ಪಂಚಮಸಾಲಿ ಸಮುದಾಯದ 3ನೇ ಪೀಠಕ್ಕೂ ನಮ್ಮ ಕುಟುಂಬದ ಬೆಂಬಲ ಇದೆ: ಮುರುಗೇಶ್ ನಿರಾಣಿ

3ನೇ ಪೀಠಕ್ಕೂ ನಮ್ಮ ಕುಟುಂಬದ ಬೆಂಬಲ ಇದೆ. ಸಮುದಾಯದ ಉಳಿದೆರಡು ಪೀಠಗಳಿಗೆ ಪರ್ಯಾಯ ಪೀಠವಲ್ಲ. 3ನೇ ಪೀಠದಲ್ಲೂ ಸಮುದಾಯದ ಎಲ್ಲ ಸ್ವಾಮೀಜಿಗಳು ಇರ್ತಾರೆ ಎಂದು ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಪಂಚಮಸಾಲಿ ಸಮುದಾಯದ 3ನೇ ಪೀಠಕ್ಕೂ ನಮ್ಮ ಕುಟುಂಬದ ಬೆಂಬಲ ಇದೆ: ಮುರುಗೇಶ್ ನಿರಾಣಿ
ಮುರುಗೇಶ್ ನಿರಾಣಿ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on: Feb 09, 2022 | 10:30 PM

ಬೆಂಗಳೂರು: ಪಂಚಮಸಾಲಿ ಸಮುದಾಯದ 3ನೇ ಪೀಠ ಸ್ಥಾಪನೆ ವಿಚಾರವಾಗಿ ಬೆಂಗಳೂರಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಬುಧವಾರ (ಫೆಬ್ರವರಿ 9) ಹೇಳಿಕೆ ನೀಡಿದ್ದಾರೆ. ಎಲ್ಲ ಪೀಠಕ್ಕೂ ನಮ್ಮ ಕುಟುಂಬದ ಬೆಂಬಲ, ಸಹಕಾರವಿರುತ್ತೆ. ಹಾಗೆಯೇ 3ನೇ ಪೀಠಕ್ಕೂ ನಮ್ಮ ಕುಟುಂಬದ ಬೆಂಬಲ ಇದೆ. ಸಮುದಾಯದ ಉಳಿದೆರಡು ಪೀಠಗಳಿಗೆ ಪರ್ಯಾಯ ಪೀಠವಲ್ಲ. 3ನೇ ಪೀಠದಲ್ಲೂ ಸಮುದಾಯದ ಎಲ್ಲ ಸ್ವಾಮೀಜಿಗಳು ಇರ್ತಾರೆ ಎಂದು ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಪಂಚಮಸಾಲಿ 3ನೇ ಪೀಠವಾದರೆ ತಪ್ಪೇನಲ್ಲ. ನನ್ನಲ್ಲಿ ಎರಡು ಪೀಠಗಳು ಒಂದೇ ಎಂಬ ಭಾವನೆ ಇದೆ. ಮೂರನೇ ಪೀಠದ ಬಗ್ಗೆ ನನಗೆ ಗೊತ್ತಿಲ್ಲ. ಆದರೆ, 3ನೇ ಪೀಠ ಆದರೆ ತಪ್ಪಲ್ಲ, ಪಂಚಮಸಾಲಿ ಸಮಾಜ ದೊಡ್ಡದಿದೆ. ಇದಕ್ಕೆ ನಾವು ಸಹಮತ ವ್ಯಕ್ತಪಡಿಸಬೇಕು. ಸ್ವಾಮೀಜಿಗಳು ಆಪಾದನೆ ಬಿಟ್ಟು ಜವಾಬ್ದಾರಿ ತೆಗೆದುಕೊಳ್ಳಲಿ. ಅವರೇ ಮುಂದೆ ನಿಂತು ಪೀಠ ರಚನೆಯ ಜವಾಬ್ದಾರಿ ತೆಗೆದುಕೊಳ್ಳಬೇಕು. ಪ್ರತಿಷ್ಠೆಗಾಗಿ ಬರೀ ಅಪಾದನೆ ಮಾಡಬಾರದು ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟಿದ್ದರು.

ವೀರಶೈವ ಲಿಂಗಾಯತ ಪಂಚಮಸಾಲಿ ಹೆಸರಲ್ಲಿ ಮೂರನೆ ಪೀಠದ ಹಿಂದೆ ಮುರುಗೇಶ್ ನಿರಾಣಿ ಕೈವಾಡವಿದೆ ಎಂಬ ಕಾಶಪ್ಪನವರ್ ಹಾಗೂ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಬಾಗಲಕೋಟೆಯಲ್ಲಿ ಸಚಿವ‌ ಮುರುಗೇಶ್ ನಿರಾಣಿ ಪ್ರತಿಕ್ರಿಯೆ ನೀಡಿದ್ದರು. ಈ ಸಮಾಜಕ್ಕಾಗಿ ನಿರಾಣಿ ಕುಟುಂಬ ಏನು ಮಾಡಿದೆ ಅನ್ನೋದು ರಾಜ್ಯದ ಜನತೆಗೆ ಗೊತ್ತಿದೆ. ನನ್ನಲ್ಲಿ ಎರಡು ಪೀಠಗಳು ಒಂದೇ ಎಂಬ ಭಾವನೆ ಇದೆ. ಮೂರನೇ ಪೀಠದ ಬಗ್ಗೆ ನನಗೆ ಗೊತ್ತಿಲ್ಲ. ಆದರೆ, ಮೂರನೇ ಪೀಠ ಆದ್ರೆ ತಪ್ಪಲ್ಲ, ಸಮಾಜ ದೊಡ್ಡದಿದೆ. ಇದಕ್ಕೆ ನಾವು ಸಹಮತ ವ್ಯಕ್ತಪಡಿಸಬೇಕು. ಸ್ವಾಮೀಜಿಗಳು ಆಪಾದನೆ ಬಿಟ್ಟು ಅವರೇ ಮುಂದೆ ನಿಂತು ಪೀಠ ರಚನೆಯ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದಿದ್ದರು.

ಅಲ್ಲದೆ, ಮುರುಗೇಶ್ ನಿರಾಣಿ ದಾನವಾಗಿ ಕೊಟ್ಟ ವಸ್ತುಗಳನ್ನು ವಾಪಸ್ ಕೊಡುತ್ತೇವೆ ಎಂಬ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆಗೆ ನಿರಾಣಿ ಈ ಮೊದಲು ಪ್ರತಿಕ್ರಿಯೆ ನೀಡಿದ್ದರು. ಅದರಿಂದ ಮನಸ್ಸಿಗೆ ನೋವಾಗಿದೆ. ಪಂಚಮಸಾಲಿ ಶ್ರೀಗಳ ಮೇಲೆ ನನಗೆ ಪೂಜ್ಯ ಭಾವನೆ ಇದೆ. ನಾನು ಕೊಟ್ಟ ದಾನದ ಬಗ್ಗೆ ಯಾವತ್ತೂ ಎಲ್ಲಿಯೂ ಹೇಳಿಲ್ಲ. ಮುಂದೆಯೂ ಹೇಳುವುದಿಲ್ಲ. ಅಂಥ ಜಾಯಮಾನ ನಮ್ಮದಲ್ಲ. ನಾವು ಬಲಗೈಯಿಂದ ಕೊಟ್ಟ ದಾನವು ಎಡಗೈಗೆ ಗೊತ್ತಿರುವುದಿಲ್ಲ. ನಮ್ಮ ಹೆಸರು ಹಾಳು ಮಾಡಲು ಇಂಥ ಅಪಪ್ರಚಾರ ಮಾಡುತ್ತಿದ್ದಾರೆ. ಇಂಥ ಪ್ರಚಾರಗಳ ಬಗ್ಗೆ ಪೂರ್ವಾಪರ ಖಚಿತಪಡಿಸಿಕೊಳ್ಳದೆ ಮಾತನಾಡಬಾರದು ಎಂದು ಅವರು ಹೇಳಿದ್ದರು.

ನಮಗೆ ಪಂಚಮಸಾಲಿ ಮತ್ತು ಅನ್ಯ ಸಮುದಾಯದ ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ. ನಮ್ಮ ಪೂರ್ವಜರ ಕಾಲದಿಂದಲೂ ಮಠ ಮಾನ್ಯಗಳಿಗೆ, ದೇಗುಲಗಳಿಗೆ ಸಾಧುಗಳಿಗೆ ನಮ್ಮ ‌ಕೈಲಾದಷ್ಟು ಸಹಾಯ ಮಾಡುತ್ತಿದ್ದೇವೆ. ಕೊಟ್ಟ ದಾನಧರ್ಮದ ಬಗ್ಗೆ ನೆನಪು ಸಹ ಇರುವುದಿಲ್ಲ. ನಾಡಿನ ಎಲ್ಲ ಪರಂಪರೆಯ ಸಂತ ಮಹಾಂತ ಮಠಾಧೀಶರುಗಳ ಸಾಮಿಪ್ಯ ದೊರೆತಿರುವುದು ನಮ್ಮ ಸೌಭಾಗ್ಯ ಎಂದೇ ಭಾವಿಸಿದ್ದೇವೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ದಾನ ಕೊಟ್ಟ ವಸ್ತು ಬಗ್ಗೆ ಎಂದಿಗೂ ನೆನಪಿಡುವುದಿಲ್ಲ, ಎಲ್ಲಿಯೂ ಮಾತಾಡಲ್ಲ: ಪಂಚಮಸಾಲಿ ಸ್ವಾಮೀಜಿ ಹೇಳಿಕೆಗೆ ಮುರುಗೇಶ್ ನಿರಾಣಿ ಪ್ರತಿಕ್ರಿಯೆ

ಇದನ್ನೂ ಓದಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಮಾರ್ಚ್​ ಒಳಗಾಗಿ ಸರ್ಕಾರ ಪ್ರಕಟಿಸಬೇಕು: ಜಯಮೃತ್ಯುಂಜಯ ಸ್ವಾಮೀಜಿ

ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ