ಮುಠಾಳ, ಅಯೋಗ್ಯ ಎಂದ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಕೇಸ್ ಹಾಕಿದ ಪ್ರತಾಪ್ ಸಿಂಹ

ಪ್ರತಾಪ್ ಸಿಂಹ ಒಬ್ಬ ದೊಡ್ಡ ಅಯೋಗ್ಯ ಎಂದು ಈ ಹಿಂದೆ ಶಾಸಕ ಪ್ರದೀಪದ ಈಶ್ವರ್ ಏಕವಚನದಲ್ಲಿ ಸಂಸದ ಪ್ರತಾಪ್ ಸಿಂಹರನ್ನು ನಿಂದಿಸಿದ್ದರು. ಹೀಗಾಗಿ ಪ್ರತಾಪ್ ಸಿಂಹ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಲ್ಲಿ ಖಾಸಗಿ ದೂರು ಸಲ್ಲಿಸಿದ್ದಾರೆ. ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸುವಂತೆ ದೂರು ನೀಡಿದ್ದಾರೆ.

ಮುಠಾಳ, ಅಯೋಗ್ಯ ಎಂದ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಕೇಸ್ ಹಾಕಿದ ಪ್ರತಾಪ್ ಸಿಂಹ
ಪ್ರದೀಪ್ ಈಶ್ವರ್, ಪ್ರತಾಪ್ ಸಿಂಹ
Follow us
| Updated By: ಆಯೇಷಾ ಬಾನು

Updated on: Feb 27, 2024 | 9:28 AM

ಬೆಂಗಳೂರು, ಫೆ.27: ಕಳೆದ ತಿಂಗಳು ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ನಡೆದ ಗ್ರಾ.ಪಂ. ಕಟ್ಟಡ ಶಂಕುಸ್ಥಾಪನಾ ಕಾರ್ಯಕ್ರಮದ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಮೈಸೂರು ಸಂಸದ ಪ್ರತಾಪ್ ಸಿಂಹ (Pratap Simha) ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆ ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ (Defamation Case) ಕೇಸ್ ದಾಖಲಿಸಿದ್ದಾರೆ. ತನ್ನ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿ ಪದ ಬಳಸಿದ್ದಾರೆ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸುವಂತೆ ಖಾಸಗಿ ದೂರು ಸಲ್ಲಿಸಿದ್ದಾರೆ.

ಪ್ರತಾಪ್ ಸಿಂಹ ಒಬ್ಬ ದೊಡ್ಡ ಅಯೋಗ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಬಾಯಿ ಮುಚ್ಕಂಡು ಸುಮ್ಮನಿದ್ದರೆ ಸರಿ. ಇಲ್ಲವಾದಲ್ಲಿ ಇಡೀ ಕಾಂಗ್ರೆಸ್ ಪಾಳಯ ಮೈಸೂರಿಗೆ ಇಳಿಯಬೇಕಾಗುತ್ತೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಡಾ ಕೆ ಸುಧಾಕರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ, ತಾನು ಕಾಂಗ್ರೆಸ್ ನಿಂದ ಕಣಕ್ಕಿಳಿಯಲು ಸಿದ್ಧ ಎಂದು ಪ್ರದೀಪ್ ಈಶ್ವರ್ ಗುಡುಗಿದ್ದರು. ಸದ್ಯ ಈಗ ತಮ್ಮ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದಾರೆ ಎಂದು ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಇದನ್ನೂ ಓದಿ: ಕೊಚ್ಚೆಗೆ ನಾನು ಕಲ್ಲು ಹಾಕಲ್ಲ: ಪ್ರದೀಪ್ ಈಶ್ವರ್​ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕರಾದ ಪ್ರದೀಪ್ ಈಶ್ವರ್‌ ನನ್ನ ವಿರುದ್ಧ ಮಾಧ್ಯಮಗಳಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದಾರೆ. ಮುಠಾಳ, ಅಯೋಗ್ಯ ಎಂಬಿತ್ಯಾದಿ ನಿಂದನತ್ಮಾಕ ಶಬ್ದಗಳಿಂದ ತೇಜೋವಧ ಮಾಡಲು ಪ್ರಯತ್ನಿಸಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಜನರಿಗೆ ನನ್ನ ಮೇಲೆ ತಪ್ಪು ಅಭಿಪ್ರಾಯ ಮೂಡಲು ದಾರಿಮಾಡಿಕೊಟ್ಟಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಕನಿಷ್ಠ ಸೌಜನ್ಯವನ್ನು ಕೂಡ ತೋರದ ಚಾರಿತ್ರ್ಯ ವಧೆ ಮಾಡುವ ಮಾತುಗಳನ್ನು ಆಡಿದ್ದಾರೆ. ಹಾಗೂ ನನ್ನನ್ನು ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಪ್ರತಾಪ್ ಸಿಂಹ ಅವರು ಖಾಸಗಿ ದೂರು ಸಲ್ಲಿಸಿದ್ದಾರೆ.

ಜೊತೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೀಪ್ ಈಶ್ವರ್ ಅವರು ಪ್ರತಾಪ್ ಸಿಂಹರನ್ನು ನಿಂದಿಸಿರುವ, ಮಾಧ್ಯಮದಲ್ಲಿ ಪ್ರಸಾರವಾದ ವಿಡಿಯೋ ಸಾಕ್ಷಿಯನ್ನೂ ಕೂಡ ಪೇನ್‌ಡ್ರೈವ್‌ ಮೂಲಕ ಸಲ್ಲಿಸಿದ್ದಾರೆ. ಹಾಗೂ ದಿನಪತ್ರಿಕೆಗಳಲ್ಲಿ ಬಂದಿರುವ ಹೇಳಿಕೆಗಳನ್ನೂ ಸಹ ಸಾಕ್ಷಿಯಂತೆ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​