ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಂದ ಮಾಧ್ಯಮ ಹೇಳಿಕೆ ಬಿಡುಗಡೆ -ನಾನು ಆರೋಗ್ಯವಾಗಿದ್ದೇನೆ, ಶೀಘ್ರವೇ ಪಕ್ಷದ ಕಚೇರಿಗೆ ಭೇಟಿ ನೀಡುವೆ

HD Deve Gowda Health: ಕೆಲ ದಿನಗಳ ನಂತರ ನಾನೇ ಖುದ್ದು ಪಕ್ಷದ ಕಚೇರಿಗೆ ಭೇಟಿ ನೀಡುವುದರ ಜತೆಗೆ, ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗಲಿದ್ದೇನೆ. ಯಾವುದೇ ಕಾರಣಕ್ಕೂ ಮುಖಂಡರು, ಕಾರ್ಯಕರ್ತರು ಅನ್ಯತಾ ಭಾವಿಸಬಾರದು ಎಂದು ಕೋರುತ್ತೇನೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಂದ ಮಾಧ್ಯಮ ಹೇಳಿಕೆ ಬಿಡುಗಡೆ -ನಾನು ಆರೋಗ್ಯವಾಗಿದ್ದೇನೆ, ಶೀಘ್ರವೇ ಪಕ್ಷದ ಕಚೇರಿಗೆ ಭೇಟಿ ನೀಡುವೆ
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಂದ ಮಾಧ್ಯಮ ಹೇಳಿಕೆ ಬಿಡುಗಡೆ -ನಾನು ಆರೋಗ್ಯವಾಗಿದ್ದೇನೆ, ಶೀಘ್ರವೇ ಪಕ್ಷದ ಕಚೇರಿಗೆ ಭೇಟಿ ನೀಡುವೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Sep 22, 2022 | 6:46 PM

ಬೆಂಗಳೂರು: ನನ್ನ ಆರೋಗ್ಯ ಉತ್ತಮವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರು (JDS Supremo, Former PM HD Deve Gowda) ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಮಂತ್ರಿ ” ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ಮಾಡಿದ್ದರು. ಆದಕಾರಣ ಕೆಲ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯಬೇಕಾಯಿತು. ಇನ್ನೂ ಕೆಲ ದಿನ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ಮಾಡಿದ್ದಾರೆ ” ಎಂದು ಅವರು ಹೇಳಿದ್ದಾರೆ (Health).

ಮನೆಯಿಂದಲೇ ನನ್ನೆಲ್ಲಾ ರಾಜಕೀಯ, ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಣೆ ಮಾಡಲಿದ್ದೇನೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೆಲವು ದಿನಗಳ ಮಟ್ಟಿಗೆ ನನ್ನ ಭೇಟಿಗೆ ಬರುವುದು ಬೇಡ ಎಂದು ಮಾಜಿ ಪ್ರಧಾನಮಂತ್ರಿ ಮನವಿ ಮಾಡಿದ್ದಾರೆ.

ಕೆಲ ದಿನಗಳ ನಂತರ ನಾನೇ ಖುದ್ದು ಪಕ್ಷದ ಕಚೇರಿಗೆ ಭೇಟಿ ನೀಡುವುದರ ಜತೆಗೆ, ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗಲಿದ್ದೇನೆ. ಯಾವುದೇ ಕಾರಣಕ್ಕೂ ಮುಖಂಡರು, ಕಾರ್ಯಕರ್ತರು ಅನ್ಯತಾ ಭಾವಿಸಬಾರದು ಎಂದು ಕೋರುತ್ತೇನೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಲ್ಲದೆ, ನನ್ನ ನಿವಾಸಕ್ಕೆ ಭೇಟಿ ನೀಡಿ ನನ್ನ ಆರೋಗ್ಯ ವಿಚಾರಿಸಿದ ಪ್ರತಿಪಕ್ಷ ನಾಯಕರಾದ ಶ್ರೀ ಸಿದ್ದರಾಮಯ್ಯ, ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಯಡಿಯೂರಪ್ಪ, ಕಂದಾಯ ಸಚಿವ ಶ್ರೀ ಅಶೋಕ್ ಸೇರಿದಂತೆ ಇತರೆ ಎಲ್ಲಾ ಸಚಿವರು, ಮುಖಂಡರಿಗೆ ನಾನು ಆಭಾರಿಯಾಗಿದ್ದೇನೆ ಎಂದೂ ಅವರು ತಿಳಿಸಿದ್ದಾರೆ.

ಹಾಗೆಯೇ, ನನ್ನ ಆರೋಗ್ಯಕ್ಕಾಗಿ ನಾಡಿನ ದೇವಾಲಯಗಳಲ್ಲಿ ಪೂಜೆ, ಹರಕೆ ಮಾಡಿಕೊಂಡು ಅನ್ನದಾನ ಇತ್ಯಾದಿಗಳನ್ನು ಮಾಡಿದ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಪ್ರೀತಿ ವಿಶ್ವಾಸಕ್ಕೆ ನನ್ನ ಹೃದಯ ತುಂಬಿ ಬಂದಿದೆ. ಅವರೆಲ್ಲರಿಗೂ ನನ್ನ ಶುಭ ಹಾರೈಕೆಗಳು ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಹೇಳಿದ್ದಾರೆ.

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM