ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಹಲವರಿಗೆ ಗಂಭೀರ ಗಾಯ!

Rameshwaram Cafe Blast :ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟವಾಗಿದೆ. ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಷಯ ತಿಳಿದು ಸ್ಥಳದಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ದೌಡಾಯಿಸಿದ್ದಾರೆ. ಆದ್ರೆ, ಸ್ಫೋಟಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಹಲವರಿಗೆ ಗಂಭೀರ ಗಾಯ!
ರಾಮೇಶ್ವರಂ ಕೆಫೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 01, 2024 | 3:56 PM

ಬೆಂಗಳೂರು, (ಮಾರ್ಚ್​ 01):  ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ(rameshwaram cafe)  ನಿಗೂಢ ವಸ್ತು ಸ್ಫೋಟವಾಗಿದೆ(mysterious explosion). ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಪೋಟವಾಗುತ್ತಿದ್ದಂತೆಯೇ ಜನರು ಭಯಭೀತರಾಗಿ ಓಡಿಡಾಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.

ನಿಗೂಢ ಸ್ಫೋಟದ ವೇಳೆ ಭಾರಿ ಪ್ರಮಾಣದ ಶಬ್ಧವಾಗಿದೆ. ಇದರಿಂದ ಜನರು ಒಂದು ಕ್ಷಣ ಭಯಭೀತರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿದ್ದು ಬೆಂಕಿ ನಂದಿಸಿದ್ದಾರೆ. ಇನ್ನು ಈ ಸ್ಪೋಟದಲ್ಲಿ 5ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಈ ಪೈಕಿ ಮಹಿಳೆಗೆ ಗಾಯವಾಗಿದೆ.

ಹೊರಗಡೆಯಿಂದ ತಂದಿದ್ದ ವಸ್ತು ಸ್ಫೋಟ

ಸಿಲಿಂಡರ್‌ ಅಥವಾ ಬಾಯ್ಲರ್‌ ಸ್ಫೋಟ ಕೂಡ ಆಗಿರಬಹುದೆಂದು ಎಂದು ಶಂಕಿಸಲಾಗಿತ್ತು. ಆದ್ರೆ, ಸ್ಫೋಟದಲ್ಲಿ ಕೆಲ ಐಡಿ ಕಾರ್ಡ್​ಗಳು ದೊರೆತಿವೆ. ಇನ್ನು ಬ್ಲಾಸ್ಟ್​​ ನಡೆದ ಸ್ಥಳದ ಸಮೀಪದಲ್ಲೇ ಒಂದು ಬ್ಯಾಟರಿ ಪತ್ತೆಯಾಗಿದೆ. ಅಲ್ಲದೇ ಹೋಟೆಲ್​​ಗೆ ಗ್ರಾಹಕರೊಬ್ಬರ ಬ್ಯಾಗ್​ ಸುಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ.  ಈ ಹಿನ್ನೆಲೆಯಲ್ಲಿ ಹಲವು ಅ ಅನುಮಾನಗಳು ವ್ಯಕ್ತವಾಗಿವೆ.  ಈ ಹಿನ್ನೆಲೆಯಲ್ಲಿ ಪೊಲೀಸ್ ಹಿರಿಯ ಅಧಿಕಾರಿಗಳು ಸಹ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಎಸಿಪಿ ರೀನಾ ಸುವರ್ಣ ಮತ್ತು ಮಾರತ್ತಹಳ್ಳಿ ಪೊಲೀಸರು ಸಹ ಸ್ಳಳಕ್ಕೆ ಬಂದಿದ್ದು, ಸುಟ್ಟ ಸ್ಥಿತಿಯಲ್ಲಿರುವ ಬ್ಯಾಗ್ ಹಾಗೂ ಸ್ಥಳದಲ್ಲಿ ಸಿಕ್ಕ ಐಡಿ ಕಾರ್ಡ್ ಬಗ್ಗೆ​ ಪರಿಶೀಲನೆ ನಡೆಸಿದ್ದಾರೆ. ಇನ್ನು ಹೋಟೆಲ್​ನ ಸಿಸಿಟಿವಿಗಳನ್ನು ಸಹ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಐವರು ಗಾಯಾಳುಗಳನ್ನು 2 ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬ್ರೂಕ್​ಫೀಲ್ಡ್ ಆಸ್ಪತ್ರೆಯಲ್ಲಿ ಫಾರೂಕ್ ಹುಸಾಯ್, ದೀಪಾಂಶು ಹಾಗೂ ಸ್ವರ್ಣ ನಾರಾಯಣಪ್ಪ ಚಿಕಿತ್ಸೆ ಪಡೆಯುತ್ತಿದ್ದರೆ, ಇನ್ನಿಬ್ಬರು ತಾವೇ ಹೋಗಿ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಗಾಯದ ಬಗ್ಗೆ ಪೊಲೀಸರು ವೈದ್ಯರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಸ್ಥಳಕ್ಕೆ ಪ್ರಯೋಗಾಲಯದ ತಜ್ಞರು ದೌಡು

ಸ್ಫೋಟದ ಹಿಂದೆ ಕಿಡಿಗೇಡಿಗಳ ಕೃತ್ಯ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಆಗಮಿಸಿದ್ದಾರೆ. ಅಗತ್ಯ ಉಪಕರಣಗಳ ಜೊತೆ ರಾಮೇಶ್ವರಂ ಕೆಫೆಗೆ ಬಂದಿರುವ FSL ತಂಡ ಪರಿಶೀಲನೆ ನಡೆಸಿದೆ. ಹೋಟೆಲ್​ನಲ್ಲಿದ್ದ ಯಾವುದೇ ವಸ್ತು ಸ್ಫೋಟವಾಗಿಲ್ಲ. ಬದಲಾಗಿ ಹೊರಗಡೆಯಿಂದ ಹೋಟೆಲ್​ಗೆ ತಂದ ವಸ್ತುವಿನಿಂದ ಸ್ಫೋಟವಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಸ್ಥಳಕ್ಕೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನ ದಳ  ಬಂದಿದ್ದು, ತಪಾಸಣೆ ನಡೆಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:24 pm, Fri, 1 March 24