AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳೆಯರೊಂದಿಗೆ ಸೆಕ್ಸ್ ಮಾಡುವಂತೆ ಒತ್ತಾಯ: ಗಂಡನ ವಿಚಿತ್ರ ಬೇಡಿಕೆಯಿಂದ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

ಸ್ನೇಹಿತರ (Friends) ಜೊತೆ ಖಾಸಗಿ ಕ್ಷಣ ಕಳೆಯಲು ಪತಿಯೇ ತನ್ನ ಪತ್ನಿಗೆ(Wife)  ಒತ್ತಾಯಿಸಿರುವ ವಿಚಿತ್ರ ಘಟನೆ ಬೆಂಗಳೂರಿನಲ್ಲಿ(Bengaluru) ಬೆಳಕಿಗೆ ಬಂದಿದೆ. ಹೌದು...ಅಚ್ಚರಿ ಅನ್ನಿಸಿದರೂ ಸತ್ಯ

ಗೆಳೆಯರೊಂದಿಗೆ ಸೆಕ್ಸ್ ಮಾಡುವಂತೆ ಒತ್ತಾಯ: ಗಂಡನ ವಿಚಿತ್ರ ಬೇಡಿಕೆಯಿಂದ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ
Jagadisha B
| Edited By: |

Updated on: Oct 16, 2023 | 9:46 AM

Share

ಬೆಂಗಳೂರು, (ಅಕ್ಟೋಬರ್ 16): ಸ್ನೇಹಿತರ (Friends) ಜೊತೆ ಖಾಸಗಿ ಕ್ಷಣ ಕಳೆಯಲು ಪತಿಯೇ (Husband) ತನ್ನ ಪತ್ನಿಗೆ(Wife)  ಒತ್ತಾಯಿಸಿರುವ ವಿಚಿತ್ರ ಘಟನೆ ಬೆಂಗಳೂರಿನಲ್ಲಿ(Bengaluru) ಬೆಳಕಿಗೆ ಬಂದಿದೆ. ಹೌದು…ಅಚ್ಚರಿ ಅನ್ನಿಸಿದರೂ ಸತ್ಯ. ತನ್ನ ಗೆಳೆಯರ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುವಂತೆ ಪತಿರಾಯನೊಬ್ಬ, ಕಟ್ಟಿಕೊಂಡ ಹೆಂಡತಿಗೆ ಒತ್ತಾಯಿಸಿದ್ದಾನೆ. ಗಂಡನ ಈ ವಿಚಿತ್ರ ಬೇಡಿಕೆಯಿಂದ ಶಾಕ್​ ಆದ ಪತ್ನಿ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ತನ್ನ ಮೂರು ಜನ ಸ್ನೇಹಿತರ ಜೊತೆ ಲೈಂಗಿಕ ಸಂಪರ್ಕ ಬೆಳೆಸುವಂತೆ ಪತಿ ಒತ್ತಾಯಯಿಸಿದ್ದಾನೆ ಎಂದು ಪತ್ನಿ (ಮಂಗಳೂರು ಮೂಲದ ಮಹಿಳೆ) ಆರೋಪಿಸಿದ್ದಾಳೆ. ಅಲ್ಲದೇ ಈ ಹಿಂದೆ ಗಂಡನ ವಾಟ್ಸಪ್ ಚೆಕ್ ಮಾಡಿದಾಗ ಅನೇಕ ಅಶ್ಲೀಲ ಮೆಸೇಜ್ ಹಾಗೂ ಲೈಂಗಿಕ ಕಾರ್ಯಕರ್ತೆಯರ ಬೆಲೆ ಬಗ್ಗೆ ಚಾಟ್ ಗಳಿದ್ದವು. ಇದನ್ನ ಪ್ರಶ್ನಿಸಿದಾಗ ಬೆದರಿಕೆ ಹಾಕಿದ್ದ ಎಂದು ಮಹಿಳೆ ಆರೋಪಿಸಿದ್ದಾಳೆ. ಸದ್ಯ ಈ ಬಗ್ಗೆ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಮಚ್ಚಿನಿಂದ ಮಹಿಳೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಆರೋಪಿಗಳು ಪರಾರಿ

ಹಲವು ವರ್ಷಗಳ ಹಿಂದೆಯೇ ವಿವಾಹವಾಗಿದ್ದ ಈ ದಂಪತಿಗೆ 11 ವರ್ಷದ ಪುತ್ರನಿದ್ದಾನೆ. ಈ ನಡುವೆ ಈ ರೀತಿ ಬೇಡಿಕೆ ಇಟ್ಟಿದ್ದಾನೆ. ಇದಕ್ಕೆ ನಿರಾಕರಿಸಿದ್ದ ಹಿನ್ನಲೆಯಲ್ಲಿ ಬೆದರಿಕೆ ಹಾಕಿದ್ದಲ್ಲದೇ ಮಾನಸಿಕವಾಗಿ ದೈಹಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಮಹಿಳೆ ಕೊಟ್ಟ ದೂರಿನಲ್ಲೇನಿದೆ?

10-5-2007ರಲ್ಲಿ ಮಂಗಳೂರು ಮೂಲದ ವ್ಯಕ್ತಿಯೊಂದಿಗೆ ಮದುವೆಯಾಗಿದ್ದು, ವಿಕ್ರಮ್ ಹಾಗೂ ತಾನ್ಯ ಎನ್ನುವ ಎರಡು ಮಕ್ಕಳು ಸಹ ಇವೆ. ಮಂಗಳೂರಿನಲ್ಲಿ ವಾಸವಿದ್ದು, ಗಂಡ ಮನೆಯಲ್ಲಿ ಚಿಕ್ಕಪುಟ್ಟ ವಿಚಾರಕ್ಕೆ ಗಲಾಟೆ ಮಾಡುತ್ತಿದ್ದರು. ನನಗೆ ಸರಿಯಾದ ಸಮಯ ಕೊಡದೇ ಕಿರಿಕಿರಿ ಮಾಡುತ್ತಿದ್ದರು. ನಾನು ಕೆಲಸದ ಒತ್ತಡದಲ್ಲಿ ಇರುತ್ತಾರೆಂದು ಹೊಂದಿಕೊಂಡು ಹೋಗುತ್ತಿದ್ದೆ. ನಂತರ ನಾನು ನನ್ನ ಗಂಡ ಹಾಗೂ ಮಕ್ಕಳು ಮಂಗಳೂರಿನ ಡಿಸಿ ಬಂಗಲೆ ಹತ್ತಿರದ ಮನೆಯೊಂದಕ್ಕೆ ಶಿಫ್ಟ್ ಆಗಿದ್ದೆವು. ಆ ಸಂದರ್ಭದಲ್ಲಿ ನನ್ನ ಗಂಡ ತನ್ನ ಐ ಫೋನ್​ ಅನ್ನು ಮಕ್ಕಳಿಗೆ ಆಟವಾಡಲು ಕೊಟ್ಟಿದ್ದರು. ಇನ್ನು ನನ್ನ ಫೋನ್ ಹಾಳಾಗಿದ್ದರಿಂದ ಗಂಡನ ಇನ್ನೊಂದು ಫೋನ್ ಉಪಯೋಗಿಸುತ್ತಿದ್ದೆ. ಆ ವೇಳೆ ವಾಟ್ಸಪ್ ಚಾಟ್ ತೆಗೆದು ನೋಡಿದಾಗ ತನ್ನ ಸ್ನೇಹಿತರಾದ ಬಾಬು, ಅನಂತ ಕುಮಾರ್ ಹಾಗೂ ವಿರೇಂದ್ರ ಎಂಬುವರೊಂದಿಗೆ ನನ್ನ ಜೊತೆ ದೈಹಿಕ ಸಂಬಂಧ ಹೊಂದಿರುವ ಬಗ್ಗೆ ಹೇಳಿಕೊಂಡಿರುವುದು ಕಂಡುಬಂದಿದೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಅಲ್ಲದೇ ಬೇರೆ ಬೇರೆ ಲೈಂಗಿಕ ಸೆಕ್ಸ್​ ವರ್ಕರ್​ಗಳೊಂದಿಗೆ ಬೆಲೆ ಬಗ್ಗೆ ಮಾತನಾಡಿರುವ ಚಾಟಿಂಗ್ ಮಾಡಿರುವುದನ್ನು ಕಂಡು ನಾನು ಈ ಬಗ್ಗೆ ಗಂಡನನ್ನು ಕೇಳಿದ್ದೆ. ಆದ್ರೆ, ನನ್ನ ಗಂಟ ಗಲಾಟೆ ಮಾಡಿ ಅದು ನನ್ನ ಇಷ್ಟ. ಏನಾದರೂ ಮಾಡಿಕೊಳ್ಳುತ್ತೇನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ನಿನ್ನ ಸಾಯಿಸಿ ಬಿಡುತ್ತೇನೆ ಎಂದು ಬೆದರಿಕೆ ಹಾಕಿ ಹೊಡೆದಿದ್ದಾರೆ. ಹಾಗೇ ಇದನ್ನು ಪಬ್ಲಿಕ್ ಮಾಡಿದರೆ ನಿನಗೆ ನಿನ್ನ ಮಕ್ಕಳಿಗೆ ಯಾವುದೇ ನೀವನಾಂಶ ಕೊಡುವುದಿಲ್ಲ. ಆಗ ನೀನು ನಿನ್ನ ಮಕ್ಕಳು ಬೀದಿಗೆ ಬೀಳುತ್ತೀರಾ ಎಂದು ಹೆದರಿಸಿದ್ದಾರೆ.

ಆದರೂ ಸಹ ಈ ಬಗ್ಗೆ ನಮ್ಮ ತಂದೆ-ತಾಯಿ ಹೇಳಿದ್ದೆ. ಅವರು ಎಲ್ಲರನ್ನೂ ಸೇರಿಸಿ ಬುದ್ಧಿವಾದ ಹೇಳಿದ್ದರು. ಆದರೂ ಅವರು ಮೊದಲಿನಂತೆ ಮತ್ತೆ ಹಳೇ ಚಾಳಿ ಮುಂದುವರೆಸಿ ನನ್ನ ಸರಿಯಾಗಿ ನೋಡಿಕೊಳ್ಳದೇ ಕಡೆಗಣಿಸಿದ್ದು, ಆಗ ನಾನು ನನ್ನ ಮಕ್ಕಳನ್ನು ಕರೆದುಕೊಂಡು ಬಂದು ನಮ್ಮ ತಂದೆ-ತಾಯಿಯೊಂದಿಗೆ ವಾಸವಿದ್ದೆ. ಆ ಸಮಯದಲ್ಲಿ ಮತ್ತೆ ಹಿರಿಯರೆಲ್ಲ ಸೇರಿ ರಾಜಿ ಪಂಚಾಯಿತಿ ಮಾಡಿಸಿದ್ದರು. ಬಳಿಕ ಬೆಂಗಳೂರಿನ ಆರ್​ಎಂ ಜೆಡ್​ ಲ್ಯಾಟಿಟ್ಯೂಡ್​ನಲ್ಲಿ ಪ್ಲ್ಯಾಟ್​ ಖರಿದೀಸಿ ಅಲ್ಲಿಗೆ ಕರೆದುಕೊಂಡು ಹೋಗಿದ್ದ. ಆದರೂ ಸಹ ಗಂಡ ನನ್ನೊಂದಿಗೆ ಸರಿಯಾಗಿ ಸಂಸಾರ ಮಾಡದೇ ಆಗಾಗ ಮನೆಗೆ ಬಂದು ನೀನು ನನ್ನ ಇತರೆ ಸ್ನೇಹಿತರೊಂದಿಗೆ ಲೈಂಗಿಕ ಸಂಭೋಗ ಮಾಡುವಂತೆ ಹೇಳಿದ್ದ. ಇದಕ್ಕೆ ನಾನು ಒಪ್ಪದೇ ಇದ್ದಾಗ ನನ್ನೊಂದಿಗೆ ಗಲಾಟೆ ಮಾಡಿ ಮಾನಸಿಕ ದೈಹಿಕ ಕಿರುಕುಳ ನೀಡಿದ್ದಾರೆ. ಅಲ್ಲದೇ ನಿನ್ನ ಜೀವನಕ್ಕೆ ಯಾವುದೇ ಹಣಕಾಸಿನ ಸಹಾಯ ಮಾಡುವುದಿಲ್ಲ ಎಂದು ಹದರಿಸಿ ನನಗೆ ಜೀವ ಬೆದರಿಕೆ ಹಾಕಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ