AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾ ಕಿಡ್ನಾಪ್: 4.25 ಲಕ್ಷ ಸುಲಿಗೆ ಮಾಡಿದ ಗ್ಯಾಂಗ್ ಪೊಲೀಸರ ವಶಕ್ಕೆ!

ಮನೆಯಲ್ಲಿ ಶಾಂತಿ ಪೂಜೆ ಮಾಡಿಸುವ ನೆಪದಲ್ಲಿ ಯಲಹಂಕದ ಬಾಬಾ ತಾರಿಕ್ ಹುಸೇನ್ ಎಂಬುವರನ್ನು ಅಪಹರಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರೋಬ್ಬರಿ 4.25 ಲಕ್ಷ ರೂ. ಸುಲಿಗೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದ್ದು, ಬ್ಯಾಂಕ್‌ಗೆ ಕರೆದೊಯ್ದು ಹಣ ಡ್ರಾ ಮಾಡಿಸಿಕೊಂಡಿದ್ದ ಖತರ್ನಾಕ್ ಗ್ಯಾಂಗ್ ಈಗ ಜೈಲು ಪಾಲಾಗಿದೆ.

ಮನೆಯಲ್ಲಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾ ಕಿಡ್ನಾಪ್: 4.25 ಲಕ್ಷ ಸುಲಿಗೆ ಮಾಡಿದ ಗ್ಯಾಂಗ್ ಪೊಲೀಸರ ವಶಕ್ಕೆ!
ಆರೋಪಿಗಳಾದ ಆರಿಫ್, ಆದಿಲ್, ಖಾದಿರ್, ಇಮ್ರಾನ್
ರಾಚಪ್ಪಾಜಿ ನಾಯ್ಕ್
| Edited By: |

Updated on: Jul 10, 2026 | 10:37 AM

Share

ಮುಖ್ಯಾಂಶಗಳು

  • ಪೂಜೆ ಮಾಡಿಸುವ ನೆಪದಲ್ಲಿ ಯಲಹಂಕದ ಬಾಬಾನನ್ನು ಅಪಹರಿಸಿದ ಖತರ್ನಾಕ್ ಗ್ಯಾಂಗ್
  • ತುಮಕೂರು ಹೊರವಲಯಕ್ಕೆ ಕರೆದೊಯ್ದು ಲಾಂಗ್ ಮತ್ತು ಮಚ್ಚಿನಿಂದ ಹಲ್ಲೆ
  • ಖಾಸಗಿ ಬ್ಯಾಂಕ್‌ನಿಂದ ಬಲವಂತವಾಗಿ 4.25 ಲಕ್ಷ ರೂಪಾಯಿ ಡ್ರಾ

ಬೆಂಗಳೂರು, ಜುಲೈ 10: ಮನೆಯಲ್ಲಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾ​ ಒಬ್ಬರನ್ನು ಅಪಹರಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರೋಬ್ಬರಿ 4.25 ಲಕ್ಷ ರೂಪಾಯಿ ದೋಚಿದ್ದ ನಾಲ್ವರು ಕಿಡ್ನಾಪರ್ಸ್‌ಗಳನ್ನು (Kidnap) ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.ತುಮಕೂರು ಮೂಲದ ಆರಿಫ್ ಮತ್ತು ಆದಿಲ್, ಚಿಕ್ಕಬಾಣಾವರದ ಇಮ್ರಾನ್ ಹಾಗೂ ಆರ್.ಟಿ. ನಗರದ ಕಾದೀರ್ ಬಂಧಿತ ಆರೋಪಿಗಳಾಗಿದ್ದಾರೆ. ನಗರದ ಯಲಹಂಕದಲ್ಲಿ ವಾಸವಾಗಿರುವ ಬಾಬಾ​ ಮೊಹಮ್ಮದ್ ತಾರಿಕ್ ಹುಸೇನ್ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.

ಪೂಜೆಯ ನೆಪದಲ್ಲಿ ಸಂಚು ಕಿಡ್ನಾಪ್!

ಕೆಲ ದಿನಗಳ ಹಿಂದೆ ಬಾಬಾ​ ತಾರಿಕ್ ಹುಸೇನ್ ಅವರನ್ನು ಸಂಪರ್ಕಿಸಿದ್ದ ಆರೋಪಿ ಆರಿಫ್, ನಮ್ಮ ಮನೆಗೆ ಬಂದು ಶಾಂತತೆಗಾಗಿ ಪೂಜೆ ಮಾಡಿಕೊಡಬೇಕು ಎಂದು ಕೋರಿ ಮುಂಗಡವಾಗಿ 10 ಸಾವಿರ ರೂಪಾಯಿಗಳನ್ನು ಆನ್‌ಲೈನ್ ಮೂಲಕ ಪಾವತಿಸಿದ್ದ. ಆದರೆ ಬಾಬಾ​ ತಾರಿಕ್ ಕಾರಣಾಂತರಗಳಿಂದ ಮೂರು ದಿನಗಳ ಕಾಲ ಭೇಟಿ ನೀಡಿರಲಿಲ್ಲ. ಜೂನ್ 29 ರಂದು ಆರೋಪಿ ಆರಿಫ್, ಬಾಬಾ​ನನ್ನು ಕರೆತರಲು ತಾನೇ ಕಾರು ಕಳುಹಿಸಿಕೊಡುವುದಾಗಿ ಹೇಳಿದ್ದ. ಅದರಂತೆ ಕಾರ್ ಬಂದಾಗ ತಾರಿಕ್ ಹೋಗಲು ಸಿದ್ಧರಿರಲಿಲ್ಲ. ಈ ವೇಳೆ ಆರೋಪಿಗಳು ಅವರನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಪರಾರಿಯಾಗಿದ್ದರು.

ಹಳೇ ದ್ವೇಷದ ಹಿನ್ನೆಲೆ ಲಾಂಗ್ ಮಚ್ಚಿನಿಂದ ಹಲ್ಲೆ

ಕಿಡ್ನ್ಯಾಪ್ ಆದ ಬಾಬಾನನ್ನು ತುಮಕೂರು ಹೊರವಲಯಕ್ಕೆ ಕರೆದೊಯ್ದಾಗ ಅಲ್ಲಿ ಮೂವರು ವ್ಯಕ್ತಿಗಳು ಕಾಯುತ್ತಿದ್ದರು. ಈ ವೇಳೆ ಗ್ಯಾಂಗ್‌ನಲ್ಲಿದ್ದ ಆದಿಲ್ ಎಂಬಾತ, “ಹಿಂದೆ ನೀನು ಶಾಂತಿ ಪೂಜೆ ಮಾಡುವುದಾಗಿ ಹಣ ಪಡೆದುಕೊಂಡಿದ್ದೆ, ಆದರೆ ಅದರಿಂದ ನನಗೆ ಯಾವುದೇ ಉಪಯೋಗವಾಗಿಲ್ಲ” ಎಂದು ಹಳೇ ಕದನ ತೆಗೆದು ಜಗಳವಾಡಿದ್ದಾನೆ. ಹಣ ನೀಡುವಂತೆ ಬೆದರಿಸಿದಾಗ ಬಾಬಾ​ ನಿರಾಕರಿಸಿದ್ದಾರೆ. ಇದರಿಂದ ಕೆರಳಿದ ನಾಲ್ವರು ಆರೋಪಿಗಳು ಲಾಂಗ್ ಮತ್ತು ಮಚ್ಚುಗಳನ್ನು ಬಳಸಿ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಬ್ಯಾಂಕ್‌ಗೆ ಕರೆದೊಯ್ದು ಲಕ್ಷಾಂತರ ಹಣ ಡ್ರಾ!

ಬಳಿಕ ಬಾಬಾನ ಮೊಬೈಲ್ ಪಾಸ್‌ವರ್ಡ್ ಹಾಗೂ ಯುಪಿಐ (UPI) ಪಿನ್ ಪಡೆದುಕೊಂಡ ಆರೋಪಿಗಳು, ಬ್ಯಾಂಕ್ ಖಾತೆಯಲ್ಲಿದ್ದ 5 ಲಕ್ಷಕ್ಕೂ ಅಧಿಕ ಹಣವನ್ನು ಗಮನಿಸಿದ್ದಾರೆ. ತಕ್ಷಣವೇ ಆರಿಫ್ 13 ಸಾವಿರ ರೂಪಾಯಿಗಳನ್ನು ವರ್ಗಾಯಿಸಿಕೊಂಡಿದ್ದಾನೆ. ಅಂದು ರಾತ್ರಿ ಅಜ್ಞಾತ ಸ್ಥಳದಲ್ಲಿ ಬಾಬಾನನ್ನು ಕೂಡಿಹಾಕಿದ್ದ ಗ್ಯಾಂಗ್, ಮರುದಿನ ದಾಖಲೆಗಳನ್ನು ವಾಟ್ಸಾಪ್ ಮಾಡಿಸಿಕೊಂಡು ಖಾಸಗಿ ಬ್ಯಾಂಕ್‌ಗೆ ಬಲವಂತವಾಗಿ ಕರೆದೊಯ್ದಿದ್ದಾರೆ.

ಇದನ್ನೂ ಓದಿ ಕೇವಲ ಒಂದು 500 ರೂ. ನಕಲಿ ನೋಟಿನ ಬೆನ್ನುಬಿದ್ದ ಪೊಲೀಸರಿಗೆ ಬಯಲಾಯ್ತು ರಾಜ್ಯವ್ಯಾಪಿ ಖೋಟಾ ನೋಟಿನ ಬೃಹತ್ ಜಾಲ!

ಅಲ್ಲಿ ಬಾಬಾ​ನಿಂದಲೇ ವಿಥ್‌ಡ್ರಾ ಫಾರ್ಮ್‌ಗೆ ಸಹಿ ಹಾಕಿಸಿ, ಸಂಜೆ ವೇಳೆ 4.25 ಲಕ್ಷ ರೂಪಾಯಿ ಹಣವನ್ನು ಡ್ರಾ ಮಾಡಿಕೊಂಡಿದ್ದಾರೆ. ಹಣ ಕೈ ಸೇರಿದ ನಂತರ ಬಾಬಾನನ್ನು ಕಾರಿನಲ್ಲಿ ದಾಬಸ್‌ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರದ ಹೊರವಲಯಕ್ಕೆ ಕರೆತಂದು, ಘಟನೆ ಕುರಿತು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಮೊಬೈಲ್ ನೀಡಿ ಪರಾರಿಯಾಗಿದ್ದರು ಎಂದು ಬಾಬಾ ತಾರಿಕ್ ಆರೋಪಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ಕೂ ಜನರನ್ನು ಜೈಲಿಗಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ