Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Bengaluru Expressway Toll: ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇನಲ್ಲಿ ಫೆ.15ರೊಳಗೆ ಟೋಲ್ ಸಂಗ್ರಹಿಸಲು ನಿರ್ಧಾರ

ಮಹತ್ವಾಕಾಂಕ್ಷೆಯ ಮೈಸೂರು-ಬೆಂಗಳೂರು ಎಕ್ಸಪ್ರೆಸ್ ವೇನಲ್ಲಿ ಫೆ.15ರೊಳಗೆ ಟೋಲ್ ಸಂಗ್ರಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ.

Mysuru Bengaluru Expressway Toll: ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇನಲ್ಲಿ ಫೆ.15ರೊಳಗೆ ಟೋಲ್ ಸಂಗ್ರಹಿಸಲು ನಿರ್ಧಾರ
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇImage Credit source: The Hindu
Follow us
ನಯನಾ ರಾಜೀವ್
|

Updated on: Feb 03, 2023 | 9:51 AM

ಮಹತ್ವಾಕಾಂಕ್ಷೆಯ ಮೈಸೂರು-ಬೆಂಗಳೂರು ಎಕ್ಸಪ್ರೆಸ್ ವೇನಲ್ಲಿ ಫೆ.15ರೊಳಗೆ ಟೋಲ್ ಸಂಗ್ರಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಕಾಮಗಾರಿಯು ಮೊದಲ ಹಂತದಲ್ಲಿ ಬೆಂಗಳೂರು-ಚನ್ನಪಟ್ಟಣದ ನಿಡಘಟ್ಟದವರೆಗೂ ನಡೆದಿತ್ತು. ಶ್ರೀರಂಗಪಟ್ಟಣ ಹಾಗೂ ಬಿಡದಿ ಬಳಿ ಎರಡು ಟೋಲ್ ಪ್ಲಾಜಾ ನಿರ್ಮಿಸಲಾಗಿದೆ. ಪ್ರವೇಶ ಹಾಗೂ ನಿರ್ಗಮನಕ್ಕೆ ಅನುಕೂಲವಾಗುವಂತೆ 11 ಗೇಟ್ ಅಳವಡಿಸಲಾಗಿದೆ. ಎಲ್ಲಾ ಗೇಟ್‍ಗಳು ಅತ್ಯಾಧುನಿಕ ಟೋಲ್ ಸಿಸ್ಟಂ ಹಾಗೂ ಫಾಸ್ಟ್ ಟ್ಯಾಗ್ ವ್ಯವಸ್ಥೆ ಇರಲಿದೆ. ಸರ್ವಿಸ್ ರಸ್ತೆ ನಿರ್ಮಾಣವಾದ ಬಳಿಕ ಹೈವೇ ರಸ್ತೆಯಲ್ಲಿ ದ್ವಿಚಕ್ರ ಮತ್ತು ಮೂರು ಚಕ್ರದ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ.

ಈ ಎಕ್ಸ್​ಪ್ರೆಸ್​ ವೇ ಒಟ್ಟು 56 ಕಿಮೀ ಒಳಗೊಂಡಿತ್ತು. ಎರಡನೇ ಹಂತದ ಕಾಮಗಾರಿ ನಿಡಘಟ್ಟದಿಂದ ಮೈಸೂರಿನವರೆಗೆ ನಡೆಯುತ್ತಿದೆ. 61 ಕಿ.ಮೀ. ಕಾಮಗಾರಿ ಭರದಿಂದ ಸಾಗುತ್ತಿದೆ. ಇದೀಗ ಮೊದಲ ಹಂತದ ಬೆಂಗಳೂರು-ನಿಡಘಟ್ಟ ಟೋಲ್ ಸಂಗ್ರಹಕ್ಕೆ ಹೆದ್ದಾರಿ ಪ್ರಾಕಾರ ನಿರ್ಧರಿಸಿದೆ. ಮೊದಲ ಹಂತದ ಕಾಮಗಾರಿ ಮುಗಿದಿದ್ದು, ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ. ಎರಡನೇ ಹಂತದ ಕಾಮಗಾರಿ ಭರದಿಂದ ಸಾಗುತ್ತಿದೆ. ಈ ಕಾರಣದಿಂದಾಗಿ ಮೊದಲ ಹಂತದಲ್ಲಿ ಬೆಂಗಳೂರು-ನಿಡಘಟ್ಟ ಟೋಲ್ ಸಂಗ್ರಹವನ್ನು ಆರಂಭಿಸಲಾಗುವುದು. ಎರಡನೇ ಹಂತದ ಕಾಮಗಾರಿ ಮುಗಿದ ಬಳಿಕ ಎರಡನೆ ಟೋಲ್ ಸಂಗ್ರಹ ಮಾಡಲಾಗುವುದು ಎಂದು ಪ್ರಾಧಿಕಾರದ ಅಧಿಕಾರಿ ರಸ್ತೆಯ ದೂರ, ಮಾರ್ಗದರ್ಶಿ ಬೋರ್ಡ್ ಅಳವಡಿಸಲಾಗಿದೆ.

ಮತ್ತಷ್ಟು ಓದಿ: Srirangapatna Bypass: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯ ಶ್ರೀರಂಗಪಟ್ಟಣ ಬೈಪಾಸ್ ಸಂಚಾರಕ್ಕೆ ಮುಕ್ತ

ಮಂಡ್ಯ ಬೈಪಾಸ್ ರಸ್ತೆ ಕಾಮಗಾರಿ ಮುಗಿದಿದೆ. ಕೆಲ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿಯಾಗಿ 1,201 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಈಗಾಗಲೇ ತ್ರಿಡಿ ನೋಟಿಫಿಕೇಷನ್ ಮುಗಿದು ಮುಂದಿನ ತಿಂಗಳೊಳಗಾಗಿ ಕಾಮಗಾರಿಗೆ ಚಾಲನೆ ನೀಡಲು ಕ್ರಮವಹಿಸಲಾಗಿದೆ.

ಚನ್ನಪಟ್ಟಣದಲ್ಲಿ ಐಲೆಂಡ್ ರೆಸ್ಟ್ ಏರಿಯಾ ನಿರ್ಮಾಣ ಮಾಡಲು ಸುಮಾರು 50 ಎಕರೆ ಜಮೀನನ್ನು ಖರೀದಿಸಿ ಟ್ರಾಮಾ ಸೆಂಟರ್ ತೆರೆದು ಅಪಘಾತಗಳು ಸಂಭವಿಸಿದಲ್ಲಿ ತುರ್ತು ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುತ್ತದೆ.

ನೈಸ್ ರಸ್ತೆಯಂತೆ ಆಗಮನ ಮತ್ತು ನಿರ್ಗಮನ ಸಂಪರ್ಕ ಕಲ್ಪಿಸುವ ರಸ್ತೆಯಂತೆ ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣಗಳಲ್ಲಿ ಸಂಪರ್ಕ ಕಲ್ಪಿಸುವ ರಸ್ತೆಗಳ ಜೊತೆಗೆ ರೆಸ್ಟ್ ಏರಿಯಾ ನಿರ್ಮಾಣ ಮಾಡಲು ಮುಂದಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್