AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಪುನೀತ್ ಸಾವಿನ ಘಟನೆ ಕಣ್ಮುಂದೆ ಇದ್ದರೂ ನಿರ್ಲಕ್ಷ್ಯ ತೋರಿದ ಫೋರ್ಟಿಸ್ ಆಸ್ಪತ್ರೆ! ಕಾರ್ಡಿಯಾಕ್ ಅರೆಸ್ಟ್ ರೋಗಿಗೆ ಆ್ಯಂಬುಲೆನ್ಸ್ ನೀಡಲು ನಕಾರ

ಕಾರ್ಡಿಯಾಕ್ ಅರೆಸ್ಟ್ ಆದ ರೋಗಿಗೆ ಆ್ಯಂಬುಲೆನ್ಸ್ ನೀಡಲು ನಿರಾಕರಿಸಿದ ಆರೋಪದಡಿ ನಾಗರಭಾವಿಯ ಫೋರ್ಟಿಸ್ ಆಸ್ಪತ್ರೆ ವಿರುದ್ಧ ದೂರು ದಾಖಲಾಗಿದೆ.

ನಟ ಪುನೀತ್ ಸಾವಿನ ಘಟನೆ ಕಣ್ಮುಂದೆ ಇದ್ದರೂ ನಿರ್ಲಕ್ಷ್ಯ ತೋರಿದ ಫೋರ್ಟಿಸ್ ಆಸ್ಪತ್ರೆ! ಕಾರ್ಡಿಯಾಕ್ ಅರೆಸ್ಟ್ ರೋಗಿಗೆ ಆ್ಯಂಬುಲೆನ್ಸ್ ನೀಡಲು ನಕಾರ
ಫೋರ್ಟಿಸ್ ಆಸ್ಪತ್ರೆ ವಿರುದ್ಧ ದೂರು ದಾಖಲಾಗಿದೆ
TV9 Web
| Edited By: sandhya thejappa|

Updated on: Nov 10, 2021 | 10:51 AM

Share

ಬೆಂಗಳೂರು: ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಸಾವಿನಿಂದ ಇಡೀ ಕರುನಾಡು ಶೋಕ ಸಾಗರದಲ್ಲಿ ಮುಳುಗಿದೆ. ಅಪ್ಪು ಅಗಲಿ 13 ದಿನಗಳಾದರೂ ಸಾವಿನ ನೋವು ಕಡಿಮೆಯಾಗುತ್ತಿಲ್ಲ. ಕಾರ್ಡಿಯಾಕ್ ಅರೆಸ್ಟ್​ನಿಂದ ಕಟ್ಟುಮಸ್ತಾಗಿದ್ದ ಅಪ್ಪು ಕೊನೆಯುಸಿರೆಳೆದಿದ್ದಾರೆ. ಈ ಪ್ರಕರಣ ಕಣ್ಣು ಮುಂದೆ ಇದ್ದರೂ ಫೋರ್ಟಿಸ್ ಆಸ್ಪತ್ರೆ ನಿರ್ಲಕ್ಷ್ಯ ತೋರಿರುವ ಆರೋಪ ಕೇಳಿಬಂದಿದೆ. ಕಾರ್ಡಿಯಕ್ ಅರೆಸ್ಟ್ ಆದ ರೋಗಿ ವಿಚಾರದಲ್ಲಿ ಆಸ್ಪತ್ರೆ ನಿರ್ಲಕ್ಷ್ಯ ಮೆರೆದಿದ್ದು, ಪ್ರತಿಷ್ಠಿತ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.

ಕಾರ್ಡಿಯಾಕ್ ಅರೆಸ್ಟ್ ಆದ ರೋಗಿಗೆ ಆ್ಯಂಬುಲೆನ್ಸ್ ನೀಡಲು ನಿರಾಕರಿಸಿದ ಆರೋಪದಡಿ ನಾಗರಭಾವಿಯ ಫೋರ್ಟಿಸ್ ಆಸ್ಪತ್ರೆ ವಿರುದ್ಧ ದೂರು ದಾಖಲಾಗಿದೆ. ಮಂಜುನಾಥ್ ಎಂಬುವವರು ಫೋರ್ಟಿಸ್ ಆಡಳಿತ ಮಂಡಳಿ ವಿರುದ್ಧ ಜ್ಞಾನಭಾರತಿ ಠಾಣೆಗೆ ದೂರು ನೀಡಿದ್ದಾರೆ. ನ.3ರಂದು ಮಂಜುನಾಥ್ ಸ್ನೇಹಿತ ಸಂದೀಪ್ ಎಂಬುವವರಿಗೆ ಕಾರ್ಡಿಯಾಕ್ ಅರೆಸ್ಟ್ ಆಗಿತ್ತು. ತಕ್ಷಣ ಸಂದೀಪ್ ಸ್ನೇಹಿತರು ಹತ್ತಿರದ ಅನುಪಮಾ ಆಸ್ಪತ್ರೆಗೆ ಕರೆದೊಯ್ಯುತ್ತಾರೆ. ಅನುಪಮಾ ಆಸ್ಪತ್ರೆ ವೈದ್ಯರ ಸೂಚನೆ ಮೇರೆಗೆ ನಾಗರಭಾವಿಯ ಫೋರ್ಟಿಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

ಕೆಲಕಾಲ ಚಿಕಿತ್ಸೆ ನೀಡಿದ ಬಳಿಕ ಫೋರ್ಟಿಸ್ ಆಸ್ಪತ್ರೆಯವರು ತಮ್ಮದೇ ಕನ್ನಿಂಗ್ ಹ್ಯಾಂ ರಸ್ತೆಯ ಫೋರ್ಟಿಸ್​ಗೆ ಹೋಗುವಂತೆ ಸೂಚಿಸುತ್ತಾರೆ. ಈ ವೇಳೆ ಸಂದೀಪ್ ಸ್ನೇಹಿತರು ಹೆಚ್ಚು ಸಮಯಬೇಕಾಗುತ್ತದೆ. ಅದಕ್ಕಾಗಿ ಸಮೀಪದ ಲಕ್ಷ್ಮಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇವೆ ಅಂತ ತಿಳಿಸುತ್ತಾರೆ. ಆಗ ಫೋರ್ಟಿಸ್ ಆಸ್ಪತ್ರೆ ಆ್ಯಂಬುಲೆನ್ಸ್ ನೀಡಲು ಹಿಂದೇಟು ಹಾಕಿದೆ ಎಂಬ ಆರೋಪ ಕೇಳಿಬಂದಿದೆ. ನಮ್ಮ ಬ್ರಾಂಚ್​ಗೆ ಕರೆದೊಯ್ಯುವುದಾರೆ ಮಾತ್ರ ಆ್ಯಂಬುಲೆನ್ಸ್ ನೀಡುತ್ತೇವೆ. ಬೇರೆ ಆಸ್ಪತ್ರೆಗೆ ಕರೆದೊಯ್ಯುವುದಾದರೆ ಆ್ಯಂಬುಲೆನ್ಸ್ ನೀಡಲ್ಲ ಅಂತ ನಿರ್ಲಕ್ಷ್ಯ ತೋರಿರುವ ಬಗ್ಗೆ ದೂರು ದಾಖಲಾಗಿದೆ.

ಬೇರೆ ವಿಧಿಯಿಲ್ಲದೆ ಸಂದೀಪ್ ಸ್ನೇಹಿತರು ಖಾಸಗಿ ಆ್ಯಂಬುಲೆನ್ಸ್ ಮೊರೆ ಹೋಗಿದ್ದಾರೆ. ನಂತರ ಫೋರ್ಟಿಸ್ ಆಸ್ಪತ್ರೆ ಬಿಲ್ ಕ್ಲಿಯರ್ ಮಾಡಲು ಹಿಂದೇಟು ಹಾಕಿದೆ. ಲಕ್ಷ್ಮಿ ಆಸ್ಪತ್ರೆಯಲ್ಲಿ ದಾಖಲಿಸಿದ ಬಳಿಕ ರೋಗಿ ಸಂದೀಪ್ ಚೇತರಿಸಿಕೊಂಡಿದ್ದಾರೆ. ಸದ್ಯ ಆ್ಯಂಬುಲೆನ್ಸ್ ನೀಡಲು ನಿರಾಕರಿಸಿದ ಫೋರ್ಟಿಸ್ ಆಸ್ಪತ್ರೆ ವಿರುದ್ಧ ಜ್ಞಾನಭಾರತಿ ಠಾಣೆಗೆ ದೂರು ದಾಖಲಾಗಿದೆ.

ಇದನ್ನೂ ಓದಿ

ಮೈಸೂರಿನಲ್ಲಿ ಲಸಿಕೆ ನೀಡಲು ವಿನೂತನ ಪ್ರಯತ್ನಗಳು, ತಮಟೆ ಬಾರಿಸಿ ಲಸಿಕೆ ಪಡೆಯುವಂತೆ ಮನವಿ

ಯುಮುನಾ ನದಿಯಲ್ಲಿ ವಿಷಕಾರಿ ನೊರೆ; ಸ್ವಚ್ಛಗೊಳಿಸಲು 15 ಬೋಟ್​​ಗಳನ್ನು ನಿಯೋಜಿಸಿದ ದೆಹಲಿ ಸರ್ಕಾರ

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ