ಅಲ್ಪಸಂಖ್ಯಾತ ಶಾಸಕರು, ಸಂಸದರು, ಪರಿಷತ್ ಸದಸ್ಯರ ಸಭೆ ನಡೆಸಿ, ಇಬ್ರಾಹಿಂಗೆ ಸೂಕ್ತ ಸ್ಥಾನ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಒತ್ತಡ ಹೇರಲು ನಿರ್ಧರಿಸಲಾಯಿತು. ಇದೇ ವೇಳೆ ಕಾಂಗ್ರೆಸ್ ಪಕ್ಷವನ್ನು ಬಿಡಬಾರದು, ಪಕ್ಷದಲ್ಲಿಯೇ ಉಳಿಯಬೇಕೆಂದು ಸಿ.ಎಂ.ಇಬ್ರಾಹಿಂ ಅವರಿಗೆ ಸಲಹೆ ನೀಡಲಾಯಿತು. ಮೌಲಾನ ಮುಫ್ತಿ ಇಫ್ತಿಖಾರ್ ಅಹ್ಮದ್ ಖಾಸ್ಮಿ, ಮೌಲಾನ ಏಜಾಝ್ ಅಹ್ಮದ್ ನದ್ವಿ, ಮೌಲಾನ ಸೈಯದ್ ಶಬ್ಬೀರ್ ಅಹ್ಮದ್ ನದ್ವಿ, ಮೌಲಾನ ಸೈಯದ್ ತನ್ವೀರ್ ಪೀರಾ ಹಾಶ್ಮಿ ಇತರರು ಪಾಲ್ಗೊಂಡಿದ್ದರು.
ಕಾಂಗ್ರೆಸ್‌ಗೂ ನಮಗೂ ಇನ್ನು ಮುಗಿದ ಅಧ್ಯಾಯ: ಇಬ್ರಾಹಿಂ
ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಬಿಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಎಂಎಲ್ಸಿ ಸಿಎಂ ಇಬ್ರಾಹಿಂ ರಾಜೀನಾಮೆ ನೀಡಲು ನಿರ್ಧರಿಸಿದ್ದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯಗಾಗಿ ದೇವೇಗೌಡರನ್ನು ಬಿಟ್ಟಿದ್ದೆವು. ಜೈಲಿನಲ್ಲಿದ್ದು ಕಟ್ಟಿದ್ದ ಪಕ್ಷ ಜೆಡಿಎಸ್ ಬಿಟ್ಟಿದ್ದೆವು. ಒಂದೇ ಬಾರಿಗೆ ಎಲ್ಲ ವಿಚಾರಗಳನ್ನು ಹೇಳುವುದಿಲ್ಲ. ಕಂತುಕಂತಾಗಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ. ಶೀಘ್ರದಲ್ಲೇ ನನ್ನ ನಿರ್ಧಾರವನ್ನು ತಿಳಿಸುತ್ತೇನೆ ಎಂದರು.
ಸಿದ್ದರಾಮಯ್ಯಗೆ ಹೊಸ ರಾಜಕೀಯ ಜೀವನ ಕೊಟ್ಟೆವು. ಅದಕ್ಕೀಗ ಸಿದ್ದರಾಮಯ್ಯ ಹೊಸ ಉಡುಗೊರೆ ನೀಡಿದ್ದಾರೆ. ಅವರು ಕೊಟ್ಟ ಉಡುಗೊರೆಯನ್ನು ಖುಷಿಯಿಂದ ಸ್ವೀಕರಿಸುವೆ. ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲ್ತಿದ್ರು. ಇದು ತಿಳಿದು ಬಾದಾಮಿಯಲ್ಲಿ ನಾಮಪತ್ರ ಹಾಕಿಸಿದ್ದೆ. ಬಾದಾಮಿಯಲ್ಲಿ ಅವರು ಗೆದ್ದು ಶಾಸಕರು ಕೂಡ ಆದರು. ಅವರಿಗೆ ನಾನು ಹೊಸ ರಾಜಕೀಯ ಜೀವನ ಕೊಟ್ಟೆ. ಆದರೆ ಅವರು ನಮಗೆ ಇಂದು ಹೊಸ ಗಿಫ್ಟ್ ಕೊಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದರು.
ಪರಿಷತ್ ಸ್ಥಾನಕ್ಕೆ ಶೀಘ್ರದಲ್ಲೇ ರಾಜೀನಾಮೆ ನೀಡುತ್ತೇನೆ ಎಂದು ಘೋಷಣೆ ಮಾಡಿದ ಸಿಎಂ ಇಬ್ರಾಹಿಂ, ದೇವೇಗೌಡರನ್ನು ಕೇಳಿ ಮುಂದೆ ತೀರ್ಮಾನ ಮಾಡುತ್ತೇನೆ. ನನಗೆ ಸ್ಥಾನ ತಪ್ಪಿಸಿದ ಬಗ್ಗೆ ಸಿದ್ದರಾಮಯ್ಯ ಉತ್ತರಿಸಬೇಕು. ಡಿಕೆ ಶಿವಕುಮಾರ್‌ಗೂ ನಮಗೂ ಹೊಂದಾಣಿಕೆಯಾಗಲ್ಲ. ಸಿದ್ದರಾಮಯ್ಯಗೂ ನನಗೆ ಚೆನ್ನಾಗಿತ್ತು. ದೆಹಲಿಯಿಂದ ನನಗೆ ಹಲವು ಕರೆಗಳು ಬಂದಿವೆ. ಎಲ್ಲ ಮಾಹಿತಿ ನನ್ನ ಬಳಿ ಇಟ್ಟುಕೊಂಡಿದ್ದೇನೆ. ಚುನಾವಣಾ ಪ್ರಚಾರಕ್ಕೆ ಉತ್ತರ ಪ್ರದೇಶಕ್ಕೆ ಬರುವಂತೆ ಕರೆಯುತ್ತಿದ್ದಾರೆ. ಆದರೆ ನಾವೇನು ಅಷ್ಟು ದೊಡ್ಡ ನಾಯಕರೇನು ಅಲ್ಲ. ನಮ್ಮಿಂದ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಾದರೆ ನಿರ್ಧರಿಸುವೆ. ರಾಜಕೀಯ ವಿದ್ಯಮಾನ ನೋಡಿಕೊಂಡು ತೀರ್ಮಾನಿಸುವೆ. ಎಐಸಿಸಿ ನನಗೆ ಸಂಕ್ರಾಂತಿಗೆ ಶುಭಾಶಯವನ್ನು ನೀಡಿದೆ. ಎಐಸಿಸಿ ಗಿಫ್ಟ್ ನೋಡಿ ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಇಬ್ರಾಹಿಂ ಬಗ್ಗೆ ಪ್ರಶ್ನೆ ಕೇಳುತ್ತಿದ್ದಂತೆಯೇ ಬೆಂಕಿ ಮೇಲೆ ಕುಳಿತ ಹಾಗೆ ಆಡಿದರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ!
ಇದನ್ನೂ ಓದಿ: ಸಿದ್ದರಾಮಯ್ಯಗೆ ರಾಜಕೀಯ ಮರುಹುಟ್ಟು ನೀಡಿದ್ದಕ್ಕೆ ಅವರಿಂದ ಒಳ್ಳೆಯ ಉಡುಗೊರೆ ಸಿಕ್ಕಿದೆ! ಸಿ ಎಮ್ ಇಬ್ರಾಹಿಂ