ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ; ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು
ಕೊರೊನಾ ವೇಳೆ ಆಕ್ಸಿಜನ್ ನೀಡಿರಲಿಲ್ಲ ಎಂದು ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ತಿರುಗೇಟು ಕೊಟ್ಟಿದ್ದಾರೆ. ದೇಶದಲ್ಲಿ ಹಿಂದೆ ಮಲೇರಿಯಾ ಸೇರಿ ಹಲವು ರೋಗ ಹರಡಿದ್ದವು. ಆಗ ಆಸ್ಪತ್ರೆಗಳಲ್ಲಿ ಆಕ್ಸಿಜನ್ಗಳನ್ನು ನೀಡಿರಲಿಲ್ಲ.
ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನದ(International Yoga Day 2022) ಹಿನ್ನೆಲೆ ಬಿಜೆಪಿ ರಾಜ್ಯ ಕಚೇರಿ ಮುಂಭಾಗ ಯೋಗ ದಿನಾಚರಣೆ ಕಾರ್ಯಕ್ರಮ ನಡೆದಿದ್ದು ಕಾರ್ಯಕ್ರಮದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು(Nalin Kumar Kateel) ಮಾತನಾಡಿ ಸಿದ್ದರಾಮಯ್ಯ(Siddaramaiah) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೊರೊನಾ ವೇಳೆ ಆಕ್ಸಿಜನ್ ನೀಡಿರಲಿಲ್ಲ ಎಂದು ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ತಿರುಗೇಟು ಕೊಟ್ಟಿದ್ದಾರೆ. ದೇಶದಲ್ಲಿ ಹಿಂದೆ ಮಲೇರಿಯಾ ಸೇರಿ ಹಲವು ರೋಗ ಹರಡಿದ್ದವು. ಆಗ ಆಸ್ಪತ್ರೆಗಳಲ್ಲಿ ಆಕ್ಸಿಜನ್ಗಳನ್ನು ನೀಡಿರಲಿಲ್ಲ. ಅಂದಿನ ಕಾಂಗ್ರೆಸ್ ಸರ್ಕಾರ ಯಾವುದೇ ಸೌಲಭ್ಯ ಒದಗಿಸಿರಲಿಲ್ಲ. ಇಂದು ನಾವು ಆಸ್ಪತ್ರೆಗಳಿಗೆ ಮೂಲಸೌಕರ್ಯ ಕಲ್ಪಿಸಿದ್ದೇವೆ. ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿರುಗೇಟು ಕೊಟ್ಟಿದ್ದಾರೆ.
ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯ ನಿಷ್ಣಾತರು ಕೊರೊನಾ ವೇಳೆ ರಾಜ್ಯಕ್ಕೆ ಆಕ್ಸಿಜನ್ ನೀಡಿಲ್ಲ ಎಂಬ ಹೇಳಿಕೆಗೆ ಬಿಜೆಪಿ ನಾಯಕ ಸಿ.ಟಿ.ರವಿ ಕೂಡ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು. ಸತ್ಯ ಮತ್ತು ಸಿದ್ದರಾಮಯ್ಯ ಎಣ್ಣೆ, ಸೀಗೆಕಾಯಿ ಇದ್ದಂತೆ. ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯ ನಿಷ್ಣಾತರು. ಸುಳ್ಳು ಪ್ರಶಸ್ತಿ ನೀಡೋದಾದರೆ ಸಿದ್ದರಾಮಯ್ಯಗೆ ನೀಡಬಹುದು. ಸಿದ್ದರಾಮಯ್ಯ 5 ವರ್ಷ ಆಡಳಿತ ನಡೆಸಿದ್ರು. ಆಗ ಆಸ್ಪತ್ರೆಗಳಿಗೆ ಆಕ್ಸಿಜನ್ ಪ್ಲ್ಯಾಂಟ್ ಏನಾದ್ರೂ ಹಾಕಿದ್ರಾ? ನಮ್ಮ ಸರ್ಕಾರ ಪ್ರತಿ ಆಸ್ಪತ್ರೆಗೆ ಆಕ್ಸಿಜನ್ ಪ್ಲ್ಯಾಂಟ್ ಹಾಕಿದ್ದೇವೆ. ಇಲ್ಲದಿದ್ದರೆ ಸಾವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುತ್ತಿತ್ತು. ಎಲ್ಲರಿಗೂ ಕೊರೊನಾ ಲಸಿಕೆ ನೀಡಲಾಯ್ತು. ಸಿದ್ದರಾಮಯ್ಯ ಲಸಿಕೆ ಹಾಕಿಸಿಕೊಳ್ಳದಿದ್ರೆ ಏನಾಗ್ತಿತ್ತು ಊಹಿಸಲಿ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ನಾಯಕ ಸಿ.ಟಿ.ರವಿ ಸಿದ್ದು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯನವರಿಗೆ ಟೀಕೆಗೆ ಯಾವುದೇ ಅರ್ಥವಿಲ್ಲ ಇನ್ನು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೂಡ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ನವರು ಎಲ್ಲರದಲ್ಲೂ ಟೀಕೆ ಮಾಡ್ತಾರೆ. ಪ್ರಧಾನಿ ಮೋದಿ ರಾಜ್ಯಕ್ಕೆ ಬಂದಿರೋದಕ್ಕೂ ಆರೋಪ ಮಾಡ್ತಾರೆ. ಸಿದ್ದರಾಮಯ್ಯನವರಿಗೆ ಟೀಕೆಗೆ ಯಾವುದೇ ಅರ್ಥವಿಲ್ಲ. ಅವತ್ತು ಕೊರೊನಾ ಉಲ್ಬಣ ಆಗ್ತಿದ್ರು ಪಾದಯಾತ್ರೆ ಮಾಡಿದ್ರು ಆಗ ಯಾವ ಕೊರೊನಾ ಬರೋದಿಲ್ಲ. ಆರೋಗ್ಯದ ದೃಷ್ಟಿಯಿಂದ ಯೋಗ ದಿನಾಚರಣೆ ಮಾಡಲಾಗ್ತಿದೆ ಎಂದರು. ಇದನ್ನೂ ಓದಿ: Assam Tea: ನೀವು ಚಹಾ ಪ್ರಿಯರಾ?; 1 ಲಕ್ಷ ರೂ.ಗೆ ಮಾರಾಟವಾಯ್ತು ಅಪರೂಪದ ಅಸ್ಸಾಂ ಟೀ!
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 9:16 am, Tue, 21 June 22