AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭಾ ಟಿಕೆಟ್​​ ಕೈತಪ್ಪಿದ ಬಗ್ಗೆ ಮೌನ ಮುರಿದ ದೇವೇಗೌಡರು: ಯಾರ ಹಂಗಿಲ್ಲದೆ ಮಾತಾಡ್ತೇನೆ ಎಂದ ಹೆಚ್​​ಡಿಡಿ

ರಾಜ್ಯಸಭಾ ಟಿಕೆಟ್ ಕೈತಪ್ಪಿದ ಬಳಿಕ ಮೌನ ಮುರಿದ ಹೆಚ್.ಡಿ. ದೇವೇಗೌಡರು, ಪಿಎಂ ಮೋದಿ ಮತ್ತು ತಮ್ಮ ನಡುವಿನ ಸಂಬಂಧ ಒಂದು ಸೀಟಿಗೆ ಸೀಮಿತವಲ್ಲ ಎಂದಿದ್ದಾರೆ. ಯಾರ ಹಂಗಿಲ್ಲದೆ ದೇಶದ ವಿಚಾರವಾಗಿ ಮಾತನಾಡುತ್ತೇನೆ. ಜೆಡಿಎಸ್​​ ಪಕ್ಷದ ಬೆಳವಣಿಗೆಗೂ ಶಕ್ತಿ ಮೀರಿ ಕೆಲಸ ಮಾಡ್ತೇನೆ. ರಾಜ್ಯ ಸಭಾ ಸದಸ್ಯ ಸ್ಥಾನ ಇಲ್ಲ ಅಂದರೂ ಮೋದಿಯವರ ಜೊತೆ ನನ್ನ ಪತ್ರ ವ್ಯವಹಾರ ಇರುತ್ತದೆ ಎಂದವರು ತಿಳಿಸಿದ್ದಾರೆ.

ರಾಜ್ಯಸಭಾ ಟಿಕೆಟ್​​ ಕೈತಪ್ಪಿದ ಬಗ್ಗೆ ಮೌನ ಮುರಿದ ದೇವೇಗೌಡರು: ಯಾರ ಹಂಗಿಲ್ಲದೆ ಮಾತಾಡ್ತೇನೆ ಎಂದ ಹೆಚ್​​ಡಿಡಿ
ಹೆಚ್​​.ಡಿ. ದೇವೇಗೌಡ ಮತ್ತು ನರೇಂದ್ರ ಮೋದಿImage Credit source: HD Deve Gowda X Account and PTI
ಸುನಿಲ್​ ಎಮ್​ ಹೆಚ್​
| Edited By: |

Updated on:Jun 10, 2026 | 1:54 PM

Share

ಬೆಂಗಳೂರು, ಜೂನ್​​ 10: ಮಾಜಿ ಪ್ರಧಾನಿ ದೇವೇಗೌಡರಿಗೆ ಎನ್​​ಡಿಎಯಿಂದ ರಾಜ್ಯಸಭಾ ಟಿಕೆಟ್​​ ನೀಡದಿರೋದು ಭಾರಿ ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ. ಈ ನಡುವೆ ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಹೆಚ್​​ಡಿಡಿ, ವಿರೋಧಿಗಳಿಗೆ ಖಡಕ್​​ ಸಂದೇಶ ರವಾನಿಸಿದ್ದಾರೆ. ನಾನು ಸುಮ್ಮನೆ ಕೂರಲ್ಲ, ನನ್ನ ಶಕ್ತಿ ಮೀರಿ‌ ಕೆಲಸ‌ ಮಾಡುತ್ತೇನೆ. ರಾಜ್ಯ ಮತ್ತು ದೇಶದ ವಿಚಾರವನ್ನ ಯಾರ ಹಂಗಿಲ್ಲದೆ ಮಾತಾಡ್ತೇನೆ ಎಂದವರು ತಿಳಿಸಿದ್ದಾರೆ. ನನ್ನ ಹಾಗೂ ಮೋದಿ ಸಂಬಂಧ ರಾಜ್ಯಸಭಾ ಸದಸ್ಯ ಸ್ಥಾನದಿಂದ ಮುಗೀತು ಎಂದು ಭಾವಿಸಬೇಡಿ ಎಂದೂ ಅವರು ತಿವಿದಿದ್ದಾರೆ.

ಮುಖ್ಯಾಂಶಗಳು

  • ರಾಜ್ಯಸಭಾ ಟಿಕೆಟ್​​ ಕೈತಪ್ಪಿದ ಬಗ್ಗೆ ದೇವೇಗೌಡರ ಮಾತು
  • ‘ನನ್ನ-ಮೋದಿ ಸಂಬಂಧ ರಾಜ್ಯಸಭಾ ಸ್ಥಾನಕ್ಕೆ ಸೀಮಿತವಲ್ಲ’
  • ವಿರೋಧಿಗಳಿಗೆ ಕೌಂಟರ್​​ ಮೇಲೆ ಕೌಂಟರ್​​ ಕೊಟ್ಟ ಹೆಚ್​​ಡಿಡಿ

‘ನಮ್ಮದು ವೈಯಕ್ತಿಕ ಸಂಬಂಧ’

ನಾನು ರಾಜಕೀಯಕ್ಕೆ ಬಂದು 7 ದಶಕಗಳು ಕಳೆದಿವೆ. ಜನ ಪರ ಸೇವೆ ಸಲ್ಲಿಸಿದ್ದೇನೆ. ರಾಜ್ಯಸಭಾ ಸದಸ್ಯ ಆಗಬೇಕು ಎಂಬ ವ್ಯಾಮೋಹ ಇದ್ದಿದ್ರೆ ಕೇಂದ್ರದ ಮುಖಂಡರನ್ನ ಭೇಟಿ ಮಾಡ್ತಿದ್ದೆ. ಈ ನಡುವೆ ಕುಮಾರಸ್ವಾಮಿ ನಾವು ರಾಜ್ಯಸಭೆಗೆ ಅಪೇಕ್ಷೆ ಮಾಡಲ್ಲ ಎಂದಿದ್ದು, ಬಿಜೆಪಿಗೆ ಒಂದು ಸೀಟ್ ಸಿಗುತ್ತೆ. ನಾವ್ಯಾಕೆ 18 ಜನ ಇದ್ದು ಸೀಟ್ ಕೇಳಬೇಕು ಎಂದಿದ್ದರು. ಮೋದಿ ಮತ್ತು ನನ್ನ ನಡುವಿನ ಸಂಬಂಧ ಒಂದು ರಾಜ್ಯಸಭಾ ಸೀಟಿಂದ ಅಲ್ಲ. ಕಳೆದ 10 ವರ್ಷಗಳಿಂದ ನಮ್ಮದು ವೈಯಕ್ತಿಕ ಸಂಬಂಧ. ಮೋದಿಯವರ ಬಗ್ಗೆ, ಆಡಳಿತದ ಬಗ್ಗೆ ನನ್ನ ಭಾವನೆಯನ್ನ ನಿರ್ಭಯವಾಗಿ ಹೇಳಿದ್ದೇನೆ. ಮೋದಿ ನಾಯಕತ್ವ ಸಮರ್ಥನೆ ಮಾಡಿದ್ದೇನೆ. ನನ್ನ ಮೋದಿಯವರ ಸಂಬಂಧ ಹೀಗೆ ಮುಂದುವರೆಯುತ್ತದೆ. ರಾಜ್ಯ ಸಭಾ ಸದಸ್ಯ ಸ್ಥಾನ ಇಲ್ಲ ಅಂದರೂ ಮೋದಿಯವರ ಜೊತೆ ನನ್ನ ಪತ್ರ ವ್ಯವಹಾರ ಇರುತ್ತದೆ ಎಂದವರು ತಿಳಿಸಿದ್ದಾರೆ.

ಇದನ್ನೂ ಓದಿ: ನೆಹರು ದಾಖಲೆ ಮುರಿದ ಪ್ರಧಾನಿ ಮೋದಿ; ಜಗತ್ತಿನಾದ್ಯಂತ ಹರಿದುಬಂದ ಅಭಿನಂದನೆಗಳ ಮಹಾಪೂರ, ವಿಶ್ವ ನಾಯಕರು ಹೇಳಿದ್ದೇನು?

ಜೆಡಿಎಸ್​​ ಪಕ್ಷದ ಬೆಳವಣಿಗೆಗೂ ಶಕ್ತಿ ಮೀರಿ ಕೆಲಸ ಮಾಡ್ತೇನೆ. ಎನ್​ಡಿಎಯಲ್ಲಿ ಇದ್ದೇವೆ, ಆದ್ರೂ ಪಕ್ಷ ಸಂಘಟನೆ ಮಾಡಬೇಕು. ಜಿಬಿಎ ಚುನಾವಣೆಗೆ ಕಮಿಟಿ ಮಾಡಲಾಗಿದೆ. ಜಿಲ್ಲಾ ಪಂಚಾಯತ್​​ ಮತ್ತು ತಾಲೂಕು ಪಂಚಾಯತ್​​ ಸೇರಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧತೆ ಮಾಡ್ತೇವೆ. ರಾಜ್ಯಸಭೆ ಆಯ್ಕೆ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿ ವ್ಯಾಖ್ಯಾನ ಮಾಡ್ತಿದ್ದಾರೆ. ಸ್ನೇಹಿತರು ದೇವೇಗೌಡರಿಗೆ ಟಿಕೆಟ್ ಕೊಡಬೇಕು ಅಂದಿದ್ದರು. ಆದರೆ ನಾನು ಅವರಿಗೆ ಸಮಾಧಾನ ಮಾಡಿದ್ದೇನೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:52 pm, Wed, 10 June 26

Follow Us
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!