AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ: ಗುಡ್​​ನ್ಯೂಸ್​​ ಕೊಟ್ಟ ಅರಣ್ಯ ಸಚಿವರು

ನಾಗರಹೊಳೆ ಮತ್ತು ಬಂಡೀಪುರ ಸಫಾರಿಗಳು ಫೆಬ್ರವರಿ 19 ರಿಂದ ಪುನರಾರಂಭಗೊಳ್ಳಲಿವೆ. ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಸಫಾರಿ ಶೇ.50ರ ಸಾಮರ್ಥ್ಯದಲ್ಲಿ ಮತ್ತು ಕಡಿಮೆ ಅವಧಿಯೊಂದಿಗೆ ಮತ್ತೆ ಶುರುವಾಗಲಿದೆ. ಈ ಬಗ್ಗೆ ಅರಣ್ಯ ಸಚಿವ ಈಶ್ವರ್​​ ಖಂಡ್ರೆ ಅವರೇ ಮಾಹಿತಿ ನೀಡಿದ್ದು, ಪ್ರವಾಸೋದ್ಯಮ ಮತ್ತು ಸ್ಥಳೀಯ ಆರ್ಥಿಕತೆಗೆ ಹೊಸ ಭರವಸೆ ಮೂಡಿದೆ.

ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ: ಗುಡ್​​ನ್ಯೂಸ್​​ ಕೊಟ್ಟ ಅರಣ್ಯ ಸಚಿವರು
ಸಾಂದರ್ಭಿಕ ಚಿತ್ರImage Credit source: Google
ಹರೀಶ್ ಜಿ.ಆರ್​.
| Edited By: |

Updated on:Feb 18, 2026 | 6:15 PM

Share

ಬೆಂಗಳೂರು, ಫೆಬ್ರವರಿ 18: ನಾಗರಹೊಳೆ, ಬಂಡೀಪುರ ಅಭಯಾರಣ್ಯದಲ್ಲಿ ಅರಣ್ಯ ಇಲಾಖೆಯಿಂದ ನಾಳೆಯಿಂದಲೇ ಸಫಾರಿ ಪುನಾರಂಭಕ್ಕೆ ನಿರ್ಧರಿಸಲಾಗಿದೆ ಎಂದು ವಿಕಾಸಸೌಧದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಸಫಾರಿ ತಾತ್ಕಾಲಿಕ ಸ್ಥಗಿತವಾದ ನಂತರ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದ್ದು, ಜನವರಿ 2ರಂದು ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ಮಾಡಿದ್ದೆವು. ಹಿರಿಯ ಅಧಿಕಾರಿಗಳ ನೇತೃತ್ವದ ತಾಂತ್ರಿಕ ಸಮಿತಿ ಮಧ್ಯಂತರ ವರದಿ ನೀಡಿದ್ದು, ಸಫಾರಿ ಪುನರ್ ಪ್ರಾರಂಭಕ್ಕೆ ಬೇಡಿಕೆ ಇದೆ. ಹೀಗಾಗಿ ಶೇ.50ರಷ್ಟು ಸಫಾರಿ ಪುನರಾರಂಭಕ್ಕೆ ತೀರ್ಮಾನಿಸಲಾಗಿದೆ. ಪೂರ್ತಿ ವರದಿ ಬಂದ ಬಳಿಕ ಸಂಪೂರ್ಣ ಅನುಮತಿ ಬಗ್ಗೆ ನಿರ್ಧಾರ ಮಾಡ್ತೀವಿ ಎಂದು ತಿಳಿಸಿದ್ದಾರೆ.

ಸಫಾರಿ ಅವಧಿ ಇಳಿಕೆ

ಈ ಮೊದಲು ಬಳಕೆ ಮಾಡ್ತಿದ್ದ ಶೇ.50ರಷ್ಟು ವಾಹನಗಳ ಬಳಕೆಗೆ ನಿರ್ಧರಿಸಲಾಗಿದ್ದು, ಸಫಾರಿ ಅವಧಿಯಲ್ಲಿಯೂ ಕೆಲ ಬದಲಾವಣೆ ಮಾಡಲಾಗಿದೆ. ಬಂಡೀಪುರದಲ್ಲಿ 8 ಗಂಟೆಯಿಂದ 5ಕ್ಕೆ ಅವಧಿ ಇಳಿಕೆ ಮಾಡಲಾಗಿದ್ದರೆ, ಸುಂಕದಕಟ್ಟೆಯಲ್ಲಿ 6 ಗಂಟೆ ಹಾಗೂ ನಾಗರಹೊಳೆಯಲ್ಲಿ 4 ಗಂಟೆ ಕಾಲ ಮಾತ್ರ ಸಫಾರಿಗೆ ಪ್ರಥಮ ಹಂತದಲ್ಲಿ ಅನುಮತಿ ನೀಡಲಾಗಿದೆ. ಅಲ್ಲದೆ ರೆಸಾರ್ಟ್​​ ಮತ್ತು ಹೋಂ ಸ್ಟೇಗಳಲ್ಲಿ ಕ್ಯಾಂಪ್​​ ಫೈರ್​​ ನಿರ್ಬಂಧಿಸಿಯೂ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಸಫಾರಿ ಬಂದ್​ನಿಂದ ನೆರೆರಾಜ್ಯಕ್ಕೆ ಹರಿದು ಹೋಗುತ್ತಿದೆ ಪ್ರವಾಸಿಗರ ದಂಡು! ಕರ್ನಾಟಕಕ್ಕಾಗುವ ನಷ್ಟವೆಷ್ಟು ಗೊತ್ತಾ?

ಸಫಾರಿ ಪುನರಾರಂಭಕ್ಕೆ ಗಡಿನಾಡ ರೈತರ ವಿರೋಧ

ಬಂಡೀಪುರ ಸಫಾರಿಗೆ ಗ್ರೀನ್ ಸಿಗ್ನಲ್ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ದ ಗಡಿನಾಡ ರೈತರು ರೊಚ್ಚಿಗೆದ್ದಿದ್ದಾರೆ. ಸಫಾರಿ ರೀ ಓಪನ್ ಮಾಡಿದ್ದಕ್ಕೆ ಭಾರಿ ಆಕ್ರೋಶ ವ್ಯಕ್ತಪಡಿಸಿರುವ ಅನ್ನದಾತರು, ನಾಳೆ ಬಂಡೀಪುರ ಮೇಲುಕಾಮನಹಳ್ಳಿಯ ಅರಣ್ಯ ಕಚೇರಿಗೆ ಮುತ್ತಿಗೆಗೆ ನಿರ್ಧರಿಸಿದ್ದಾರೆ.

ಹುಲಿ ಹಾಗೂ ಚಿರತೆ ದಾಳಿಯಿಂದ ರಾಜ್ಯದ ಹಲವೆಡೆ ಸಾವು ನೋವುಗಳು ಹೆಚ್ಚಾದ ಹಿನ್ನೆಲೆ ಸರ್ಕಾರ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿತ್ತು. ಇದರ ಪರಿಣಾಮವಾಗಿ ಕೇರಳ ಮತ್ತು ತಮಿಳುನಾಡು ರಾಜ್ಯಗಳಿಗೆ ಲಾಭವಾಗಿದೆ. ರಣಥಂಬೋರ್ ಹಾಗೂ ಕಾರ್ಬೆಟ್ ಸೇರಿದಂತೆ ಇತರ ರಾಜ್ಯಗಳ ಉದ್ಯಾನವನಗಳಲ್ಲಿ ಸಫಾರಿ ಬುಕ್ಕಿಂಗ್ ಹೆಚ್ಚಾಗಿದೆ ಎಂದು ಕರ್ನಾಟಕ ಇಕೋ-ಟೂರಿಸಂ ರೆಸಾರ್ಟ್ಸ್ ಅಸೋಸಿಯೇಶನ್ (KETRA) ದೂರಿತ್ತು. ಅಲ್ಲದೆ ಬಂಡೀಪುರ-ನಾಗರಹೊಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 35 ರಿಸಾರ್ಟ್ಗಗಳಿಗೆ ದಿನಕ್ಕೆ ಸರಾಸರಿ 3 ಕೋಟಿ ರೂಪಾಯಿ ನಷ್ಟವಾಗುತ್ತಿದೆ. ಸುಮಾರು 8,000 ಜನರು ಪರಿಸರ ಪ್ರವಾಸೋದ್ಯಮದ ಮೇಲೆ ಅವಲಂಬಿತರಾಗಿದ್ದು, ಸಫಾರಿಗೆ ಬ್ರೇಕ್ ಬಿದ್ದಿರುವುದು ಇವರ ಜೀವನದ ಮೇಲೆ ಪರಿಣಾಮ ಬಿದ್ದಿದೆ ಎಂಬ ಬಗ್ಗೆ ವರದಿಯಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:06 pm, Wed, 18 February 26

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!