ಸರ್ಕಾರಿ ಶಾಲೆಗಳ ‘ನಲಿ ಕಲಿ’ ಯೋಜನೆ ವಿಫಲ! ಶಿಕ್ಷಣ ಸಚಿವರಿಗೆ ವರದಿ ಸಲ್ಲಿಕೆ

ಕನ್ನಡ ಅಭಿವೃದ್ಧಿ ಪ್ರಾಧಿಕಾರವು 'ನಲಿ ಕಲಿ' ಯೋಜನೆ ಮಕ್ಕಳ ಉದ್ದೇಶಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ವರದಿ ಮಾಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಲ್ಲಿಸಿದ ವರದಿಯಲ್ಲಿ, ಶಿಕ್ಷಕರ ತರಬೇತಿ, ಬಹುತರಗತಿ ನಿರ್ವಹಣೆ, ಕಲಿಕಾ ಸಾಮಗ್ರಿ ಮತ್ತು ಮೂಲಸೌಕರ್ಯಗಳ ಕೊರತೆ ಯೋಜನೆಯ ವೈಫಲ್ಯಕ್ಕೆ ಕಾರಣವೆಂದು ಹೇಳಲಾಗಿದೆ. ಇದು ಸರ್ಕಾರಿ ಶಾಲೆಗಳ ಮೇಲಿನ ನಂಬಿಕೆ ಕುಗ್ಗಿಸಿ, ಪೋಷಕರು ಖಾಸಗಿ ಶಾಲೆಗಳತ್ತ ಮುಖ ಮಾಡುವಂತೆ ಮಾಡಿದೆ.

ಸರ್ಕಾರಿ ಶಾಲೆಗಳ ‘ನಲಿ ಕಲಿ’ ಯೋಜನೆ ವಿಫಲ! ಶಿಕ್ಷಣ ಸಚಿವರಿಗೆ ವರದಿ ಸಲ್ಲಿಕೆ
ಸರ್ಕಾರಿ ಶಾಲೆಗಳ ‘ನಲಿ ಕಲಿ’ ಯೋಜನೆ ವಿಫಲ: ಶಿಕ್ಷಣ ಸಚಿವರಿಗೆ ವರದಿ ಸಲ್ಲಿಕೆ
Edited By:

Updated on: Feb 11, 2026 | 2:46 PM

ಬೆಂಗಳೂರು, ಫೆಬ್ರವರಿ 11: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಜಾರಿಯಲ್ಲಿರುವ ‘ನಲಿ ಕಲಿ’ (Nali-Kali) ಯೋಜನೆ ಮಕ್ಕಳ ಉದ್ದೇಶಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗಂಭೀರ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತು ಸಮಗ್ರ ವರದಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಲ್ಲಿಸಲಾಗಿದೆ.

1995-96ರಲ್ಲಿ ಮೈಸೂರು ಜಿಲ್ಲೆಯ ಹೆಗ್ಗಡದೇವನ ಕೋಟೆಯಲ್ಲಿ ಪ್ರಾಯೋಗಿಕವಾಗಿ ಆರಂಭವಾದ ನಲಿ ಕಲಿ ಯೋಜನೆ, 2010-11ರಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ ವಿಸ್ತರಿಸಲಾಯಿತು. ಮಕ್ಕಳಿಗೆ ಚಟುವಟಿಕೆ ಆಧಾರಿತ ಹಾಗೂ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ನೀಡುವುದು, ಭಾಷಾ ಕೌಶಲ್ಯವನ್ನು ವೃದ್ಧಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿತ್ತು. ಆದರೆ ಕಾಲಕ್ರಮೇಣ ಯೋಜನೆ ಪರಿಣಾಮಕಾರಿತ್ವ ಕಳೆದುಕೊಂಡಿದೆ ಎಂದು ವರದಿ ಸೂಚಿಸಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಈ ಬಗ್ಗೆ ಮಾಡಿದ ಎಕ್ಸ್ ಪೋಸ್ಟ್ ಇಲ್ಲಿದೆ


ಶಿಕ್ಷಕರಿಗೆ ಸಮರ್ಪಕ ತರಬೇತಿ ಕೊರತೆ, ಬಹುತರಗತಿ ನಿರ್ವಹಣೆಯಲ್ಲಿ ಸಮಸ್ಯೆಗಳು, ಹೆಚ್ಚಿನ ವಿದ್ಯಾರ್ಥಿಗಳ ಕಾರಣ ವೈಯಕ್ತಿಕ ಗಮನದ ಅಭಾವ, ಅಗತ್ಯ ಕಲಿಕಾ ಸಾಮಗ್ರಿಗಳ ಕೊರತೆ ಹಾಗೂ ಮೂಲಭೂತ ಸೌಕರ್ಯಗಳ ಅಭಾವ ಪ್ರಮುಖ ಕಾರಣಗಳಾಗಿವೆ. ಮೌಲ್ಯಮಾಪನ ವ್ಯವಸ್ಥೆಯಲ್ಲಿನ ದೋಷಗಳು ಮತ್ತು ಮೂರನೇ ತರಗತಿಯ ನಂತರ ವಿದ್ಯಾರ್ಥಿಗಳಿಗೆ ಹೊಂದಾಣಿಕೆ ಸಮಸ್ಯೆಯೂ ಕಂಡುಬಂದಿದೆ.

ಇದನ್ನೂ ಓದಿ ಮುಂದಿನ ಶೈಕ್ಷಣಿಕ ವರ್ಷಕ್ಕೆ 10 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

ಮೂರು ತರಗತಿಗಳಿಗೆ ಒಬ್ಬ ಶಿಕ್ಷಕ ಎಂಬ ವ್ಯವಸ್ಥೆಗೆ ಪೋಷಕರಿಂದ ಆಕ್ರೋಶ ವ್ಯಕ್ತವಾಗಿದೆ. ಭಾಷಾ ಕಲಿಕೆಯ ಗುಣಮಟ್ಟ ಹೆಚ್ಚಳವಾಗಿಲ್ಲ ಎಂಬ ಅಸಮಾಧಾನವೂ ವ್ಯಕ್ತವಾಗಿದೆ. ಈ ಎಲ್ಲಾ ಕಾರಣಗಳಿಂದ ಸರ್ಕಾರಿ ಶಾಲೆಗಳ ಮೇಲಿನ ನಂಬಿಕೆ ಕುಸಿದು, ಪೋಷಕರು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:45 pm, Wed, 11 February 26