AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್​ನಲ್ಲಿ ನಾಡಪ್ರಭು ಕೆಂಪೇಗೌಡರ 3ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ; ಯಾವಾಗ?

ವಿಶ್ವ ಒಕ್ಕಲಿಗರ ಮಹಾ ವೇದಿಕೆಯು ಅನೇಕ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಜನಾಂಗದ ಆಶಾದೀಪವಾಗಿ ಜನಪ್ರಿಯತೆಯನ್ನು ಗಳಿಸಿದೆ. ಅದರಂತೆ ಲಂಡನ್‌(London) ನಗರದಲ್ಲಿ ನಾಡಪ್ರಭು ಕೆಂಪೇಗೌಡರ 3ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸಂಭ್ರಮ ಮತ್ತು ಕನ್ನಡೋತ್ಸವವನ್ನು ಆಯೋಜಿಸಲು ಸಜ್ಜಾಗಿದೆ. ಈ ಕುರಿತು ವಿವರ ಇಲ್ಲಿದೆ.

ಲಂಡನ್​ನಲ್ಲಿ ನಾಡಪ್ರಭು ಕೆಂಪೇಗೌಡರ 3ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ; ಯಾವಾಗ?
ಲಂಡನ್​ನಲ್ಲಿ ನಾಡಪ್ರಭು ಕೆಂಪೇಗೌಡರ 3ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ
ಕಿರಣ್ ಹನುಮಂತ್​ ಮಾದಾರ್
|

Updated on: Sep 26, 2024 | 7:22 PM

Share

ಬೆಂಗಳೂರು, ಸೆ.26: ವಿಶ್ವ ಒಕ್ಕಲಿಗರ ಮಹಾ ವೇದಿಕೆ(Vishva Okkaliga Maha Vedike)ಯು ಸೆಪ್ಟೆಂಬರ್ 28ರಂದು ಲಂಡನ್‌(London) ನಗರದಲ್ಲಿ ನಾಡಪ್ರಭು ಕೆಂಪೇಗೌಡರ 3ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸಂಭ್ರಮ ಮತ್ತು ಕನ್ನಡೋತ್ಸವವನ್ನು ಆಯೋಜಿಸಲು ಸಜ್ಜಾಗಿದೆ. ಈಗಾಗಲೇ ದುಬೈ ಮತ್ತು ಸಿಂಗಾಪುರ ನಗರಗಳಲ್ಲಿ ಈ ಉತ್ಸವವನ್ನು ನಡೆಸಲಾಗಿದ್ದು, ಮೂರನೇ ಉತ್ಸವವನ್ನು ಈ ಬಾರಿ ಮಹಾನಗರಿ ಲಂಡನ್‌ನಲ್ಲಿ ಆಚರಿಸಲು ವೇದಿಕೆಯು ಸಿದ್ಧಗೊಂಡಿದೆ.

ಈ ಕಾರ್ಯಕ್ರಮವು ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷರಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್‌ ಜೋಶಿ ಹಾಗೂ ಕಾರ್ಯಕ್ರಮದ ಉದ್ಘಾಟಕರಾಗಿ ಕರ್ನಾಟಕದ ಮಾಜಿ ಸಚಿವರಾದ ಶ್ರೀ ಸಿ.ಎಸ್.ಪುಟ್ಟರಾಜು ಮತ್ತು ಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾದ ಶ್ರೀ ಸತೀಶ್ ರೆಡ್ಡಿ ಪಾಲ್ಗೊಳ್ಳಲಿದ್ದಾರೆ.

ಉತ್ಸವದಲ್ಲಿ ಮನರಂಜನೆಯ ಮಹಾ ರಸದೌತಣ

ಈ ಉತ್ಸವದಲ್ಲಿ ಮಾತುಕತೆಯ ಜೊತೆಗೆ ಮನರಂಜನೆಯ ಮಹಾ ರಸದೌತಣವನ್ನೇ ಏರ್ಪಡಿಸಲಾಗುತ್ತಿದೆ. ಕರ್ನಾಟಕದ ಶ್ರೀಮಂತ ಪರಂಪರೆ ಮತ್ತು ಸಾಂಸ್ಕೃತಿಕ ಹೆಮ್ಮೆಯನ್ನು ವಿದೇಶಿ ನೆಲದಲ್ಲಿ ಪ್ರಸ್ತುತಪಡಿಸಲು ಈ ವೇದಿಕೆಯು ಮುಂದಾಗಿದೆ. ಈ ಮೂಲಕ ನಾಡು, ನುಡಿಯ ಅಭಿಮಾನವನ್ನು ಸದಾ ಜಾಗೃತಗೊಳಿಸುವ ಈ ರೀತಿಯ ಕಾರ್ಯಗಳು ವೇದಿಕೆಯಿಂದ ನಿರಂತರವಾಗಿ ಜಾರಿಯಲ್ಲಿರಲಿವೆ.

ವಿಶ್ವ ಒಕ್ಕಲಿಗರ ಮಹಾ ವೇದಿಕೆಯು ಅನೇಕ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಜನಾಂಗದ ಆಶಾದೀಪವಾಗಿ ಜನಪ್ರಿಯತೆಯನ್ನು ಗಳಿಸಿದೆ. ನೀರು, ನೆಲದ ವಿಷಯದಲ್ಲಿ ಆರಂಭದಿಂದಲೂ ಉತ್ತಮವಾದ ಹೋರಾಟವನ್ನು ಮಾಡುತ್ತಾ ಬಂದಿದೆ. ವಿಶ್ವ ಒಕ್ಕಲಿಗರ ಮಹಾ ವೇದಿಕೆಯು ಸಮುದಾಯಕ್ಕೆ ಒಂದಷ್ಟು ಸೇವೆ ಸಲ್ಲಿಸುತ್ತಾ ಪ್ರತಿ ವರ್ಷವೂ ಪರಮಪೂಜ್ಯ ಜಗದ್ಗುರುಗಳ ಸಮ್ಮುಖದಲ್ಲಿ ಜನಾಂಗದ ನೇತಾರರ ಸಹಕಾರದೊಂದಿಗೆ ಸಾಂಪ್ರದಾಯಿಕ ಹಬ್ಬವಾದ ಸಂಕ್ರಾಂತಿ ಹಬ್ಬವನ್ನು ಒಕ್ಕಲಿಗರ ಹಬ್ಬವಾಗಿ ವಿಶಿಷ್ಠವಾಗಿ ರಾಜ್ಯಾದ್ಯಂತ ಆಚರಿಸುತ್ತಾ, ವಾರ್ಷಿಕೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರುತ್ತಿದೆ.

ಇದೇ ಸಂದರ್ಭದಲ್ಲಿ ಜನಾಂಗದ ಸಾಧಕರಿಗಾಗಿ ವಿಶ್ವಮಾನ್ಯ ಒಕ್ಕಲಿಗ ಪ್ರಶಸ್ತಿಯನ್ನು ನೀಡುವ ಮೂಲಕ ಅನೇಕ ಜನಪರ ಕೆಲಸಗಳನ್ನು ಮಾಡಿರುವ ಸಾಧಕರನ್ನು ಗುರುತಿಸುವ ಕಾರ್ಯವನ್ನು ಕೂಡ ಮಾಡುತ್ತಿದೆ. ವೇದಿಕೆಯು ಜನಾಂಗದ ಸಮುದಾಯದ ಒಳಿತಿಗಾಗಿ, ಒಗ್ಗಟ್ಟಿಗಾಗಿ, ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ ಎಲ್ಲರೊಡನೆ ಸ್ಪಂದಿಸುತ್ತಾ ಬಂದಿದೆ. ಇನ್ನು ಈ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಮೊ: 6364409651, 6364466240 ಸಂಪರ್ಕಿಸಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?