮಂತರಾಯ ವಾದ ಮಂಡಿಸಿ, ಧ್ವನಿಮುದ್ರಣ ಸೇರಿದಂತೆ ಪ್ರಾಥಮಿಕ ಸಾಕ್ಷ್ಯಾಧಾರಗಳನ್ನು ಸಲ್ಲಿಸಲಾಗಿದೆ. ಆದರೂ ಪೊಲೀಸರು ಸಮರ್ಪಕ ತನಿಖೆ ನಡೆಸದೆ ‘ಬಿ’ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ವಾದಗಳನ್ನು ಆಲಿಸಿ, ‘ಬಿ’ ರಿಪೋರ್ಟ್ ಅನ್ನು ರದ್ದುಗೊಳಿಸಿ, ಪ್ರಕರಣದ ಮುಂದಿನ ತನಿಖೆ ನಡೆಸುವಂತೆ ಸಿಐಡಿ ಎಸ್‌ಐಟಿಗೆ ನಿರ್ದೇಶನ ನೀಡಿದರು. ವಿಚಾರಣೆಯನ್ನು ಮಾರ್ಚ್ 30ಕ್ಕೆ ಮುಂದೂಡಲಾಗಿದೆ. ಈ ಆದೇಶದಿಂದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ಇದನ್ನೂ ಓದಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಹನಿಟ್ರ್ಯಾಪ್ ಆರೋಪ: ಬೆಡ್ ರೂಂನಲ್ಲಿ ಕ್ಯಾಮರಾ ಇಡಲು ಯತ್ನಿಸಿದ್ದರೆಂದ ಸಂತ್ರಸ್ತೆಯ ಪತಿ

ಏನಿದು ಹನಿಟ್ರ್ಯಾಪ್ ಕೇಸ್?

ಜೆಡಿಎಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಅವರು 2024ರ ಡಿಸೆಂಬರ್‌ನಲ್ಲಿ ನಂದಿನಿ ಲೇಔಟ್ ಠಾಣೆಗೆ ದೂರು ಸಲ್ಲಿಸಿದ್ದರು. ತಮ್ಮ ಹಾಗೂ ಪತ್ನಿ ಮಂಜುಳಾ ಅವರ ವಿರುದ್ಧ ಹನಿಟ್ರ್ಯಾಪ್ ಸಂಚು ರೂಪಿಸಿ, ತೇಜೋವಧೆ ಮಾಡಲು ಯತ್ನಿಸಿದ್ದಾರೆ ಎಂದು ಅವರು ಆರೋಪಿಸಿದ್ದರು. ಅಲ್ಲದೆ, ಪತ್ನಿಯ ಕೊಲೆಗೆ ಷಡ್ಯಂತ್ರ ರೂಪಿಸಿ ಸುಪಾರಿ ನೀಡಲಾಗಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದರು. ಈ ಪ್ರಕರಣದ ತನಿಖೆಯನ್ನು ನಂತರ ಸಿಐಡಿ ಎಸ್‌ಐಟಿಗೆ ವರ್ಗಾವಣೆ ಮಾಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:05 am, Tue, 3 March 26

Follow Us
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು