AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಕೆಂಪಣ್ಣ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಿಚಾರಣೆ: ಮ್ಯಾಜಿಸ್ಟ್ರೇಟ್ ಕೋರ್ಟ್ ಜಾರಿಗೊಳಿಸಿದ್ದ ಸಮನ್ಸ್ ರದ್ದುಪಡಿಸಿ ಆದೇಶ

ಸಚಿವ ಮುನಿರತ್ನ ಮಾನನಷ್ಟ ಮೊಕದ್ದಮೆ ಪ್ರಶ್ನಿಸಿ ಅರ್ಜಿ ದಾಖಲಿಸಿದ್ದರು. ಬಳಿಕ ಡಿ.ಕೆಂಪಣ್ಣ ಅವರು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಸಚಿವ ಮುನಿರತ್ನ ಸಾಕ್ಷಿಗಳ ಪಟ್ಟಿ ಒದಗಿಸಿಲ್ಲವೆಂದು ವಾದ ಮಾಡಲಾಗಿದೆ.

ಡಿ.ಕೆಂಪಣ್ಣ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಿಚಾರಣೆ: ಮ್ಯಾಜಿಸ್ಟ್ರೇಟ್ ಕೋರ್ಟ್ ಜಾರಿಗೊಳಿಸಿದ್ದ ಸಮನ್ಸ್ ರದ್ದುಪಡಿಸಿ ಆದೇಶ
ಡಿ.ಕೆಂಪಣ್ಣ, ಮುನಿರತ್ನImage Credit source: varthabharati.in
TV9 Web
| Edited By: |

Updated on: Feb 15, 2023 | 7:39 PM

Share

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ (Kempanna)  ವಿರುದ್ಧ ಕೇಸ್ ವಿಚಾರವಾಗಿ ಸಚಿವ ಮುನಿರತ್ನ (Munirathna) ಮಾನನಷ್ಟ ಮೊಕದ್ದಮೆ ಪ್ರಶ್ನಿಸಿ ಅರ್ಜಿ ದಾಖಲಿಸಿದ್ದರು. ಬಳಿಕ ಡಿ.ಕೆಂಪಣ್ಣ ಅವರು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಸಚಿವ ಮುನಿರತ್ನ ಸಾಕ್ಷಿಗಳ ಪಟ್ಟಿ ಒದಗಿಸಿಲ್ಲವೆಂದು ವಾದ ಮಾಡಲಾಗಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಜಾರಿಗೊಳಿಸಿದ್ದ ಸಮನ್ಸ್ ರದ್ದುಪಡಿಸಿ ಹೊಸದಾಗಿ ಸಮನ್ಸ್ ಬಗ್ಗೆ ತೀರ್ಮಾನಿಸಲು ಸೆಷನ್ಸ್ ಕೋರ್ಟ್ ಸೂಚನೆ ನೀಡಿದ್ದು, ಪ್ರಕರಣ ಮತ್ತೆ ಮ್ಯಾಜಿಸ್ಟ್ರೇಟ್ ಕೋರ್ಟ್​ಗೆ ಮರಳಿಸಿ ಆದೇಶ ಹೊರಡಿಸಿದೆ. ಸಚಿವ ಮುನಿರತ್ನ ಅವರು ಶೇ 40 ರಷ್ಟು ಕಮಿಷನ್​ ಪಡೆದಿದ್ದಾರೆ ಎಂದು ಆರೋಪಿಸಿ ಮಾನಹಾನಿ ಪ್ರಕರಣದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ  ಅವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಜಾಮೀನು ಮೇಲೆ ಅವರನ್ನು ಬಿಡುಗಡೆ ಮಾಡಲಾಗಿತ್ತು. ಸದ್ಯ ಈ ವಿಚಾರವಾಗಿ

ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ

ಮೊದಲಿಗೆ ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ, ಬಳಿಕ MLAಗಳಿಗೆ 10 ಪರ್ಸೆಂಟ್​ ಕಮಿಷನ್​ ಕೊಡಬೇಕು, ಮಂತ್ರಿ​​ಗಳಿಗೆ ಶೇಕಡಾ 5ರಷ್ಟು ಪರ್ಸೆಂಟೇಜ್​ ಕೊಡಬೇಕು ಎಂಬ ಸ್ಫೋಟಕ ಬಾಂಬ್ ಸಿಡಿಸಿದ್ದರು. ಬಿಜೆಪಿ ಸರ್ಕಾರದಲ್ಲಿ 40% -50% ಕಮಿಷನ್​ ವಸೂಲಿ ಆಗುತ್ತಿದ್ದು, 2019ರ ನಂತರ ಸರ್ಕಾರದಲ್ಲಿ ಪರ್ಸೆಂಟೇಜ್​ ಹೆಚ್ಚಾಗಿದೆ. ಕಾಂಟ್ರಾಕ್ಟರ್​​​ಗಳಿಂದ ಹೆಜ್ಜೆ-ಹೆಜ್ಜೆಗೂ ಕಮಿಷನ್​ ವಸೂಲಿ ಆಗುತ್ತಿದೆ. ನಾನು ಈಗಾಗಲೇ ಪ್ರಧಾನಿ ಮೋದಿಯವರಿಗೂ ದೂರು ನೀಡಿದ್ದೇನೆ ಎಂದಿದ್ದರು.

ಇದನ್ನೂ ಓದಿ: ಮುನಿರತ್ನ ವಿರುದ್ಧ ಕಮಿಷನ್ ಆರೋಪ ಪ್ರಕರಣ: ಅರೆಸ್ಟ್ ಆಗಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣಗೆ ಜಾಮೀನು

ಕರ್ನಾಟಕದಲ್ಲಿ 1 ಲಕ್ಷ ಮಂದಿ ಕಾಂಟ್ರಾಕ್ಟರ್​​ಗಳು ಇದ್ದಾರೆ. KRIDL ಗುತ್ತಿಗೆಯಲ್ಲಿ ಕೆಲಸ ಮಾಡದೇ ಹಣ ಪಡೆಯುತ್ತಿದ್ದಾರೆ, ಏಪ್ರಿಲ್​​​ನಲ್ಲಿ 50 ಸಾವಿರ ಕಾಂಟ್ರಾಕ್ಟರ್​ಗಳು ಹೋರಾಟ ಮಾಡಿದ್ದೇವೆ. ರಸ್ತೆಗಳೂ ಕಳಪೆ ಕಾಮಗಾರಿಯಿಂದ ನಿರ್ಮಾಣ ಆಗುತ್ತಿವೆ. 20 ರಿಂದ 25 ಸಾವಿರ ಕೋಟಿ ಹಣ ರಾಜಕಾರಣಿಗಳ ಜೇಬು ಸೇರುತ್ತಿದೆ. ಭ್ರಷ್ಟಾಚಾರದ ಬಗ್ಗೆ ಯಾರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೆಂಪಣ್ಣ ಕಿಡಿಕಾರಿದ್ದರು.

ಇದನ್ನೂ ಓದಿ: ದಾಖಲೆ ಒದಗಿಸದಿದ್ದರೇ ಮುಂದಿನ ದಿನಗಳಲ್ಲಿ ಇನ್ನೂ ಕಷ್ಟವಾಗುತ್ತೆ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣಗೆ ಎಚ್ಚರಿಕೆ ಕೊಟ್ಟ ಮುನಿರತ್ನ

ಇನ್ನು ಕೆಂಪಣ್ಣ ಅವರು ಇತ್ತೀಚೆಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಮಾತ್ರವಲ್ಲದೇ ಸಚಿವರುಗಳ ವಿರುದ್ಧವೂ 40% ಕಮಿಷನ್ ಆರೋಪ ಮಾಡಿದ್ದರು. ಅದರಲ್ಲೂ ಸಚಿವ ಮುನಿರತ್ನ ಅವರ ವಿರುದ್ಧ ಬಹಿರಂಗವಾಗಿಯೇ ಕಮಿಷನ್ ಆರೋಪ ಮಾಡಿದ್ದರು. ಈ ಹಿನ್ನಲೆ ಮುನಿರತ್ನ ಅವರು ಕೆಂಪಣ್ಣ ಮಾನಹಾನಿ ಕೇಸ್ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಪಣ್ಣ ಅವರು ಕೋರ್ಟ್​ಗೆ ಗೈರಾಗಿದ್ದಕ್ಕೆ ವಾರೆಂಟ್ ಜಾರಿಯಾಗಿತ್ತು. ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷನ ಡಿ.ಕೆಂಪಣ್ಣ ವಿ.ಕೃಷ್ಣಾರೆಡ್ಡಿ, ಸೇರಿ 19 ಪ್ರತಿವಾದಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ಆದರೂ ಯಾವುದೇ ಉತ್ತರ ನೀಡದಿದ್ದರಿಂದ ಬಂಧಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.