ಮಂಗಳೂರು – ಮಡಗಾಂ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧ; ನಳಿನ್ ಕುಮಾರ್ ಕಟೀಲ್
ಮಂಗಳೂರು - ಮಡ್ಗಾಂ ವಂದೇ ಭಾರತ್ ರೈಲು(Vande Bharat Train)ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin Kumar Kateel) ಹೇಳಿದರು.
ಬೆಂಗಳೂರು, ನ.08: ಮಂಗಳೂರು – ಮಡ್ಗಾಂ ವಂದೇ ಭಾರತ್ ರೈಲು(Vande Bharat Train)ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin Kumar Kateel) ಹೇಳಿದರು. ಇನ್ನು ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲಿಯೇ ಅದು ಕೂಡ ಈಡೇರಲಿದೆ. ಈ ಸಿಹಿಸುದ್ದಿಗಾಗಿ ಜಿಲ್ಲೆಯ ನಾಗರಿಕರ ಪರವಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
ಮಂಗಳೂರು – ಮಡಗಾಂ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ. ಇನ್ನು ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲಿ ಅದು ಕೂಡ ಈಡೇರಲಿದೆ. ಈ ಸಿಹಿಸುದ್ದಿಗಾಗಿ ಜಿಲ್ಲೆಯ ನಾಗರಿಕರ ಪರವಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದಗಳು. pic.twitter.com/5zRooOuRhy
— Nalinkumar Kateel (@nalinkateel) November 7, 2023
ಈ ಹಿಂದೆ ಕೇರಳದಲ್ಲಿ ಸಂಚರಿಸುವ ವಂದೇ ಭಾರತ್ ರೈಲನ್ನು ಮಂಗಳೂರಿನವರೆಗೆ ಸಂಚಾರ ನಡೆಸುವ ಚಿಂತನೆ ಮಾಡಲಾಗಿತ್ತು. ಇದರ ಜೊತೆಗೆ ಮಂಗಳೂರು-ಎರ್ನಾಕುಲಂ ಹಾಗೂ ಮಂಗಳೂರು-ಮಡಗಾಂ ನಡುವೆ ಸಂಚರಿಸಲು ಪ್ರಸ್ತಾವನೆ ಕೂಡ ಇತ್ತು. ಇದೀಗ ನಳಿನ್ ಕುಮಾರ್ ಕುಮಾರ್ ಕಟೀಲ್ ಅವರು ಮಾಡಿದ ಟ್ವೀಟ್, ಸಧ್ಯ ಕರ್ನಾಟಕದವರಿಗೆ ಸಂತಸವನ್ನುಂಟು ಮಾಡಿದೆ.
ಇದನ್ನೂ ಓದಿ:ಚಲಿಸುತ್ತಿರುವ ವಂದೇ ಭಾರತ್ ರೈಲು ಹತ್ತಲು ಹೋಗಿ ಬಿದ್ದ ಪ್ರಯಾಣಿಕನನ್ನು ರಕ್ಷಿಸಿದ ಆರ್ಪಿಎಫ್ ಸಿಬ್ಬಂದಿ
ಇನ್ನು ರಾಜ್ಯದಲ್ಲಿ 2022ರಲ್ಲಿ ಮೈಸೂರು-ಬೆಂಗಳೂರು-ಚೆನ್ನೈ ನಡುವೆ ಮೊದಲ ವಂದೇ ಭಾರತ್ ರೈಲು ಸಂಚಾರ ಶುವಾಗಿತ್ತು. ಇದಾದ ಬಳಿಕ ಅಂದರೆ, 2023 ರಲ್ಲಿ ಬೆಂಗಳೂರು-ಧಾರವಾಡ- ಹುಬ್ಬಳ್ಳಿ ಹಾಗೂ ಯಶವಂತಪುರ-ಕಾಚಿಗುಡ ನಡುವೇ ರೈಲು ಸಂಚರಿಸಿದವು. ಈ ಮೂಲಕ ಕರ್ನಾಟಕದಲ್ಲಿ ಮೂರು ವಂದೇ ಭಾರತ್ ರೈಲುಗಳು ಸಂಚಾರ ನಡೆಸುತ್ತಿವೆ. ಇದೀಗ ಮಂಗಳೂರು – ಮಡ್ಗಾಂ ಶುರುವಾದರೆ ನಾಲ್ಕನೇಯದ್ದಾಗಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ